Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾನಸಿಕ ಆರೋಗ್ಯ ಪ್ರತಿಯೊಬ್ಬರ ಹಕ್ಕು: ಡಾ.ಲಿಂಗರಾಜು

ಸುದ್ದಿಮೂಲವಾರ್ತೆ

ಕೊಪ್ಪಳ,ಅ.10: ಮಾನಸಿಕ ಆರೋಗ್ಯ ಪ್ರತಿಯೊಬ್ಬರ ಹಕ್ಕಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಲಿಂಗರಾಜು ಟಿ ಅವರು ಹೇಳಿದರು.

ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮತ್ತು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳ ಕಾರ್ಯಾಲಯ ಇವರ ಸಹಯೋಗದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಪ್ರಯುಕ್ತ ನಗರದ ನೌಕಕರ ಭವನದಲ್ಲಿ ಹಮ್ಮಿಕೊಂಡಿದ್ದ ಮಾನಸಿಕ ಆರೋಗ್ಯ ಕುರಿತ ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮಾನಸಿಕ ಖಾಯಿಲೆ ಬಗ್ಗೆ ಯಾರು ಕೂಡ ನಿರ್ಲಕ್ಷ್ಯ ಮಾಡಬಾರದು. ಮೊದನೇ ಹಂತದಲ್ಲಿ ಪತ್ತೆ ಹಚ್ಚಿ ಚಿಕಿತ್ಸೆ ಪಡೆದು ಆರೋಗ್ಯವಂತರಾಗಿ ಬಾಳಬೇಕು ಎಂದು ಹೇಳಿದರು.

ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ರವೀಂದ್ರನಾಥ್ ಎಂ.ಎಚ್ ಅವರು ಮಾನಸಿಕ ಖಾಯಿಲೆಯ ವಿಧಗಳು, ಚಿಕಿತ್ಸಾ ಸೇವಾ ಸೌಲಭ್ಯಗಳ ಕುರಿತು ಮಾತನಾಡಿದರು.

ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳಾದ ಡಾ.ಪ್ರಕಾಶ ಹೆಚ್ ಅವರು ಪ್ರಾಸ್ತಾವಿಕ ಮಾತನಾಡಿ, ಪ್ರತಿ ವರ್ಷ ಅಕ್ಟೋಬರ್ 10 ರಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮ ಆಚರಿಸಲಾಗುತ್ತದೆ. 'ಮಾನಸಿಕ ಆರೋಗ್ಯವು ಸಾರ್ವತ್ರಿಕ ಮಾನವ ಹಕ್ಕು' ಎಂಬುವುದು ಈ ವರ್ಷದ ಘೋಷವಾಕ್ಯವಾಗಿದೆ ಎಂದು ತಿಳಿಸಿದರು.

ಗಂಗಾವತಿ ಉಪ ವಿಭಾಗ ಆಸ್ಪತ್ರೆಯ ಮನೋವೈದ್ಯರಾದ ಡಾ.ವಾದಿರಾಜ ಗೋರೆಬಾಳ ಅವರು ವಿಶೇಷ ತರಬೇತಿ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳಾದ ಡಾ.ನಂದಕುಮಾರ್, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿಗಳಾದ ಶ್ರೀದೇವಿ ಎಸ್.ಎನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಶಿವಾನಂದ ಪೂಜಾರ ಕಾರ್ಯಕ್ರಮ ನಿರೂಪಿಸಿದರು. ಮನೋಶಾಸ್ತ್ರಜ್ಞರಾದ ಪುಷ್ಪಾ ತೆರೆಸಾ ಅವರು ಸ್ವಾಗತಿಸಿದರು. ವಿಕಲಚೇತನರ ಗ್ರಾಮೀಣ ಮತ್ತು ನಗರ ಪುನರ್ ವಸತಿ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ