Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎನ್ ಪಿ ಎಸ್ ಬಳಿ ಡಿ.ಕೆ. ಶಿವಕುಮಾರ್ ಅವರ ಮಾಧ್ಯಮ ಪ್ರತಿಕ್ರಿಯೆ

ಸುದ್ದಿಮೂಲ ವಾರ್ತೆ

ಬೆಂಗಳೂರು,ಮೇ 29: ನಾನು ಓದಿದ ಶಾಲೆಗೆ ಭೇಟಿ ನೀಡಿ ನಮ್ಮ ಗುರುಗಳಾದ ಗೋಪಾಲಕೃಷ್ಣ ಅವರನ್ನು ಭೇಟಿ ಮಾಡಿ, ಆಶೀರ್ವಾದ ಪಡೆದೆ. ಅವರು ಶಿಕ್ಷಣ ಕ್ಷೇತ್ರದಲ್ಲಿ ಬಹಳ ಸಾಧನೆ ಮಾಡಿದ್ದಾರೆ. ಈ ನ್ಯಾಷನಲ್ ಪಬ್ಲಿಕ್ ಶಾಲೆ ದೇಶದಲ್ಲೇ ಮೊದಲ ಸ್ವಾಯತ್ತ ಶಾಲೆಯಾಗಿದೆ.

ನಾವು ನಮ್ಮ ಪ್ರಣಾಳಿಕೆಯಲ್ಲಿ ಪ್ರತಿ ಪಂಚಾಯ್ತಿ ಮಟ್ಟದಲ್ಲಿ ನವೋದಯ ಮಾದರಿಯ ಉನ್ನತ ಗುಣಮಟ್ಟದ ಶಾಲೆ ಆರಂಭಿಸುವ ಬಗ್ಗೆ ಪ್ರಸ್ತಾಪ ಮಾಡಿದ್ದೇವೆ. ಇದನ್ನು ಯಾವ ರೀತಿ ಮಾಡಬೇಕು ಎಂದು ಮಾರ್ಗದರ್ಶನ ನೀಡಬೇಕು ಎಂದು ಗೋಪಾಲಕೃಷ್ಣ ಅವರ ಬಳಿ ಮನವಿ ಮಾಡಿದ್ದೇನೆ. ಹಳ್ಳಿಯಿಂದ ಶಿಕ್ಷಣಕ್ಕೆ ಮಕ್ಕಳು ನಗರಕ್ಕೆ ವಲಸೆ ಬರುವುದನ್ನು ತಪ್ಪಿಸಲು ಈ ಕಾರ್ಯಕ್ರಮ ರೂಪಿಸಿದ್ದೇವೆ. ನಾನು ಪರಮೇಶ್ವರ್ ಹಾಗೂ ಪ್ರಾಥಮಿಕ ಶಿಕ್ಷಣ ಸಚಿವರು ಈ ಬಗ್ಗೆ ಚರ್ಚೆ ಮಾಡುತ್ತೇವೆ.

ಹಳ್ಳಿ ಜನರಿಗೂ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು ಎಂಬ ಹಂಬಲವಿದೆ. ಎಲ್ಲಾ ಮಕ್ಕಳಿಗೂ ಉತ್ತಮ ಗುಣಮಟ್ಟದ ಶಿಕ್ಷಣ ಸಿಗುವಂತೆ ಮಾಡಬೇಕು. ಇದು ನಮ್ಮ ಸರ್ಕಾರದ ಆದ್ಯತೆ.

ಕಾಂಗ್ರೆಸ್ ಪ್ರಣಾಳಿಕೆ ಭರವಸೆ ಜಾರಿ ಅಸಾಧ್ಯ ಎಂಬ ವಿರೋಧ ಪಕ್ಷಗಳ ನಾಯಕರ ಹೇಳಿಕೆ ಬಗ್ಗೆ ಕೇಳಿದಾಗ, "ಯಾವುದೇ ಊಹಾಪೋಹಗಳ ಅಗತ್ಯವಿಲ್ಲ. ಚರ್ಚೆ ಮಾಡುವವರಿಗೆ, ಟೀಕೆ ಮಾಡುವವರಿಗೆ, ಸಲಹೆ ನೀಡುವವರಿಗೆ ಬೇಡ ಎನ್ನಲು ಸಾಧ್ಯವಿಲ್ಲ. ಮಾತನಾಡುವವರು, ಟೀಕೆ ಮಾಡುವವರು ಮಾಡಲಿ. ನಾವು ಕೆಲಸ ಮಾಡಿ ಉತ್ತರ ನೀಡುತ್ತೇವೆ" ಎಂದು ತಿಳಿಸಿದರು.

ಬೆಂಗಳೂರಿನ ಅಧಿಕಾರಿಗಳ ಜತೆ ಸಭೆ ಬಗ್ಗೆ ಕೇಳಿದಾಗ, "ಅಧಿಕಾರಿಗಳ ಬೇಜವಾಬ್ದಾರಿಯಿಂದ ಯಾರಿಗೂ ತೊಂದರೆ ಆಗಬಾರದು. ಭ್ರಷ್ಟಾಚಾರ ಮುಕ್ತ ಆಡಳಿತ ನೀಡಬೇಕು. ಹೀಗಾಗಿ ಸಭೆ ಮಾಡುತ್ತಿದ್ದೇವೆ" ಎಂದು ತಿಳಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ