Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುರಳೀಧರ್, ಪುಟ್ಟಸ್ವಾಮಯ್ಯಗೆ ಮಾಧ್ಯಮ ಅಕಾಡೆಮಿ ಗೌರವ

ಸುದ್ದಿಮೂಲ ವಾರ್ತೆ
ಬೆಂಗಳೂರು,ಏ.28: ಈ ತಿಂಗಳು ನಿವೃತ್ತರಾಗಲಿರುವ ವಾರ್ತಾ ಮತ್ತು ಪ್ರಚಾರ ಇಲಾಖೆಯ ನಿರ್ದೇಶಕ ಡಿ.ಪಿ.ಮುರುಳೀಧರ್ ಮತ್ತು ಜಂಟಿ ನಿರ್ದೇಶಕ ಕೆ.ಪಿ.ಪುಟ್ಟಸ್ವಾಮಯ್ಯ ಅವರನ್ನು ಇಂದು ಮಾಧ್ಯಮ ಅಕಾಡೆಮಿಯ ವತಿಯಿಂದ ಗೌರವಿಸಲಾಯಿತು.

ಬೆಂಗಳೂರು ಪ್ರೆಸ್ ಕ್ಲಬ್‌ನಲ್ಲಿ ನಡೆದ ಸರಳ ಸಮಾರಂಭದಲ್ಲಿ ಪಾಲ್ಗೊಂಡ ಹಿರಿಯ ಪತ್ರಕರ್ತರು, ವಾರ್ತಾ ಇಲಾಖೆಯ ಅಧಿಕಾರಿಗಳು,ಸಿಬ್ಬಂದಿಗಳು ಪಾಲ್ಗೊಂಡಿದ್ದರಲ್ಲದೆ,ನಿವೃತ್ತರಾಗುತ್ತಿರುವ ಡಿ.ಪಿ.ಮುರುಳೀಧರ್,ಕೆ.ಪಿ.ಪುಟ್ಟಸ್ವಾಮಯ್ಯ ಮತ್ತು ಲತಾ ನಾಗರಾಜಸ್ವಾಮಿ ಅವರನ್ನು ಅಭಿನಂದಿಸಿದರು.

ವಾರ್ತಾ ಇಲಾಖೆಯಲ್ಲಿ ಹಲವು ದಶಕಗಳ ಕಾಲ ಸೇವೆ ಸಲ್ಲಿಸಿದ ಇವರು, ಪತ್ರಕರ್ತರನ್ನು ಕುಟುಂಬದ ಸದಸ್ಯರಂತೆ ನೋಡಿಕೊಂಡ ಪರಿಯನ್ನು ಸಮಾರಂಭದಲ್ಲಿ ಭಾಗವಹಿಸಿದ್ದವರು ಶ್ಲಾಘಿಸಿದರು.

ತಮ್ಮನ್ನು ಗೌರವಿಸಿ,ಸತ್ಕರಿಸಿದ ಪತ್ರಕರ್ತರಿಗೆ ಧನ್ಯವಾದ ಸಲ್ಲಿಸಿದ ಡಿ.ಪಿ.ಮುರುಳೀಧರ್ ಹಾಗೂ ಕೆ.ಪಿ.ಪುಟ್ಟಸ್ವಾಮಯ್ಯ ಅವರು, ತಾವು ಕಾರ್ಯ ನಿರ್ವಹಿಸಿದ ಅವಧಿಯಲ್ಲಿ ಎದುರಿಸಿದ ಸವಾಲುಗಳು ಮತ್ತು ಅದನ್ನು ಎದುರಿಸಿದ ಬಗೆಯನ್ನು ವಿವರಿಸಿದರಲ್ಲದೆ, ಪತ್ರಕರ್ತರ ಜತೆಗಿನ ಒಡನಾಟವನ್ನು ಸ್ಮರಿಸಿಕೊಂಡು ಭಾವುಕರಾದರು.

ಸಮಾರಂಭದಲ್ಲಿ ಹಿರಿಯ ಪತ್ರಕರ್ತರಾದ ಪಿ.ರಾಮಯ್ಯ, ಮಾಧ್ಯಮ ಅಕಾಡೆಮಿಯ ಅಧ್ಯಕ್ಷರಾದ ಸದಾಶಿವ ಶೆಣೈ, ಎಂ.ಎ.ಪೊನ್ನಪ್ಪ, ಸಿದ್ಧರಾಜು, ಆರ್.ಟಿ.ವಿಠ್ಠಲಮೂರ್ತಿ, ವಾರ್ತಾ ಇಲಾಖೆಯ ನಿವೃತ್ತ ಅಧಿಕಾರಿಗಳಾದ ಹೆಚ್.ಬಿ.ದಿನೇಶ್ ಮತ್ತಿತರರು ಪಾಲ್ಗೊಂಡಿದ್ದರು
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ