Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೈಸೂರಿನಲ್ಲಿ ಸಂವಿಧಾನ ಪೀಠಿಕೆ ಪಠಿಸಿದ ಲಕ್ಷಾಂತರ ಮಕ್ಕಳು

ಸುದ್ದಿಮೂಲ ವಾರ್ತೆ

ಮೈಸೂರು, ಸೆ.15: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಹಿನ್ನಲೆಯಲ್ಲಿ ಭಾರತದ ಆತ್ಮವೆಂದೇ ಪರಿಗಣಿಸಲ್ಪಟ್ಟಿರುವ ಸಂವಿಧಾನದ ಪೀಠಿಕೆಯನ್ನು ಮೈಸೂರಿನಲ್ಲಿ ಲಕ್ಷಾಂತರ ಮಕ್ಕಳು ಪಠಿಸಿದರು. ಶುಕ್ರವಾರ ಮೈಸೂರು ವಿಶ್ವವಿದ್ಯಾಲಯದ ಓವಲ್‌ ಮೈದಾನದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾಡಳಿತ ವತಿಯಿಂದ ನಡೆದ ಬೃಹತ್‌ ಸಮಾರಂಭದಲ್ಲಿ ಸಂವಿಧಾನ ಪೀಠಿಕೆಯಾನ್ನು ಜಿಲ್ಲಾಧಿಕಾರಿ ಡಾ.ಕೆವಿ ರಾಜೇಂದ್ರ ಬೋಧಿಸಿದರು.



ಬಳಿಕ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಲಾಯಿತು .ಇಡೀ ರಾಜ್ಯದಲ್ಲಿ ಒಟ್ಟು ನೋಂದಾವಣಿಯಲ್ಲಿ ಬೆಂಗಳೂರು ನಗರದ ನಂತರ ಮೈಸೂರು ಎರಡನೇ ಸ್ಥಾನ ಪಡೆದಿದೆ. ಬೆಂಗಳೂರು ನಗರದ ವ್ಯಾಪ್ತಿಯಲ್ಲಿ 23,35,568 ಮಕ್ಕಳು ನೋಂದಣೆ ಆಗಿದ್ದರೆ, ಮೈಸೂರಲ್ಲಿ 18, 14,824 ಮಕ್ಕಳು ನೋಂದಣೆ ಆಗಿದ್ದರು.

ಶಾಸಕ ಕೆ. ಹರೀಶ್‌ಗೌಡ ಮಾತನಾಡಿ, ಸoವಿಧಾನ ಉಳಿದರೆ ಮಾತ್ರ ಪ್ರತಿಯೊಬ್ಬರೂ ಕೂಡ ಸಮಾನತೆಯಿಂದ ಬದುಕಲು ಸಾಧ್ಯ. ಸಂವಿಧಾನವಿಲ್ಲದಿದ್ದರೆ ಪ್ರತಿಯೊಬ್ಬರೂ ಕೂಡ ಅನಾಗರಿಕರಾಗಬಹುದಾದ ಸಂಭವವಿದೆ. ಸಂವಿಧಾನದಿoದ ಬಡವ ಶ್ರೀಮಂತ ಎಂಬ ಭೇದ-ಭಾವವಿಲ್ಲದೆ ನಾವೆಲ್ಲರೂ ಬದುಕುತ್ತಿದ್ದೇವೆ ಎಂದು ಹೇಳಿದರು.

ಸಮಾನತೆಯ ಜೀವನಕ್ಕೆ ಸಂವಿಧಾನ ಅಡಿಪಾಯ. ಸಂವಿಧಾನವನ್ನು ಪ್ರತಿಯೊಬ್ಬರೂ ಕೂಡ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಸಮ ಸಮಾಜದ ನಿರ್ಮಾಣ ಮಾಡುವುದರ ಜೊತೆಗೆ ಸಮಾನತೆಯಿಂದ ಜೀವನ ನಡೆಸಬೇಕು ಎಂದು ಕರೆ ನೀಡಿದರು.

ಶಾಸಕ ತನ್ವೀರ್ ಸೇಠ್ ಮಾತನಾಡಿ, ಸಂವಿಧಾನದ ಪೀಠಿಕೆಯಯನ್ನು ನಾವೆಲ್ಲರೂ ಕೂಡ ಜೀವನಕ್ಕೆ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಹಂಗಾಮಿ ಮೇಯರ್ ಶಿವಕುಮಾರ್, ಉಪ ‌ ಮೇಯರ್‌ ಡಾ.ಜಿ ರೂಪ, ಜಿಪಂ ಸಿಇಓ ಕೆ. ಎಂ ಗಾಯಿತ್ರಿ, ಮಹಾನಗರ ಪಾಲಿಕೆ ಆಯುಕ್ತ ಅಶಾದ್ ಉರ್ ರೆಹಮಾನ್ ಶರೀಫ್, ನಾಗರಿಕ ಮತ್ತು ಜಾರಿ ನಿರ್ದೇಶನಾಲಯದ ಪೊಲೀಸ್ ಆಧೀಕ್ಷಕಿ ಕವಿತಾ, ಅಪರ ಜಿಲ್ಲಾಧಿಕಾರಿ ಪಿ ಶಿವರಾಜ್, ಮಾಜಿ ಮೇಯರ್ ಪುರಷೋತ್ತಮ್, ಪ್ರವಾಸೋಸ್ಯಮ ಇಲಾಖೆ ಜಂಟಿ ನಿರ್ದೇಶಕಿ ಸವಿತಾ, ಉಪ ವಿಭಾಗಧಿಕಾರಿ ರಕ್ಷಿತ್. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಕುಮಾರಸ್ವಾಮಿ ಮತ್ತು ವಿವಿಧ ಕಾಲೇಜಿ ವಿದ್ಯಾರ್ಥಿಗಳು, ದಲಿತ ಒಕ್ಕೂಟಗಳ ಮುಖಂಡರು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ