Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಎಸ್‌ವೈ ಅವರನ್ನು ಬಿಟ್ಟು ಹಲವು ಸಭೆಗಳು

ಸುದ್ದಿಮೂಲ ವಾರ್ತೆ

ಬೆಂಗಳೂರು.ಏ.11: ಇನ್ನು ಕರ್ನಾಟಕ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಸಂಸದೀಯ ಮಂಡಳಿಯ ಸದಸ್ಯರೂ ಆಗಿರುವ ಬಿ.ಎಸ್. ಯಡಿಯೂರಪ್ಪ ಅವರನ್ನು ಬಿಟ್ಟು ಬಿಜೆಪಿ ಹೈಕಮಾಂಡ್ ನಾಯಕರು ಹಲವು ಸಭೆಗಳನ್ನು ಮಾಡಿರುವುದು ಹಲವು ಚರ್ಚೆಗಳಿಗೆ ಕಾರಣವಾಗುತ್ತಿದೆ.

ಅಭ್ಯರ್ಥಿಗಳ ಆಯ್ಕೆ ಸಂಬಂಧ ಶನಿವಾರವೇ ನವದೆಹಲಿಗೆ ತೆರಳಿದ್ದ ಯಡಿಯೂರಪ್ಪ ಅವರು ಸೋಮವಾರ ಸಂಜೆ ನವದೆಹಲಿಯಿಂದ ಬೆಂಗಳೂರಿಗೆ ಮರಳಿದ್ದಾರೆ. ಅವರು ಮರಳಿದ ಬಳಿಕ ಅಮಿತ್‌ಶಾ, ಜೆ.ಪಿ. ನಡ್ಡಾ ಹಲವು ಸಭೆಗಳನ್ನು ನಡೆಸಿದ್ದಾರೆ. ಹೀಗೆ ಸಂಸದೀಯ ಮಂಡಳಿಯ ಸದಸ್ಯರನ್ನು ಕಳುಹಿಸಿ ಟಿಕೆಟ್ ಹಂಚಿಕೆ ಸಂಬಂಧ ಸಭೆಗಳನ್ನು ನಡೆಸುವುದರ ಔಚಿತ್ಯವೇನು ಎಂಬ ಪ್ರಶ್ನೆ ಹಲವರನ್ನು ಕಾಡುತ್ತಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಎಸ್‌ವೈ ಅವರನ್ನು ಬಿಜೆಪಿ ಸಭೆಯಲ್ಲಿ ಯಡಿಯೂರಪ್ಪ ಅವರಿಗೆ ಖುರ್ಚಿ ಇಲ್ಲವೇ? ಯಡಿಯೂರಪ್ಪ ಅವರು ಇಲ್ಲದೆ ಕರ್ನಾಟಕ ಬಿಜೆಪಿ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುತ್ತದೆಯೇ? ಇದು ಲಿಂಗಾಯತ ನಾಯಕರಿಗೆ ಅವಮಾನವಲ್ಲವೇ? ಯಡಿಯೂರಪ್ಪ ಅವರನ್ನು ಟಿಶ್ಯೂ ಪೇಪರ್ ರೀತಿ ಉಪಯೋಗಿಸಿದ್ದಾರೆ ಎಂದು ಆರೋಪಿಸಿದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ