Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಂಜಾರ ಸಮುದಾಯದಿಂದ ಒಳ ಮೀಸಲಾತಿ ವಿರೋಧಿಸಿ ಏಪ್ರಿಲ್ ೬ರಂದು ಬೃಹತ್ ಪ್ರತಿಭಟನೆ

ಸುದ್ದಿಮೂಲ ವಾರ್ತೆ ,

ಚಿತ್ತಾಪುರ ಏ೦೪: ಬಂಜಾರ ಸಮಾಜದ ಸಾಧು ಸಂತ ಮಹಾರಾಜದ ಆದೇಶದ ಮೇರೆಗೆ ಒಳ ಮೀಸಲಾತಿ ರದ್ದು ಮಾಡಿ ಬಂಜಾರ ಸಮಾಜಕ್ಕೆ ನ್ಯಾಯ ನೀಡಬೇಕು ಎಂದು ಒತ್ತಾಯಿಸಿ ಏ. ೬ ರಂದು ಚಿತ್ತಾಪುರ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಬಂಜಾರ ಸಮಾಜ ತಾಲೂಕು ಅಧ್ಯಕ್ಷ ಭೀಮಸಿಂಗ್ ಚವ್ಹಾಣ ಹಾಗೂ ಪುರಸಭೆ ಸದಸ್ಯ ಜಗದೀಶ ಚವ್ಹಾಣ ತಿಳಿಸಿದ್ದಾರೆ.

ಪಟ್ಟಣದಲ್ಲಿ ಸುದ್ದಿಗೊಷ್ಟಿಯಲ್ಲಿ ಮಾತನಾಡಿದ ಅವರು ಕೇಂದ್ರ ಸರ್ಕಾರವು ರಾಜ್ಯ ಮತ್ತು ಬಂಜಾರ ಸಮಾಜದಕ್ಕೆ ಅನ್ಯಾಯವನ್ನು ಮಾಡಿದ್ದು ಒಳಮೀಸಲಾತಿಯಲ್ಲಿ ಬಂಜಾರ ಸಮಾಜಕ್ಕೆ ಅನ್ಯಾಯವಾಗಿದ್ದು ಈ ಮೀಸಲಾತಿಯನ್ನು ರದ್ದು ಮಾಡಬೇಕು ಎಂದು ಒತ್ತಾಯಿಸಿ ಎ. ೬ರಂದು ಪಟ್ಟಣದ ಚಿತ್ತಾವಲಿ ಚೌಕ ದಿಂದ ಬೃಹತ್ ಪ್ರತಿಭಟನೆ ಮೆರವಣೆಗೆಯನ್ನು ಹಮ್ಮಿಕೊಂಡಿದ್ದು ಭುವನೇಶ್ವರ ಚೌಕ, ಲಾಡ್ಡಿಂಗ್ ಕ್ರಾಸ ಮುಖಾಂತರ ತಾಲೂಕು ಆಢಳಿತ ಕಚೇರಿವರೆಗೆ ಪ್ರತಿಭಟನೆಯನ್ನು ನಡೆಸಿ ಸರ್ಕಾರಕ್ಕೆ ಮನವಿ ಪತ್ರವನ್ನು ಸಲ್ಲಿಸಲಾಗುವುದು ಎಂದು ತಿಳಿಸಿದರು.

ಪ್ರತಿಭಟನೆಯಲ್ಲಿ ಎಲ್ಲಾ ನಾಯಕರು, ಕಾರಬಾರಿ, ವಿದ್ಯಾರ್ಥಿ ವಿದ್ಯಾರ್ಥಿನಿಯರು, ಸಮಾಜದ ಹಿತ ಚಿಂತಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿ ಪ್ರತಿಭಟನೆಯನ್ನು ಯಶಸ್ವಿಗೊಳಿಸಬೇಕು ಎಂದು ಒತ್ತಾಯಿಸಿದರು. ನಾಮದೇವ ರಾಠೋಡ, ಚಂದು ಜಾಧವ, ನೀಲಕಂಠ ಪವಾರ, ಹರಿಸಿಂಗ್ ರಾಠೋಡ, ವಿಶಾಲ ನಾಯಕ, ವಿಜಯಕುಮಾರ ಚವ್ಹಾಣ, ಸುಭಾಷ್ ಜಾದವ್, ಮಹಾದೇವ ರಾಠೋಡ,ಅಪ್ಪು ಚವ್ಹಾಣ, ಕಪಿಲ್ ಪವಾರ್, ರಾಜು ಚವ್ಹಾಣ, ಭಾರತ ರಾಠೋಡ, ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ