Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಧಾನಸಭಾ ಚುನಾವಣೆ : ಸಿದ್ಧತೆಗಳ ಕುರಿತು ಸಭೆ ತುಮಕೂರು ಗ್ರಾಮಾಂತರದಲ್ಲಿ 2.06 ಲಕ್ಷ ಮತದಾರರು

ಸುದ್ದಿಮೂಲ ವಾರ್ತೆ

ತುಮಕೂರು, ಮಾ.31: ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ತುಮಕೂರು ಗ್ರಾಮಾಂತರ

ಕ್ಷೇತ್ರದಲ್ಲಿ 1,02,074 ಪುರುಷರು, 1,04,023 ಮಹಿಳೆಯರು ಹಾಗೂ 18 ಇತರೆ ಸೇರಿದಂತೆ ಒಟ್ಟು 2,06,155 ಮತದಾರರಿದ್ದು, ಮತದಾರರು ತಮ್ಮ ಅಮೂಲ್ಯವಾದ ಮತವನ್ನು ಚಲಾಯಿಸಲು 226 ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು ಎಂದು ಉಪ ವಿಭಾಗಾಧಿಕಾರಿ ಹಾಗೂ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ

ಹೋಟೆಲ್ ಶಿವಪ್ಪ ತಿಳಿಸಿದರು.

ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಚುನಾವಣಾ ಅಕ್ರಮ ನಡೆಯದಂತೆ ಹದ್ದಿನ ಕಣ್ಣಿಡಲು ತುಮಕೂರು ಗ್ರಾಮಾಂತರ ಕಸಬಾ ಪಶ್ಚಿಮ ಹೋಬಳಿಯ ಮಲ್ಲಸಂದ್ರ, ಊರ್ಡಿಗೆರೆ ಹೋಬಳಿ ಜಾಸ್ ಟೋಲ್ ಕ್ಯಾತ್ಸಂದ್ರ ಹಾಗೂ ಕುರುವಲು,

ಗೂಳೂರು ಹೋಬಳಿ ಹೊನ್ನುಡಿಕೆ ಹಾಗೂ ಬೆಳ್ಳಾವಿ ಹೋಬಳಿ ದೊಡ್ಡವೀರನಹಳ್ಳಿ ಸೇರಿದಂತೆ ಐದು ಕಡೆ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದೆ.

ಯಾವುದೇ ಅಕ್ರಮ ಹಣ ಸಾಗಾಣಿಕೆ, ಮದ್ಯ ಸಾಗಾಣಿಕೆ, ಮತ್ತಿತರ ವಸ್ತುಗಳನ್ನು ಅನಧಿಕೃತವಾಗಿ ಸಾಗಾಣಿಕೆ

ಮಾಡದಂತೆ ಕಟ್ಟೆಚ್ಚರ ವಹಿಸಲಾಗಿದೆ ಎಂದು ತಿಳಿಸಿದರು.

ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ತಡೆಯಲು 5 ಫ್ಲೈಯಿಂಗ್ ಸ್ಕ್ವಾಡ್ ತಂಡ, 5 ಎಸ್‌ಎಸ್‌ಟಿ ತಂಡ, 1 ವಿಡಿಯೋ ಸರ್ವೇಲೆನ್ಸ್ ತಂಡ ಹಾಗೂ 1 ಅಕೌಂಟಿಂಗ್ ತಂಡವನ್ನು ರಚಿಸಿ ನೇಮಕಾತಿ

ಮಾಡಲಾಗಿದೆ. ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ಸೇರಿ ಚುನಾವಣಾ ಅಕ್ರಮಗಳು ಕಂಡು ಬಂದಲ್ಲಿ ದೂರವಾಣಿ ಸಂಖ್ಯೆ: 0816-2006574ಕ್ಕೆ ಕರೆ ಮಾಡಿ ಸಾರ್ವಜನಿಕರು ದೂರು ಸಲ್ಲಿಸಬಹುದಾಗಿದೆ

ಎಂದು ಹೇಳಿದರು.

ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮೇ 10ರಂದು ಮತದಾನ ಮಾಡಲು ಅನುಕೂಲವಾಗುವಂತೆ ಎಲ್ಲಾ ಮತದಾರರ ಮನೆಗಳಿಗೆ ವೋಟರ್ ಸ್ಲಿಪ್ ಮತ್ತು ವೋಟರ್ ಗೈಡ್‌ಗಳನ್ನು ವಿತರಿಸಲಾಗುವುದು.

ಈ ವಿಧಾನ ಸಭಾ ಕ್ಷೇತ್ರದಲ್ಲಿ 2562 ವಿಕಲಚೇನತರು ಹಾಗೂ 80ವರ್ಷ ಮೇಲ್ಪಟ್ಟ 5265 ಗೈರು ಮತದಾರರನ್ನು ಗುರುತಿಸಲಾಗಿದ್ದು, ಗೈರು ಮತದಾರರು ಇಚ್ಛೆ ಪಟ್ಟಲ್ಲಿ ಅಂಚೆ ಮತ ಪತ್ರದ ಮೂಲಕ ಗೌಪ್ಯವಾಗಿ ಮತದಾನ ಮಾಡಲು ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿರುವ 206155 ಮತದಾರರ ಪೈಕಿ 4239 ಯುವ ಮತದಾರರು ಹಾಗೂ 101 ಸೇವಾ ಮತದಾರರಿದ್ದು, ಮತದಾರರು ಮತ ಚಲಾಯಿಸಲು ಅನುವಾಗುವಂತೆ ಎಲ್ಲಾ 226 ಮತಗಟ್ಟೆಗಳಲ್ಲಿ ವಿದ್ಯುತ್, ಶೌಚಾಲಯ, ಕುಡಿಯುವ ನೀರು, ರ‍್ಯಾಂಪ್ ಸೇರಿದಂತೆ ಮೂಲಭೂತ

ಸೌಕರ್ಯಗಳನ್ನು ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದರು.

ಡಿವೈಎಸ್‌ಪಿ ಹಾಗೂ ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಪೊಲೀಸ್ ನೋಡಲ್ ಅಧಿಕಾರಿ ಹೆಚ್. ಶ್ರೀನಿವಾಸ್ ಮಾತನಾಡಿ, ಚುನಾವಣಾ ನೀತಿ ಸಂಹಿತೆ ಜಾರಿಗೂ ಮುನ್ನ ಮಾರ್ಚ್ 10 ರಿಂದ ದಾಖಲೆ

ಇಲ್ಲದ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ ನಗದು, ಗಾಂಜಾ, ಮದ್ಯ ಸೇರಿದಂತೆ ಇತರೆ ವಸ್ತುಗಳನ್ನು

ವಶಪಡಿಸಿಕೊಳ್ಳಲಾಗಿದ್ದು, ಎರಡು ದಿನಗಳ ಹಿಂದೆ ಯಲ್ಲಾಪುರ ಚೆಕ್‌ಪೋಸ್ಟ್‌ನಲ್ಲಿ 112 ಸೀರೆಗಳನ್ನು ಜಪ್ತಿ ಮಾಡಲಾಗಿದೆಯಲ್ಲದೆ, ಕ್ಯಾತ್ಸಂದ್ರ, ತುಮಕೂರು ಗ್ರಾಮಾಂತರ, ಬೆಳ್ಳಾವಿ ಮತ್ತು ತಿಲಕ್‌ ಪಾರ್ಕ್‌ ಠಾಣೆ ವ್ಯಾಪ್ತಿಯಲ್ಲಿ ಸಾವಿರಾರು ರೂಪಾಯಿ ಮೌಲ್ಯದ ಮದ್ಯ, ಗಾಂಜಾ ವಶಪಡಿಸಿಕೊಳ್ಳಲಾಗಿದೆ.

ಈ ಸಂದರ್ಭದಲ್ಲಿ ತಹಶೀಲ್ದಾರ್ ಹಾಗೂ ಸಹಾಯಕ ಚುನಾವಣಾಧಿಕಾರಿ ಎಂ. ಸಿದ್ದೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಪಿ.ಓಂಕಾರಪ್ಪ, ಕ್ಯಾತ್ಸAದ್ರ ಸರ್ಕಲ್ ಇನ್ಸ್ಪೆಕ್ಟರ್ ಚೆನ್ನೇಗೌಡ ಉಪಸ್ಥಿತರಿದ್ದರು.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ