Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೈಸೂರಿನಲ್ಲಿ ಅರ್ಥಪೂರ್ಣ ಗಾಂಧಿ ಜಯಂತಿ ಆಚರಣೆ

ಸುದ್ದಿಮೂಲ ವಾರ್ತೆ

ಮೈಸೂರು, ಅ.2:ವಿಶ್ವ ಕಂಡ ಮಹಾನ್ ಮಾನವತಾವಾದಿ, ಸಮತೆಯ ಸಂತ, ಸರಳ ಜೀವನದ ಸಾಕಾರ ಮೂರ್ತಿ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ 154 ನೇ ಜಯಂತಿಯನ್ನು ಭಜನೆ ಹಾಗೂ ಸರ್ವ ಧರ್ಮೀಯ ಪ್ರಾರ್ಥನೆ ಮೂಲಕ ಅರ್ಥ ಪೂರ್ಣವಾಗಿ ಮೈಸೂರು ಜಿಲ್ಲಾದ್ಯಂತ ಸೋಮವಾರ ಆಚರಿಸಲಾಯಿತು.

ಜಿಲ್ಲಾಡಳಿತ, ನಾನಾ ಸಂಘಟನೆಗಳು ಮತ್ತು ರಾಜಕೀಯ ಪಕ್ಷಗಳಿಂದ ಅಹಿಂಸಾ ಪ್ರತಿಪಾದಕನ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಮರ್ಪಣೆ ಮಾಡಲಾಯಿತು.

ಮೈಸೂರು ನಗರದ ಪುರಭವನದಲ್ಲಿ ಜಿಲ್ಲಾಡಳಿತ, ಮೈಸೂರು ಮಹಾನಗರ ಪಾಲಿಕೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಗಾಂಧಿ ಜಯಂತಿ ಆಚರಣೆಯನ್ನು ಗಣ್ಯರು ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ನೆರವೇರಿಸಿದರು.

ವೇದಿಕೆಯಲ್ಲಿ ಗಾಂಧೀಜಿಯವರ ಪ್ರಿಯ ಪ್ರಾರ್ಥನಾ ಗೀತೆಗಳಾದ ವೈಷ್ಣವ ಜನತೋ,ರಘುಪತಿ ರಾಘವ ಗೀತೆಗಳನ್ನು ಹಾಡಲಾಯಿತು. ಧರ್ಮಗುರುಗಳು ವಿವಿಧ ಧರ್ಮಗಳ ಸಂದೇಶಗಳನ್ನು ತಿಳಿಸಿ ಗಾಂಧಿಯವರ ಸತ್ಯ,ಅಹಿಂಸೆ,ಶಾಂತಿ,ಸರ್ವ ಧರ್ಮ ಸಹಿಷ್ಣುತೆಯ ಗುಣಗಳನ್ನು ಅಳವಡಿಸಿಕೊಂಡರೆ ನಮ್ಮ ನಾಡು ಸರ್ವ ಜನಾಂಗದ ಶಾಂತಿಯ ತೋಟವಾಗಲಿದೆ ಎಂದು ಕರೆ ನೀಡಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಏರ್ಪಡಿಸಿದ್ದ ಬಾಪೂಜಿ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನಗಳನ್ನು ಶಾಸಕರಾದ ತನ್ವೀರ್ ಸೇಠ್ ಅವರು ವಿತರಣೆ ಮಾಡಿದರು. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಗಾಂಧಿ ಚೌಕದಲ್ಲಿರುವ ಗಾಂಧಿ ಪುತ್ಥಳಿಗೆ ಗಣ್ಯರು ಮಾಲಾರ್ಪಣೆ ಮಾಡಿದರು.

ಕಾರ್ಯಕ್ರಮದಲ್ಲಿ ಶಾಸಕ ಟಿ. ಶ್ರೀವತ್ಸ, ಮೇಯರ್‌ ಶಿವಕುಮಾರ್, ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ, ಜಿಲ್ಲಾ ಪಂಚಾಯ್ತಿ ಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ ಎಂ ಗಾಯತ್ರಿ, ಮೈಸೂರು ನಗರ ಪೊಲೀಸ್ ಆಯುಕ್ತ ಬಿ ರಮೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ಮಹಾ ನಗರಪಾಲಿಕೆ ಆಯುಕ್ತ ಅರ್ಷದ್ ಉರ್ ರೆಹಮಾನ್ ನಾನಾ ಸಂಘಟನೆಗಳ ಪದಾಧಿಕಾರಿಗಳು,ಅಧಿಕಾರಿಗಳು ಇದ್ದರು.

ಬಿಜೆಪಿ ಕಚೇರಿಯಲ್ಲಿ

ಮೈಸೂರು ನಗರ ಬಿಜೆಪಿ ಕಚೇರಿಯಲ್ಲಿ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ರವರ ಪುಣ್ಯ ಜಯಂತಿಯನ್ನು ಮೈಸೂರು ನಗರ ಬಿಜೆಪಿ ಅಧ್ಯಕ್ಷರು ಹಾಗೂ ಶಾಸಕರಾದ ಟಿ ಎಸ್ ಶ್ರೀವತ್ಸ ರವರು ಪುಷ್ಪಾರ್ಚನೆ ಮಾಡುವ ಮೂಲಕ ಆಚರಿಸಲಾಯಿತು ಈ ಸಂದರ್ಭದಲ್ಲಿ ಮಾಧ್ಯಮ ಸಹ ಸಂಚಾಲಕ ಎನ್ ಪ್ರದೀಪ್ ಕುಮಾರ್ ಕಾರ್ಯಾಲಯ ಕಾರ್ಯದರ್ಶಿ ಚೇತನ್ ಶಿವರಾಜ್. ಕಿಶೋರ್. ರಾಜೇಂದ್ರ ಮತ್ತು ಮುಖಂಡರು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ