Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗೃಹಲಕ್ಷ್ಮೀ: ತಾಂತ್ರಿಕ ಸಮಸ್ಯೆ ಕೂಡಲೇ ಪರಿಹರಿಸಲು ಸಚಿವೆ ಹೆಬ್ಬಾಳ್ಕರ್ ಸೂಚನೆ

ಸುದ್ದಿಮೂಲ ವಾರ್ತೆ

ಬೆಂಗಳೂರು, ನ.2: ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ತ್ವರಿಗತಿಯಲ್ಲಿ ಹಣ ಸಂದಾಯ ಮಾಡಬೇಕು. ತಾಂತ್ರಿಕ ಕಾರಣಗಳಿಂದ ಸಮಸ್ಯೆ ಎದುರಿಸುತ್ತಿರುವ ಫಲಾನುಭವಿಗಳ ಖಾತೆಗೆ ಶೀಘ್ರ ಹಣ ಸಂದಾಯವಾಗುವಂತಾಗಲು ತಾಂತ್ರಿಕ ಕಾರಣಗಳು ಇದ್ದರೆ ಅದನ್ನು ಕೂಡಲೇ ಬಗೆಹರಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ ನೀಡಿದ್ದಾರೆ.

ವಿಧಾನಸೌಧದ ತಮ್ಮ ಕಚೇರಿಯಲ್ಲಿ ಗೃಹಲಕ್ಷ್ಮಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಚಿವರು, ಯೋಜನೆಯ ಸಮರ್ಪಕ ಅನುಷ್ಠಾನಕ್ಕಾಗಿ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತುರ್ತಾಗಿ ಕೈಗೊಳ್ಳಬೇಕೆಂದು ತಿಳಿಸಿದರು.

ಇಲಾಖೆಯ ಉಪ ನಿದೇಶಕರು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಇ-ಗವರ್ನೆನ್ಸ್‌ ಇಲಾಖೆಯ ಸಹಕಾರದೊಂದಿಗೆ ಆಗಿರುವ ಕೆಲವೊಂದು ತಾಂತ್ರಿಕ ನೂನ್ಯತೆಗಳನ್ನು ಪರಿಪಡಿಸಬೇಕು. ಅಂಗನವಾಡಿ ಕಾರ್ಯಕರ್ತೆಯರ ಸಹಕಾರದೊಂದಿಗೆ ಮನೆ ಮನೆಗೆ ತೆರಳಿ ನೋಂದಣಿಯಲ್ಲಿ ಆಗಿರುವ ಸಮಸ್ಯೆಗಳನ್ನು ಇತ್ಯರ್ಥಪಡಿಸಬೇಕೆಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅಧಿಕಾರಿಗಳಿಗೆ ಸೂಚಿಸಿದರು.

ಆಗಸ್ಟ್‌ ತಿಂಗಳಿನಲ್ಲಿ ಶೇಕಡ 88 ರಷ್ಟು ಮಂದಿಗೆ ಹಣ ಸಂದಾಯವಾಗಿದ್ದು, ಸೆಪ್ಟೆಂಬರ್‌ ತಿಂಗಳ ಹಣ ಹಂತ ಹಂತವಾಗಿ ಸಂದಾಯವಾಗುತ್ತಿದೆ. ಅಕ್ಟೋಬರ್‌ ತಿಂಗಳ ಹಣ ಶೇಕಡ 100ರಷ್ಟು ಫಲಾನುಭವಿಗಳಿಗೆ ಸಂದಾಯವಾಗುವಂತೆ ಮಾಡಬೇಕು ಎಂದು ಸಚಿವರು ಹೇಳಿದರು.

ಈ ವೇಳೆ ಇಲಾಖೆ ಕಾರ್ಯದರ್ಶಿ ಡಾ.ಜಿ.ಸಿ.ಪ್ರಕಾಶ್‌, ನಿರ್ದೇಶಕಿ ಎಂ.ಎಸ್.ಅರ್ಚನಾ, ಸಚಿವರ ಆಪ್ತ ಕಾರ್ಯದರ್ಶಿ ಡಾ.ಟಿ.ಎಚ್.ವಿಶ್ವನಾಥ್‌ ಸೇರಿದಂತೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ