Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸುದೀಪ್‌ಗೆ ಬೆದರಿಕೆ ಹಾಕಿದವರ ವಿರುದ್ಧ ಕ್ರಮ: ಸಚಿವ ಡಾ. ಸುಧಾಕರ್

ಸುದ್ದಿಮೂಲ ವಾರ್ತೆ

ಬೆಂಗಳೂರು, ಏ.6: ಸುದೀಪ್ ಕನ್ನಡ ಚಿತ್ರರಂಗದ ಸುಪ್ರಸಿದ್ಧ ನಟ. ಅವರಿಗೆ ಯಾರೋ ಕಿಡಿಗೇಡಿಗಳು ಬೆದರಿಕೆ ಹಾಕಿದರೆ ಸರ್ಕಾರ ಸುಮ್ಮನೆ ಕುಳಿತುಕೊಳ್ಳಲು ಸಾಧ್ಯವಿಲ್ಲ. ಬೆದರಿಕೆ ಹಾಕಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ.

ನಗರದ ಹೊರವಲಯದಲ್ಲಿರುವ ಗೋಲ್ಡನ್ ಪಾಮ್ಸ್ ರೆಸಾರ್ಟ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುದೀಪ್ ಓರ್ವ ಸುಪ್ರಸಿದ್ಧ ನಾಯಕ ನಟ. ಅವರಿಗೆ ಬೆದರಿಕೆ ಹಾಕಿದರೆ ಸರ್ಕಾರ ನೋಡಿಕೊಂಡು ಸುಮ್ಮನೆ ಕೂರಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ. ಈ ರೀತಿ ಮಾಡುವುದು ಹತಾಶ ಮನೋಭಾವ. ಇಷ್ಟು ವರ್ಷ ಇಲ್ಲದ ಆಪಾದನೆ ಈಗ ಮಾಡುತ್ತಿದ್ದಾರೆ ಅಂದರೆ ಏನು ಅರ್ಥ. ಸರ್ಕಾರ ಹಾಗೂ ರಾಜ್ಯದ ಜನ ಇದನ್ನೆಲ್ಲಾ ಗಮನಿಸುತ್ತಿದ್ದಾರೆ. ಬೆದರಿಕೆ ಹಾಕುವವರು ಎಚ್ಚರಿಕೆಯಿಂದ ಇರುವುದು ಒಳ್ಳೆಯದು ಎಂದು ಹೇಳಿದರು.

ಬಿಜೆಪಿಯು ಸಿನಿಮಾ ನಟರನ್ನು ಪ್ರಚಾರಕ್ಕೆ ಬಳಸಿಕೊಳ್ಳಲು ನಿರ್ಧರಿಸಿರುವ ಕುರಿತು ಪ್ರತಿಕ್ರಿಯೆ ನೀಡಿದ ಸುಧಾಕರ್, ರಾಜಕೀಯ ಪಕ್ಷಗಳ ಪ್ರಚಾರ ಕಾರ್ಯಕ್ಕೆ ಸಿನಿಮಾ ತಾರೆಯರ ಬಳಕೆ ಮಾಡುತ್ತಿರುವುದು ಹೊಸದೇನು ಅಲ್ಲ. ಚಲನಚಿತ್ರ ನಟರು, ಕ್ರೀಡಾಪಟುಗಳು ಒಂದು ರಾಜಕೀಯ ಪಕ್ಷಕ್ಕೆ ಸೇರಿಕೊಳ್ಳುವುದು ಅಥವಾ ಒಂದು ಪಕ್ಷದ ಪರ ಪ್ರಚಾರ ಮಾಡುವುದು ಇದೇನು ಮೊದಲಲ್ಲ. ಅನೇಕ ವರ್ಷಗಳಿಂದ ಈ ರೀತಿ ನಡೆದುಕೊಂಡು ಬಂದಿದೆ. ಅದರಂತೆ ಈಗ ಸುದೀಪ್ ಬಂದು ನಮ್ಮ ಪಕ್ಷದ ಪರ ಪ್ರಚಾರ ಮಾಡಿದರೆ ಸ್ವಾಗತ ಮಾಡುತ್ತೇನೆ, ಅದಕ್ಕಿಂತ ಸಂತೋಷ ಏನಿದೆ ಎಂದರು.

ನಟ ಸುದೀಪ್‌ಗೆ ಬೆದರಿಕೆ:

ಕನ್ನಡದ ಹೆಸರಾಂತ ನಟನಿಗೆ ಬೆದರಿಕೆ ಪತ್ರ ಬಂದಿದ್ದು, ಅಭಿಮಾನಿಗಳು ಆಘಾತಕ್ಕೊಳಗಾಗಿದ್ದಾರೆ. ಅನಾಮಧೇಯ ಪತ್ರಗಳ ಮೂಲಕ ಅವಾಚ್ಯವಾಗಿ ನಿಂದಿಸಲಾಗಿದೆ. ಮಾನಸಿಕ ಕಿರುಕುಳ ನೀಡಲಾಗಿದೆ. ಬೆದರಿಕೆ ಪತ್ರಗಳನ್ನು ಕಳುಹಿಸಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ನಟನ ಆಪ್ತ ಜಾಕ್ ಮಂಜು ದೂರಿನಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಪುಟ್ಟೇನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ