Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಟಮಾರಿ ಗ್ರಾಮ ಪಂಚಾಯತ್ ಕೆಡಿಪಿ ಸಭೆ ಪ್ರತಿಯೊಬ್ಬ ಅಧಿಕಾರಿ ಸೇವಾಮನೋಭಾವದಿಂದ ಕಾರ್ಯನಿರ್ವಹಿಸಲು ಸಲಹೆ

 ಸುದ್ದಿಮೂಲ ವಾರ್ತೆ ರಾಯಚೂರು, ಜ.24:
ತಾಲೂಕಿನ ಮಟಮಾರಿ ಗ್ರಾಾಮ ಪಂಚಾಯತ್ ವತಿಯಿಂದ ಮಟಮಾರಿ ಗ್ರಾಾಮದಲ್ಲಿ ಜನವರಿ 23ರ ಶುಕ್ರವಾರ ದಂದು ಗ್ರಾಾಮ ಪಂಚಾಯತ್ ವಿವಿಧ ಯೋಜನೆಗಳ ಕುರಿತು ತ್ರೈಮಾಸಿಕ ಪ್ರಗತಿ ಪರಿಶೀಲನಾ (ಕೆಡಿಪಿ) ಸಭೆ ಯಶಸ್ವಿಿಯಾಗಿ ನಡೆಯಿತು.
ಸಭೆಯು ಗ್ರಾಾಮ ಪಂಚಾಯತ್ ಅಧ್ಯಕ್ಷೆ ಅಂಬಿಕಾ ಪ್ರಭುರಾಜ ಅವರ ಅಧ್ಯಕ್ಷತೆಯಲ್ಲಿ ಹಾಗೂ ಉಪಾಧ್ಯಕ್ಷರು ಮತ್ತು ಸ್ಥಾಾಯಿ ಸಮಿತಿ ಅಧ್ಯಕ್ಷರಾದ ಹುಸೇನ್ ಬಾಷಾ ಅವರ ಮಾರ್ಗದರ್ಶನದಲ್ಲಿ ನಡೆಸಲಾಯಿತು.
ಸಭೆಯಲ್ಲಿ ಗ್ರಾಾಮ ಪಂಚಾಯತ್ ವ್ಯಾಾಪ್ತಿಿಯ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಕ್ರಮವಾಗಿ ಆಹ್ವಾಾನಿಸಿ, ತಮ್ಮ ತಮ್ಮ ಇಲಾಖೆಗಳ ಪ್ರಗತಿ ವರದಿ, ಮುಂದಿನ ಕಾರ್ಯಯೋಜನೆಗಳು ಹಾಗೂ ಅನುಷ್ಠಾಾನದಲ್ಲಿರುವ ಕಾಮಗಾರಿಗಳ ಸ್ಥಿಿತಿಗತಿಗಳ ಕುರಿತು ಮಾಹಿತಿ ನೀಡಿದರು.
ಈ ವೇಳೆ ಗ್ರಾಾಮ ಪಂಚಾಯತ್ ಉಪಾಧ್ಯಕ್ಷರಾದ ಹುಸೇನ್ ಬಾಷಾ ಅವರು ಮಾತನಾಡಿ, ಸಾರ್ವಜನಿಕರೇ ಸರ್ಕಾರದ ಎಲ್ಲಾ ಇಲಾಖೆಗಳ ಮೂಲಾಧಾರ ಮತ್ತು ಹಕ್ಕುದಾರರು ಎಂಬ ಮನೋಭಾವದಿಂದ ಪ್ರತಿಯೊಬ್ಬ ಅಧಿಕಾರಿ ಸೇವಾಮನೋಭಾವದಿಂದ ಕಾರ್ಯನಿರ್ವಹಿಸಬೇಕು. ಹಾಗೂ ಸರ್ಕಾರದ ಯೋಜನೆಗಳ ಕುರಿತು ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಿಕೊಳ್ಳುವ ಮೂಲಕ ಲಾನುಭವಿಗಳಿಗೆ ಯೋಜನೆಗಳು ತಲುಪುವಂತೆ ಕ್ರಮವಹಿಸಬೇಕು ಎಂದರು.
ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಒದಗಿಸಿದಲ್ಲಿ ಮಾತ್ರ 10ನೇ ತರಗತಿಯಲ್ಲಿ ಉತ್ತಮ ಲಿತಾಂಶ ಸಾಧ್ಯವಾಗುತ್ತದೆ ಎಂದು ಅಭಿಪ್ರಾಾಯಪಟ್ಟರು.
ಸಾರ್ವಜನಿಕರಿಗೆ ಉತ್ತಮ ಚಿಕಿತ್ಸೆೆ, ಸಮಯೋಚಿತ ಸ್ಪಂದನೆ ಹಾಗೂ ರೋಗಿಗಳೊಂದಿಗೆ ಶಿಷ್ಟಾಾಚಾರಪೂರ್ಣ ಮತ್ತು ಮಾನವೀಯ ವರ್ತನೆ ಕಡ್ಡಾಾಯವಾಗಿರಬೇಕು. ಸರ್ಕಾರಿ ಕಚೇರಿ ಆವರಣಗಳು, ಪ್ರಮುಖ ರಸ್ತೆೆ ಬದಿಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಗಿಡ ನೆಡುವ ಕಾರ್ಯಕ್ರಮ ಅಧಿಕಾರಿಗಳು ಪರಿಣಾಮಕಾರಿಯಾಗಿ ಅನುಷ್ಠಾಾನಗೊಳಿಸುವಂತೆ ನಿರ್ದೇಶನ ನೀಡಿದರು.
ಕಂದಾಯ ಇಲಾಖೆಯಿಂದ ಗ್ರಾಾಮ ಲೆಕ್ಕಾಾಧಿಕಾರಿಗಳು ಪಿಂಚಣಿ, ಕೃಷಿ ಭೂಮಿ ವರ್ಗಾವಣೆ ಸೇರಿದಂತೆ ವಿವಿಧ ಕಂದಾಯ ಸೇವೆಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡುವ ಜಾಗೃತಿ ಕಾರ್ಯಕ್ರಮ ನಡೆಸಿ, ಜನರಿಗೆ ಸುಲಭವಾಗಿ ಸೇವೆಗಳು ಲಭ್ಯವಾಗುವಂತೆ ಕ್ರಮವಹಿಸಬೇಕು ಎಂದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಾಣ ಇಲಾಖೆಯಿಂದ ಅಂಗನವಾಡಿ ಮಕ್ಕಳಿಗೆ ಪೌಷ್ಟಿಿಕ ಆಹಾರ ಒದಗಿಸುವುದು, ಗುಣಮಟ್ಟದ ಪೂರ್ವ ಪ್ರಾಾಥಮಿಕ ಶಿಕ್ಷಣ ನೀಡುವುದು. ಹಾಗೂ ಮಹಿಳಾ ಸಬಲೀಕರಣಕ್ಕೆೆ ಸಂಬಂಧಿಸಿದ ಜಾಗೃತಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರುವಂತೆ ಸೂಚಿಸಲಾಯಿತು.
ಸಭೆಯ ಅಂತ್ಯದಲ್ಲಿ ಎಲ್ಲಾಾ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ, ಸಾರ್ವಜನಿಕರ ಹಿತಾಸಕ್ತಿಿಗೆ ಆದ್ಯತೆ ನೀಡುತ್ತ ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾಾನಗೊಳಿಸುವಂತೆ ನಿರ್ದೇಶನ ನೀಡಲಾಯಿತು.
ಈ ಸಭೆಯಲ್ಲಿ ಸಾಮಾಜಿಕ ನ್ಯಾಾಯ ಸ್ಥಾಾಯಿ ಸಮಿತಿ ಅಧ್ಯಕ್ಷ ಹುಲಿಗೆಮ್ಮ ನರಸಣ್ಣ, ಪಂಚಾಯತ್ ಅಭಿವೃದ್ಧಿಿ ಅಧಿಕಾರಿ ಶೇಖರಪ್ಪ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ