Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸುಳ್ಳು ಗ್ಯಾರೆಂಟಿಯ ಪ್ರಣಾಳಿಕೆ ನಮ್ಮದಲ್ಲ: ಸಚಿವ ಸುಧಾಕರ್

ಸುದ್ದಿಮೂಲ ವಾರ್ತೆ
ಬೆಂಗಳೂರು, ಏ.10: ಬಿಜೆಪಿಯ ಪ್ರಣಾಳಿಕೆ ರಾಮರಾಜ್ಯದ ಪರಿಕಲ್ಪನೆಯಲ್ಲಿ ಇರಲಿದ್ದು, ರಾಜ್ಯದ ಆರ್ಥಿಕ ಸ್ಥಿತಿ ಮತ್ತು ಶಕ್ತಿಯನ್ನು ಆಧರಿಸಿ ಅಭಿವೃದ್ಧಿಗೆ ಪೂರಕವಾಗಿರಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದ್ದಾರೆ.

ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಪ್ರಣಾಳಿಕೆ ಅಭಿಯಾನ ಸಲಹಾ ಸಮಿತಿ ಸಭೆಯ ಬಳಿಕ ಮಾತನಾಡಿದ ಅವರು, ಪ್ರತಿ ಜಿಲ್ಲೆ, ತಾಲೂಕುಗಳಲ್ಲಿ ಸಲಹಾ ಪೆಟ್ಟಿಗೆಗಳನ್ನು ಇಡಲಾಗಿತ್ತು. ಅದೆಲ್ಲವನ್ನೂ ತರಿಸಿಕೊಂಡು ತಾಲೂಕುವಾರು, ಜಿಲ್ಲಾವಾರು ಸಲಹೆಗಳನ್ನು ತೆಗೆದುಕೊಂಡು ಡಿಜಿಟಲೈಸ್‌ ಮಾಡಲಾಗಿದೆ. ಪ್ರತಿಯೊಂದು ವರ್ಗದ ಜನರ ಅಭಿವೃದ್ಧಿಗೆ ಏನು ಮಾಡಬಹುದು ಅನ್ನುವುದನ್ನು ಚರ್ಚಿಸಿ ಪ್ರಣಾಳಿಕೆ ಸಿದ್ಧವಾಗಲಿದೆ ಎಂದರು.

ಪ್ರಣಾಳಿಕೆ ಸಮಿತಿಯಲ್ಲಿ ವಿಷಯವಾರು ತಜ್ಞರು ಸೇರಿದಂತೆ 32 ಎಕ್ಸ್‌ಪರ್ಟ್‌ಗಳಿದ್ದಾರೆ. ಇವರ ಜೊತೆ ಸಮಾಲೋಚನೆ ನಡೆಸಿ, ಕರ್ನಾಟಕದ ಪ್ರಣಾಳಿಕೆ ಇಡೀ ದೇಶಕ್ಕೆ ಮಾದರಿಯಾಗಿ, ಸಮಗ್ರವಾಗಿರಲಿದೆ. ಹೊಸತನ ಮತ್ತು ಬದುಕು ಕಟ್ಟಿಕೊಡುವ, ನೈಜತೆಯಿಂದ ಕೂಡಿರುವ ಪ್ರಣಾಳಿಕೆ ಇದಾಗಿರಲಿದೆ ಎಂದು ತಿಳಿಸಿದರು.

ಬಿಜೆಪಿಯ ಪ್ರಣಾಳಿಕೆ ಕೇವಲ ಘೋಷಣೆಗೆ ಸೀಮಿತವಾಗದೆ 5 ವರ್ಷಗಳಲ್ಲಿ ನಮ್ಮ ಸರ್ಕಾರ ಮಾಡಬೇಕಾಗಿರುವ, ಮಾಡಬಹುದಾದ ಅಭಿವೃದ್ಧಿಯ ಬ್ಲೂ ಪ್ರಿಂಟ್‌ ಆಗಲಿರಲಿದೆ. ಮುಂದಿನ 7 ದಿನಗಳ ಒಳಗೆ ಪ್ರಣಾಳಿಕೆ ಬಿಡುಗಡೆಯಾಗಲಿದ್ದು, ಗ್ರೇಟರ್‌ ಬೆಂಗಳೂರು, ಕರಾವಳಿ ಪ್ರದೇಶ, ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ, ಹಳೆ ಮೈಸೂರು ಹೀಗೆ ವಲಯವಾರು, ಜಿಲ್ಲಾವಾರು ಪ್ರಣಾಳಿಕೆ ಮಾಡಲು ಅವಕಾಶವಿದೆ ಎಂದರು.

Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ