Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಸುಗಳಿಗೆ ಕಡ್ಡಾಯ ಕಾಲುಬಾಯಿ ಜ್ವರ ಲಸಿಕೆ ಹಾಕಿಸಿ : ಶರತ್‌ಬಚ್ಚೇಗೌಡ

ಸುದ್ದಿಮೂಲ ವಾರ್ತೆ

ಹೊಸಕೋಟೆ,ಸೆ.26: ಪಶುಪಾಲನೆ ಮಾಡುವ ಹಾಗೂ ಹೈನುಗಾರಿಕೆ ಅವಲಂಬಿತ ರೈತಾಪಿ ವರ್ಗ ಯಾವುದೇ ಮೂಡನಂಬಿಕೆಗೆ ಓಳಗಾಗದೆ ಕಡ್ಡಾಯವಾಗಿ ಕಾಲುಬಾಯಿ ಜ್ವರ ಲಸಿಕೆ ಹಾಕಿಸಿ ಎಂದು ಶಾಸಕ ಶರತ್‌ಬಚ್ಚೇಗೌಡ ಕರೆ ನೀಡಿದರು.

ಹೊಸಕೋಟೆ ತಾಲ್ಲೂಕಿನ ದೊಡ್ಡಹರಳಗೆರೆ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ನ್ಯಾಷನಲ್ ಅನಿಮಲ್ ಡಿಸಿಸ್ ಕಂಟ್ರೋಲ್ ಪ್ರೋಗ್ರಾಮ್ ಅಡಿಯಲ್ಲಿ 4ನೇ ಸುತ್ತಿನ ಕಾಲುಬಾಯಿ ಜ್ವರ ರೋಗದ ವಿರುದ್ದ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಹೊಸಕೋಟೆ ತಾಲ್ಲೂಕಿನ ಪಶುಪಾಲನ ಇಲಾಖೆ ಹಾಗೂ ಬೆಂಗಳೂರು ಹಾಲು ಒಕ್ಕೂಟದ ಸಂಯುಕ್ತ ಅಶ್ರಯದಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದ್ದು ಸೆ.26 ರಿಂದ ಅ. 10 ರವರೆಗೆ ಈ ಕಾರ್ಯಕ್ರಮ ಜಾರಿಯಲ್ಲಿರುತ್ತದೆ. ಕಡ್ಡಾಯವಾಗಿ ರೈತಬಾಂಧವರು ಕಡ್ಡಾಯವಾಗಿ ಲಸಿಕೆ ಹಾಕಿಸುವ ಮೂಲಕ ಪ್ರಯೋಜನ ಪಡೆಯಬೇಕಾಗಿದೆ ಎಂದರು.

ಪಶುಪಾಲನೆ ಇಲಾಖೆ ಸಹಾಯಕ ನಿರ್ದೇಶಕ ನಾರಾಯಣಸ್ವಾಮಿ ಮಾತನಾಡಿ, 4ನೇ ಸುತ್ತಿನ ಕಾರ್ಯಕ್ರಮ ರಾಜ್ಯಾದ್ಯಂತ ಏಕಕಾಲದಲ್ಲಿ ಚಾಲನೆಗೊಂಡಿದ್ದು, ಪಶುಸಾಕಾಣಿಕೆದಾರರು ಯಾವುದೇ ಸಂಶಯವಿಲ್ಲದೇ ನಿಮ್ಮ ದನ, ಕರುಗಳಿಗೆ ಲಸಿಕೆ ಹಾಕಿಸಿ ರೋಗ ಮುಕ್ತ ಹೊಸಕೋಟೆ ಮಾಡಬೇಕಾಗಿ ಕೋರಿದರು.

ಹೊಸಕೋಟೆ ತಾಲ್ಲೂಕಿನಲ್ಲಿ 33348 ರಾಸುಗಳಿದ್ದು 248 ಗ್ರಾಮಗಳಲ್ಲಿ 4 ತಂಡಗಳ ಮೂಲಕ 25 ಮೇಲ್ವಿಚಾರಕರು 60 ಜನ ವೈಧ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ ಎಂದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ