Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದಲ್ಲಿ 5 ದಿನ ಮಳೆಯ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಸುದ್ದಿಮೂಲ ವಾರ್ತೆ

ಬೆಂಗಳೂರು ಮಾ.29: ರಾಜ್ಯದಲ್ಲಿ 5 ದಿನಗಳು ಮಳೆಯಾಗುವ ಸಾಧ್ಯತೆ ಹೆಚ್ಚಿದೆ ಎಂದು ಹವಾಮಾನ ಇಲಾಖೆ ನೀಡಿದ ಮುನ್ಸೂಚನೆ ನೀಡಿದೆ.

ಮದ್ಯ ಪ್ರದೇಶದಿಂದ ತಮಿಳುನಾಡಿನಲ್ಲಿ ಗಾಳಿಯ ದಿಕ್ಕಿನ ಬದಲಾವಣೆಯಿಂದಾಗಿ ಬೆಂಗಳೂರು ಸೇರಿ ಹಲವೆಡೆ ಮಳೆಯಾಗುವ ಸಂಭವ ಹೆಚ್ಚಿದೆ ಎಂದು ಇಲಾಖೆ ಸೂಚಿಸಿದೆ.

ದಕ್ಷಿಣ ಒಳನಾಡಿಗೆ ಇಂದಿನಿಂದ ಐದು ದಿನಗಳವರೆಗೂ ಮಳೆ ಇರಲಿದ್ದು, ಮಂಡ್ಯ, ಮೈಸೂರು, ಕೋಲಾರ, ಹಾಸನ, ಕೊಡಗು, ಚಾಮರಾಜನಗರ, ಸೇರಿದಂತೆ ಹಲವೆಡೆ ಮಳೆಯಾಗಲಿದೆ. ಅದೇ ರೀತಿ ಉತ್ತರ ಒಳನಾಡಿನಲ್ಲಿ ಇಂದಿನಿಂದ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ. ಹಾಗೆಯೇ ಕರಾವಳಿಯಲ್ಲಿ ಒಣಹವೆ ಮುಂದುವರಿಯಲಿದ್ದು, ಕೊಡಗು, ಬೀದರ್, ಕಲಬುರಗಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಎಂದು ಸೂಚಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ಇಂದು ಮೋಡ ಕವಿದ ವಾತಾವರಣ ಹಾಗೂ ಗಾಳಿಯ ಪ್ರಮಾಣ ಹೆಚ್ಚಾಗಿರಲಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ತಜ್ಞ ಎ ಪ್ರಸಾದ್ ಮಾಹಿತಿ ನೀಡಿದ್ದಾರೆ.

ಬೆಂಗಳೂರಿನ ಎಚ್​ಎಎಲ್​ನಲ್ಲಿ 33.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 34.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 33.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ