Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸೌಜನ್ಯ ಸಾವಿಗೆ ನ್ಯಾಯಕ್ಕಾಗಿ ಪಾದಯಾತ್ರೆ

ಸುದ್ದಿಮೂಲವಾರ್ತೆ

ಕೊಪ್ಪಳ ಆ 19: ಧರ್ಮಸ್ಥಳದಲ್ಲಿ 2012ರಲ್ಲಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಯುವತಿ ಸೌಜನ್ಯ ಸಾವಿಗೆ ನ್ಯಾಯ ಸಿಗುವಂತೆ ಒತ್ತಾಯಿಸಿ ಆ.26ರಿಂದ ಬೆಳ್ತಂಗಡಿಯಿಂದ ಬೆಂಗಳೂರುವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಕೆಆರ್ ಎಸ್ ಪಕ್ಷದ ಕೊಪ್ಪಳ ಜಿಲ್ಲಾಧ್ಯಕ್ಷೆ ಆಶಾ ವಿರೇಶ ತಿಳಿಸಿದರು.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಅವರು‌ ಮಾತನಾಡಿದರು.

ಪಕ್ಷದ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ ನೇತೃತ್ವದಲ್ಲಿ ಆಗಷ್ಟ್ 26ರಂದು ಆರಂಭವಾಗುವ 14 ದಿನಗಳ ಪಾದಯಾತ್ರೆ ಸೆಪ್ಟೆಂಬರ್‌ 7ರಂದು ಬೆಂಗಳೂರಿನ ವಿಧಾನಸೌಧ ತಲುಪಲಿದೆ ಎಂದರು.

ಸೌಜನ್ಯ ಸಾವು ವಿಶೇಷ ಪ್ರಕರಣವೆಂದು ಪರಿಗಣಿಸಿ ಮರುತನಿಖೆ ನಡೆಸಲು ಕ್ರಮ‌ ಕೈಗೊಳ್ಳಬೇಕು. ರಾಜ್ಯದಲ್ಲಿ ಮಕ್ಕಳ ‌ಮತ್ತು ಮಹಿಳೆಯರ ಮೇಲಿನ ಅತ್ಯಾಚಾರಗಳು, ಕೊಲೆ ಪ್ರಕರಣಗಳ ಶೀಘ್ರ ವಿಲೇವಾರಿಗೆ ವಿಶೇಷ ತ್ವರಿತ ನ್ಯಾಯಾಲಯಗಳನ್ನು ಸ್ಥಾಪಿಸಬೇಕು. ಇಂತ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ಮತ್ತು ಕುಟುಂಬಸ್ಥರಿಗೆ ಮಾನಸಿಕ, ಅರ್ಥಿಕ ಸಹಾಯ‌ ನೀಡುವ ನಿಟ್ಟಿನಲ್ಲಿ ತನಿಖೆ ಹಾಗೂ ನ್ಯಾಯಾಲಯದಲ್ಲಿನ ವಿಚಾರಣೆ ಪ್ರಗತಿಯನ್ನು ಕಾಲಕಾಲಕ್ಕೆ ಪರಿಶೀಲಿಸುವ ವ್ಯವಸ್ಥೆಗಾಗಿ 'ಸೌಜನ್ಯ ಮಹಿಳಾ ಸುರಕ್ಷ ಆಯೋಗ' ಸ್ಥಾಪಿಸಬೇಕು. ಮಾನವ ಕಳ್ಳ ಸಾಗಾಣಿಕೆ ಪ್ರಕರಣಗಳ ತನಿಖೆಗೆ ಸಿಐಡಿ‌ ಮಾದರಿಯಲ್ಲಿ ಪಡೆಯನ್ನು ಸೃಜಿಸಬೇಕು ಹಾಗೂ ಅತ್ಯಾಚಾರ, ಕೊಲೆ ಘಟನೆಗಳು ಜರುಗದಂತೆ ಸರಕಾರ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗುವುದು ಎಂದು ಹೇಳಿದರು.

ರಾಜ್ಯ ಸರಕಾರ ಗ್ಯಾರಂಟಿ ಯೋಜನೆಗಳನ್ನು ನೀಡುತ್ತಿರುವುದು ಸ್ವಾಗತ. ಆದರೆ, ಈ ಯೋಜನೆಗಳು ನಿರಂತರವಾಗಿ‌ ಮುಂದುವರೆಯಬೇಕಾದರೆ ಸಂಪನ್ಮೂಲ ಕ್ರೋಡೀಕರಣ ಅವಶ್ಯಕವಾಗಿದ್ದು, ಅಭಿವೃದ್ಧಿ ಯೋಜನೆಗಳು ಕುಂಠಿತವಾಗದಂತೆ ನೋಡಿಕೊಳ್ಳಬೇಕು ಎಂದರು.

ಈ ವೇಳೆ ಕೆಆರ್ ಎಸ್ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ.ಎಚ್ ಗೊಡಚಳ್ಳಿ ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ