Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹಾಲಕ್ಷ್ಮೀ ಲೇಔಟ್‌ನಲ್ಲಿ ಸಚಿವ ಗೋಪಾಲಯ್ಯ ಮತಯಾಚನೆ


ಸುದ್ದಿಮೂಲ ವಾರ್ತೆ
ಬೆಂಗಳೂರು: ಏ.10. ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಕುರುಬರಹಳ್ಳಿಯ ಜೆ.ಸಿ ನಗರದ ಮುಖ್ಯ ರಸ್ತೆಯಲ್ಲಿ ಮಾನ್ಯ ಸ್ಥಳೀಯ ಶಾಸಕರು ಹಾಗೂ ಅಬಕಾರಿ ಸಚಿವರಾದ ಕೆ.ಗೋಪಾಲಯ್ಯ ಅವರು ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು.

ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದಲ್ಲಿ ಜನಸಾಮಾನ್ಯರ ಆರೋಗ್ಯದ ಕಾಳಜಿಯಿಂದ ಉತ್ತಮ ಆಸ್ಪತ್ರೆಗಳು, ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಸರ್ಕಾರಿ ಶಾಲೆ, ಮಹಾನಗರ ಪಾಲಿಕೆ ಶಾಲೆಗಳು, ನವ ನಂದಿನಿ ಉದ್ಯಾನವನ ನಿರ್ಮಾಣ ಹಾಗೂ ಕೋವಿಡ್ ಅವಧಿಯಲ್ಲಿ  350 ಕ್ಕೂ ಹೆಚ್ಚಿನ ಆಕ್ಸಿಜನ್ ಸಿಲಿಂಡರ್ ಗಳನ್ನು ನೀಡಿ ಕ್ಷೇತ್ರದ ಜನತೆಯ ಉಳಿವಿಗಾಗಿ ಶ್ರಮವಹಿಸಿ ಕಾರ್ಯನಿರ್ವಹಣೆ ಹೀಗೆ ಹಲವಾರು ಅಭಿವೃದ್ಧಿ ಕೆಲಸಗಳನ್ನು ಮುಂದೆ ಇಟ್ಟು ಮಾನ್ಯ ಸಚಿವರು ಮತಯಾಚನೆಯನ್ನು ಮಾಡಿದರು.

ಚುನಾವಣಾ ಪ್ರಚಾರದ ವೇಳೆಯಲ್ಲಿ ಜನಸಾಮಾನ್ಯರಿಂದ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಮತಯಾಚನೆಗೆ ತೆರಳಿದ ಸಂದರ್ಭದಲ್ಲಿ ಸ್ಥಳೀಯರು ಸಚಿವರು ಮುಂದೆ ಅನೇಕ ಕುಂದುಕೊರತೆಗಳನ್ನು ತಿಳಿಸಿದರು. ಅವರೆಲ್ಲರ ಅಹವಾಲುಗಳನ್ನು ಸ್ವೀಕರಿಸಿ ಶೀಘ್ರದಲ್ಲಿ ಕ್ರಮವಹಿಸುವುದಾಗಿ ಭರವಸೆ ನೀಡಿದರು.

ಚುನಾವಣೆ ಪ್ರಚಾರದ ವೇಳೆಯಲ್ಲಿ ಯುವ ಮುಖಂಡರು ಹಾಗೂ ಹಿರಿಯ ಮುಖಂಡರುಗಳು ವಿವಿಧ ಪಕ್ಷಗಳನ್ನು ತೊರೆದು ಬಿಜೆಪಿಗೆ ಸೇರ್ಪಡೆಗೊಂಡರು. ಅವರಿಗೆ ಮಾನ್ಯ ಸಚಿವರು ಪಕ್ಷದ ಶಾಲು ಹಾಕಿ ಆತ್ಮೀಯವಾಗಿ ಸ್ವಾಗತಿಸಿದರು.

ಇದೇ ಸಂದರ್ಭದಲ್ಲಿ ಮಂಡಲದ ಅಧ್ಯಕ್ಷ ರಾಘವೇಂದ್ರ ಶೆಟ್ಟಿ, ಬಿಜೆಪಿ ಉತ್ತರ ಘಟಕದ ಜಿಲ್ಲಾ ಅಧ್ಯಕ್ಷ ಜಯರಾಮ್, ಜಯಸಿಂಹ, ಅವಿನ್ ಆರಾಧ್ಯ, ಕಲ್ಲೇಶಪ್ಪ, ಸುಬ್ಬಣ್ಣ, ಚಾಲುಕ್ಯ ರಮೇಶ್, ವಾರ್ಡ್ ಅಧ್ಯಕ್ಷ ಮಂಜುನಾಥ್, ಮಹಿಳಾ ಮುಖಂಡರು, ಸ್ಥಳೀಯ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.


Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ