Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗ್ರಾಮೀಣ ಕ್ರೀಡಾ ಪ್ರತಿಭೆಗಳಿಗೆ ಆದ್ಯತೆ : ಸಚಿವ ಬಿ. ನಾಗೇಂದ್ರ

ಸುದ್ದಿಮೂಲ ವಾರ್ತೆ

ಬೆಂಗಳೂರು, ಆ.6: ಮೈಸೂರು ದಸರಾ ಕ್ರೀಡಾಕೂಟದಲ್ಲಿ ರಾಜರ ಕಾಲದ ಇತಿಹಾಸ ಮರುಕಳಿಸಬೇಕು, ಇಡೀ ರಾಜ್ಯದ ಜನರು ಮೆಚ್ಚಿವಂತಹ ಮಾದರಿ ಕ್ರೀಡಾಕೂಟವನ್ನು ಆಯೋಜನೆ ಮಾಡಬೇಕು ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ, ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವ ಬಿ. ನಾಗೇಂದ್ರ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.

ಬುಧವಾರ ಬೆಂಗಳೂರು ನಗರದ ಒಲಂಪಿಕ್ ಭವನದಲ್ಲಿ ನಡೆದ 2023 - ನೇ ಸಾಲಿನ ಮೈಸೂರು ದಸರಾ ಕ್ರೀಡಾಕೂಟ ಆಯೋಜಿಸುವ ಅಂಗವಾಗಿ ನಡೆದ ಪೂರ್ವಭಾವಿ ಸಭೆಯಲ್ಲಿ ವಿಶೇಷ ಸಿಎಂ ತವರು ಜಿಲ್ಲೆ ಮೈಸೂರಿನಲ್ಲಿನಡೆಯುವ ಈ ಭಾರಿಯ ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಸುಸಜ್ಜಿತ ಊಟ ಮತ್ತು ವಾಸ್ತವ್ಯ ವ್ಯವಸ್ಥೆ ಕಲ್ಪಿಸಿ ಕಳೆದ ಸರ್ಕಾರದಲ್ಲಿ ನಡೆದ ಕ್ರೀಡಾಕೂಟಕ್ಕಿಂತ ಇನ್ನುಷ್ಟು ಮೆರಗು ನೀಡುವ ಕ್ರೀಡೆಗಳನ್ನು ಆಯೋಜಿಸಿ ಕ್ರೀಡಾಭಿಮಾನಿಗಳಿಗೆ ಇನ್ನುಷ್ಟು ಉತ್ತೇಜನ ನೀಡಬೇಕು ಎಂದರು.

ಈ ಭಾರಿಯ ದಸರಾ ಕ್ರೀಡಾಕೂಟಕ್ಕೆ ಅಗತ್ಯ ಅನುದಾನವನ್ನು ಪಡೆದು ಅಕ್ಟೋಬರ್ 11 ರಿಂದ 21 ರವರೆಗೆ ಒಟ್ಟು ಹತ್ತುದಿನಗಳು ನಡೆಯುವ ರಾಜ್ಯ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ತಾಲ್ಲೂಕು ಮತ್ತು ಜಿಲ್ಲಾ ಹಾಗೂ ರಾಜ್ಯ ಮಟ್ಟದ ಕ್ರೀಡಾಕೂಟ ಮತ್ತು ಒಲಂಪಿಕ್ ಕ್ರೀಡೆಗಳನ್ನು ಆಯೋಜಿಸಬೇಕು.

ಈ ಸಂಧರ್ಭದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು ಮತ್ತು ಕರ್ನಾಟಕ ಒಲಂಪಿಕ್ ಅಸೋಶೆಷನ್ ಅಧ್ಯಕ್ಷರಾದ ಡಾ.ಕೆ. ಗೋವಿಂದರಾಜ್ ರವರು, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಆಯುಕ್ತರಾದ ಶಶಿಕುಮಾರ್, ಉಪ ನಿರ್ದೇಶಕರಾದ ಜಿತೇಂದ್ರ ಶೆಟ್ಟಿ, ಇನ್ನಿತರರು ಅಧಿಕಾರಿಗಳು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ