Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೂಲಭೂತ ಸೌಕರ್ಯ ಕಲ್ಪಿಸುವಲ್ಲಿ ವಿಫಲ: ಮಾರಸಂದ್ರ ಮುನಿಯಪ್ಪ ಆಕ್ರೋಶ

ಸುದ್ದಿಮೂಲ ವಾರ್ತೆ

ದೇವನಹಳ್ಳಿ, ಜು 17 : ಈಗೀನ ರಾಜ್ಯ ಕಾಂಗ್ರೆಸ್ ಸರಕಾರ ಬಡವರಿಗೆ ನಿವೇಶನ ಹಂಚಿಕೆ, ಉತ್ತಮ ಶಿಕ್ಷಣ, ನಿರುದ್ಯೋಗಿಗಳಿಗೆ ಉದ್ಯೋಗ ಸೃಷ್ಠಿ ಮತ್ತು ಜನರಿಗೆ ಅತೀ ಮುಖ್ಯವಾದ ಮೂಲಭೂತ ಸೌಕರ್ಯ ಒದಗಿಸಿಕೊಡಬೇಕೆಂದು ಬಹುಜನ ಸಮಾಜ ಪಾರ್ಟಿಯ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ ಒತ್ತಾಯಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬಹುಜನ ಸಮಾಜ ಪಾರ್ಟಿಯ ವತಿಯಿಂದ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಕಾನ್ಷಿರಾಂ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ಸರ್ಕಾರಗಳು ಬಡವರಿಗೆ ಮತ್ತು ಮದ್ಯಮ ವರ್ಗದ ಜನರಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡುವುದರಲ್ಲಿ ವಿಫಲವಾಗಿವೆ. ಬಿಜೆಪಿ ಪಕ್ಷವು ರಾಜ್ಯದಲ್ಲಿ 4 ವರ್ಷ ಅಧಿಕಾರದಲ್ಲಿ ದುರಾಡಳಿತ ನಡೆಸಿದೆ. ಇವರ ಅವಧಿಯಲ್ಲಿ ಮುಸಲ್ಮಾನರ ಕೊಲೆಗಳು, ಕ್ರಿಶ್ಚಿಯನ್ನರ ಮೇಲೆ ಹಲ್ಲೆಗಳು, ಚರ್ಚ್ಗಳ ಮೇಲೆ ಹಲ್ಲೆಗಳು, ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಹೀಗೆ ಹಲವಾರು ಘಟನೆಗಳು ನಡೆದಿದೆ ಎಂದು ಬಿಜೆಪಿಯ ಆಡಳಿತ ವೈಖರಿ ವಿರುದ್ಧ ಬಿಎಸ್‌ಪಿ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ ವಾಗ್ದಾಳಿ ನಡೆಸಿದರು.

ರಾಜ್ಯ ಬಿಎಸ್‌ಪಿ ಕಾರ್ಯದರ್ಶಿ ನಂದಿಗುಂದ.ಪಿ.ವೆಂಕಟೇಶ್ ಮಾತನಾಡಿ, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳಿಗೆ ಮೀಸಲಿಟ್ಟ ಜಮೀನುಗಳ ಬಗ್ಗೆ ಸುಮಾರು ಪ್ರಕರಣಗಳನ್ನು ಜಿಲ್ಲಾಧಿಕಾರಿಗಳು ವಜಾಗೊಳಿಸಿರುತ್ತಾರೆ. ಪಿಟಿಸಿಎಲ್ ಆಕ್ಟ್ ತಿದ್ದುಪಡಿಯನ್ನು ಅತೀ ಜರೂರಾಗಿ ಮಾಡಬೇಕೆಂದು ಸರಕಾರಕ್ಕೆ ಒತ್ತಾಯಿಸಿದರು.

ಇದೇ ಸಂದರ್ಭದಲ್ಲಿ ರಾಜ್ಯ ಬಿಎಸ್‌ಪಿ ಕಾರ್ಯದರ್ಶಿ ಬಸವರಾಜು, ಜಿಲ್ಲಾಧ್ಯಕ್ಷ ಎಂ.ಮಹದೇವ್, ತಿಮ್ಮರಾಜು, ಜಿಲ್ಲಾ ಕಾರ್ಯದರ್ಶಿ ಗೋಪಾಲ್, ದ್ಯಾವಪ್ಪ, ರಮಾದೇವಿ, ಹೇಮಾ ಚಕ್ರಪಾಣಿ, ಲಕ್ಷ್ಮೀ ನಾರಾಯಣ್, ಪಿಳ್ಳಪ್ಪ, ಸುವರ್ಣ ಸೇರಿದಂತೆ ಪದಾಧಿಕಾರಿಗಳುಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ