Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸುಳ್ಳು ಪ್ರಚಾರದಲ್ಲಿ ಬಿಜೆಪಿಗರು ನಿಸ್ಸೀಮರು: ಸಚಿವ ಬಿ.ನಾಗೇಂದ್ರ

ಬೆಂಗಳೂರು: ಜೂ.7: ಸುಳ್ಳು ಪ್ರಚಾರ ಮಾಡುವುದರಲ್ಲಿ, ಸಣ್ಣದನ್ನು ದೊಡ್ಡದಾಗಿ ಬಿಂಬಿಸುವುದರಲ್ಲಿ ಬಿಜೆಪಿಗರು ನಿಸ್ಸೀಮರು ಎಂದು ಯುವಜನ ಸೇವೆ ಕ್ರೀಡೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಬಿ.ನಾಗೇಂದ್ರ ಬಿಜೆಪಿ ನಾಯಕರ ವಿರುದ್ದ ಕಿಡಿಕಾರಿದ್ದಾರೆ‌.

ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಕಾರ್ಯಕ್ರಮದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರದ ಐದು ಗ್ಯಾರೇಂಟಿಗಳ ಬಗ್ಗೆ ‌ಇಡೀ ದೇಶವೇ ಮೆಚ್ಚುಗೆ ವ್ಯಕ್ತಪಡಿಸುತ್ತಿದೆ. ಬಿಜೆಪಿಯವರಿಗೆ ಆರೋಪ ಮಾಡುವುದಕ್ಕೆ ಏನು ಇಲ್ಲ. ಆದರೂ ನ್ಯೂನತೆಗಳನ್ನು ಹುಡುಕುತ್ತಿದ್ದು, ಇದು ವಿಪಕ್ಷದವರ ಚಾಳಿ ಎಂದರು.



ಕೇಂದ್ರ‌ ಸರ್ಕಾರದ ತೆರಿಗೆ ನೀತಿಯಿಂದ ಜನ ತತ್ತರಿಸಿದ್ದು, ದಿನ ಬಳಕೆಯ ಪಾದರ್ಥಗಳ ಬೆಲೆ ಗಗನಕ್ಕೆ ಏರಿದೆ. ಇಂತಹ ಸಂದರ್ಭದಲ್ಲಿ ಗೃಹ ಲಕ್ಷ್ಮೀ‌ ಯೋಜನೆಯಿಂದ ಉಪಯೋಗವಾಗಲಿದೆ. ಕಟ್ಟಕಡೆಯ ಮಹಿಳೆಗೂ ಸರ್ಕಾರದ ಯೋಜನೆ ತಲುಪಬೇಕು ಎಂಬ ನಿಟ್ಟಿನಲ್ಲಿ ಗೃಹ ಲಕ್ಷ್ಮೀ ಯೋಜನೆ ಜಾರಿಗೆ ತರಲಾಗಿದೆ. ಐದು ವರ್ಷ ನಮ್ಮ ಸರ್ಕಾರ ಜನಪರ ಆಡಳಿತ ನೀಡಲಿದೆ ಎಂದು ಹೇಳಿದರು.

ಆರೋಪಕ್ಕೆ ಕಿಮ್ಮತ್ತಿಲ್ಲ:
ನಮ್ಮ ಸರ್ಕಾರದ ಯೋಜನೆಗಳ ಬಗ್ಗೆ ಎಲ್ಲ ರಾಜ್ಯಗಳು ನೋಡುತ್ತಿವೆ. ವಿಪಕ್ಷಗಳ‌ ಆರೋಪಕ್ಕೆ ಯಾವುದೇ ಕಿಮ್ಮತ್ತಿಲ್ಲ.
ಬಿಜೆಪಿ ಸರ್ಕಾರದ ದುರಾಡಳಿತದಿಂದ ಬೇಸತ್ತು ಹಾಗೂ ನಮ್ಮ ಪ್ರಣಾಳಿಕೆಗೆ ಮೆಚ್ಚಿ ಜನ ಕಾಂಗ್ರೆಸ್ ಗೆ ಅಧಿಕಾರ ನೀಡಿದ್ದಾರೆ. ಜನ ತಕ್ಕ ಪಾಠ ಕಲಿಸಿದರೂ ಆ ಪಕ್ಷದ ನಾಯಕರು ಎಚ್ಚೆತ್ತಿಲ್ಲ. ಜನಪರ ಯೋಜನೆಗಳನ್ನು ವಿರೋಧಿಸಿದರೆ ಜನ ಮುಂದೆಯೂ ಸೂಕ್ತ ಪಾಠ ಕಲಿಸಲಿದ್ದಾರೆ ಎಂದು ನಾಗೇಂದ್ರ ಅವರು ತಿರುಗೇಟು ನೀಡಿದರು.

ಕ್ರೀಡಾ ಕಿಟ್‌ ವಿತರಣೆ
ಇದಕ್ಕೂ ಮುನ್ನ ನಡೆದ ಒಡಿಶಾದ ಭುವನೇಶ್ವರದಲ್ಲಿ ನಡೆಯಲಿರುವ 'ಜನ ಜಾತಿ ಖೇಲ್ ' ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ರಾಜ್ಯದ 100ಕ್ಕೂ ಹೆಚ್ಚು ಕ್ರೀಡಾಪಟುಗಳಿಗೆ ಸಚಿವ ಬಿ.ನಾಗೇಂದ್ರ ಅವರು ವಿವಿಧ ಕ್ರೀಡೆಗಳ ಕಿಟ್ ವಿತರಿಸಿ,‌ ಕ್ರೀಡಾಕೂಟದಲ್ಲಿ ಹೆಚ್ಚಿನ ಪದಕ ಗೆಲ್ಲುವ ಮೂಲಕ ರಾಜ್ಯಕ್ಕೆ ಕೀರ್ತಿ ತರಬೇಕು ಎಂದು ಶುಭ ಹಾರೈಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ