Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗ್ಯಾರಂಟಿಗಳನ್ನು ಈಡೇರಿಸಲು ಕಾಲಾವಕಾಶ ಬೇಕು: ಸಚಿವ ಡಾ. ಮಹದೇವಪ್ಪ

ಸುದ್ದಿಮೂಲ ವಾರ್ತೆ,

ಮೈಸೂರು, ಮೇ 29: ನನಗೀಗ ನೀಡಿರುವ ಖಾತೆಯ ಬಗ್ಗೆ ಯಾವುದೇ ಬೇಸರವಿಲ್ಲ. ನಮ್ಮ ಸಚಿವ ಸಂಪುಟ ಒಗ್ಗಟ್ಟಾಗಿದೆ. ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕಾಗಿದೆ ಅಷ್ಟೇ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಹೇಳಿದ್ದಾರೆ

ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಚಿವರು, ಕಳೆದ ಮೂರು ವರ್ಷಗಳಿಂದ ಎಸ್ಸಿ ,ಎಸ್ಟಿ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನೇ ನೀಡಿಲ್ಲ.ವಿದ್ಯಾರ್ಥಿಗಳು ಪ್ರವೇಶ ಶುಲ್ಕ ಕಟ್ಟಲು ಪರದಾಡುತ್ತಿದ್ದಾರೆ. ಇದನ್ನು ನಾವು ಮುಂದಿನ ದಿನಗಳಲ್ಲಿ ಸರಿಪಡಿಸುವ ಕೆಲಸ ಮಾಡುತ್ತೇವೆ ಎಂದರು.

ಇದೇ ವೇಳೆ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಶೀಘ್ರ ಅನುಷ್ಠಾನಕ್ಕೆ ತುರುವಂತೆ ಒತ್ತಾಯಿಸುತ್ತಿರುವ ಬಿಜೆಪಿ

ನಾಯಕರಿಗೆ ತಿರುಗೇಟು ನೀಡಿದ್ದ ಸಚಿವ ಮಹದೇವಪ್ಪ, 2013 ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದನಂತರ

ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸಿದ್ದೇವೆ. ಈಗಲೂ ನಾವು ನೀಡಿರುವ ಎಲ್ಲಾ ಭರವಸೆಗಳನ್ನು

ಈಡೇರಿಸುತ್ತೇವೆ. ಇದಕ್ಕೆ ಸ್ವಲ್ಪ ಕಾಲಾವಕಾಶ ಬೇಕು. ಎಂದು ಸಮರ್ಥಿಸಿಕೊಂಡರು.

ಜುಲೈ ಒಳಗೆ ಮತ್ತೊಮ್ಮೆ ಬಜೆಟ್ ಮಂಡಿಸಿ ಅನುಮೋದನೆ ಪಡೆದುಕೊಳ್ಳಬೇಕು. ಗ್ಯಾರಂಟಿ ಯೋಜನೆ ಜಾರಿಗೆ ರೂಪು ರೇಷೆಗಳನ್ನು ಸಿದ್ದಪಡಿಸಬೇಕು. ಅಷ್ಟರಲ್ಲೇ ಅನುಷ್ಠಾನಗೊಳಿಸಿ ಎಂದು ಆತುರ ತೋರುತ್ತಿರುವ ಬಿಜೆಪಿ ನಾಯಕರ ನಿಲುವು ಸರಿಯಲ್ಲ. ಕೇಂದ್ರದಲ್ಲಿ ಅಧಿಕಾರಕ್ಕೆ ಬರುವ ಮುನ್ನ ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ನೀಡುವ ಭರವಸೆ ನೀಡಿದ್ದರು. ವಿದೇಶದಲ್ಲಿರುವ ಕಪ್ಪುಹಣ ತಂದು ಪ್ರತಿಯೊಬ್ಬರ ಬ್ಯಾಂಕ್ ಖಾತೆಗೂ 15 ಲಕ್ಷ ಹಣ ಹಾಕುತ್ತೇವೆ ಎಂದಿದ್ಧರು. ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು 9 ವರ್ಷವಾಯಿತು. ಹಾಗಾದರೆ 18 ಕೋಟಿ ಉದ್ಯೋಗ ಕೊಟ್ಟಿದ್ದಾರಾ? ಎಷ್ಟು ಜನರ ಖಾತೆಗೆ 15 ಲಕ್ಷ ಹಣ ಹಾಕಿದ್ದಾರೆ? ಎಂದು ಪ್ರಶ್ನಿಸಿದರು.

ವಿದೇಶದಿಂದ ಎಷ್ಟು ಕಪ್ಪು ಹಣ ತಂದಿದ್ದಾರೆ? ಬಿಜೆಪಿಯವರು ಸೋಲಿನ ಹತಾಶೆಯಿಂದ ಹೇಳಿಕೆಗಳನ್ನು

‌ನೀಡುತ್ತಿದ್ದಾರೆ. ಕೈಲಾಗದವನು ಮೈ ಪರಚಿಕೊಂಡಂತೆ ಬಿಜೆಪಿ ನಾಯಕರು ವರ್ತಿಸುತ್ತಿದ್ದಾರೆಂದು ವಾಗ್ದಾಳಿ ನಡೆಸಿದರು ಸಚಿವ ಮಹದೇವಪ್ಪ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ