Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಮಸ್ಯೆ ಪರಿಹರಿಸುವ ಅಭಯ ನೀಡಿದ ಉಸ್ತುವಾರಿ ಸಚಿವ ಡಾ. ಮಹದೇವಪ್ಪ

ಸುದ್ದಿಮೂಲ ವಾರ್ತೆ

ಮೈಸೂರು,ಸೆ.25:ಒಂದಲ್ಲ, ಎರಡಲ್ಲ, ನೂರಾರು ಸಮಸ್ಯೆಗಳ ಮಹಾಪೂರವೇ ಹರಿದು ಬಂತು. ಪಡಿತರ ಚೀಟಿ ಎಷ್ಷೇ ಅಲೆದರೂ ಸಿಕ್ಕಿಲ್ಲ, ಮನೆ ಖಾತೆ ಬದಲಾವಣೆ ಆಗಬೇಕು, ಮನೆ ಬೇಕು. ವಿದ್ಯುತ್ ಕಂಬ ಅಳವಡಿಸಿಕೊಡಿ, ಜಮೀನಿಗೆ ಕೊಳವೆ ಬಾವಿ ಕೊಡಿಸಿ, ಸಣ್ಣಪುಟ್ಟ ಕೆಲಸ ಮಾಡಿಕೊಡಲು ಅಧಿಕಾರಿಗಳು ಕಚೇರಿಗೆ ಅಲೆಸಿ ಸತಾಯಿಸುತ್ತಾರೆ.

ಹೀಗೆ ಸೋಮವಾರ ಜಿಪಂ ಸಭಾಂಗಣದಲ್ಲಿ ನಡೆದ ಜನತಾ ದರ್ಶನದಲ್ಲಿ ಹರಿದು ಬಂದ ಜನರ ಸಮಸ್ಯೆಗಳನ್ನು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರ ಗಮನಕ್ಕೆ ತಂದರಲ್ಲದೇ ಇಲಾಖಾಧಿಕಾರಿಗಳ ವಿರುದ್ದ ದೂರಿದರು.

ಆಗ ಸಚಿವರು, ಗಂಟೆಗಟ್ಟಲೇ ಜನರ ನೋವು, ನಲಿವುಗಳನ್ನು ಕಿವಿಯಾರೆ ಕೇಳಿ, ಕೂಡಲೇ ಪರಿಹರಿಸಬೇಕು ಎಂದು ಸ್ಥಳದಲ್ಲಿಯೇ ಅಧಿಕಾರಿಗಳಿಗೆ ಸೂಚಿಸಿದರು.

ಈ ವೇಳೆ ಸಚಿವರು ಮಾತನಾಡಿ, ಜನರು ತಾಲೂಕು ಕಚೇರಿಗೆ, ಪೊಲೀಸ್ ಠಾಣೆಗೆ, ಗ್ರಾಮ ಪಂಚಾಯ್ತಿ ಕಚೇರಿ ಸೇರಿದಂತೆ ಅನೇಕ ಕೆಲಸಗಳಿಗಾಗಿ ಪ್ರತಿನಿತ್ಯ ಸರ್ಕಾರಿ ಕಚೇರಿಗಳಿಗೆ ತಿಂಗಳಪೂರ್ತಿ ಅಲೆಯಬಾರದು. ಅಧಿಕಾರಿಗಳು ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಬೇಕು. ಜನರಿಗೆ ಅಗತ್ಯ ಸೌಲಭ್ಯ ಒದಗಿಸಿಕೊಡುವಲ್ಲಿ ತುರ್ತಾಗಿ ಕ್ರಮವಹಿಸಬೇಕು ಎಂದು ಸೂಚಿಸಿದರು.

ಬಡಜನರು ತಮ್ಮ ತಾಳಿ, ಓಲೆಗಳನ್ನು ಅಡವಿಟ್ಟು ಸರ್ಕಾರದ ಸೌಲಭ್ಯ ಪಡೆಯುವಂಥ ಉದಾಹರಣೆ ಕಂಡಿದ್ದೇವೆ. ಇದ್ಯಾವುದಕ್ಕೂ ಅವಕಾಶ ನೀಡದೆ ನಮ್ಮ ಆಡಳಿತವನ್ನು ನೇರವಾಗಿ ಜನರ ಬಳಿಗೆ ಕರೆದೊಯ್ಯುವುದು ನಮ್ಮ ಸರ್ಕಾರದ ಉದ್ದೇಶ ಮತ್ತು ಧ್ಯೇಯವಾಗಿದೆ. ಈ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕು ಎಂದು ತಿಳಿಸಿದರು.

ಅಧಿಕಾರಿಗಳು ಹಳ್ಳಿಗಳಿಗೆ ತೆರಳಿ ಜನರೊಂದಿಗೆ ಸಂವಾದ ಮಾಡದಿದ್ದರೆ, ಅವರ ಕಷ್ಟ ಕಾರ್ಪಣ್ಯ ಅರಿವಾಗುವುದಿಲ್ಲ. ಕಡ್ಡಾಯವಾಗಿ ತಿಂಗಳಲ್ಲಿ ಎಂಟು ದಿನ ಪ್ರವಾಸ ಕೈಗೊಳ್ಳಬೇಕು. ಜನರ ಸಮಸ್ಯೆಗಳಿಗೆ ತ್ವರಿತವಾಗಿ ಹಾಗೂ ಪರಿಣಾಮಕಾರಿಯಾಗಿ ಸ್ಪಂದಿಸಿದರೆ ನಿಮ್ಮ ಕೆಲಸಕ್ಕೆ ಸಾರ್ಥಕತೆ ದೊರಕುತ್ತದೆ. ಜನರ ಕಷ್ಟಗಳನ್ನು ಸಕಾಲಕ್ಕೆ ಬಗೆಹರಿಸುವುದು ಸರ್ಕಾರದ ಪ್ರಮುಖ ಉದ್ದೇಶವಾಗಿದೆ‌. ಇದನ್ನು ಗಮನದಲ್ಲಿರಿಸಿ ಅಧಿಕಾರಿಗಳು ಉತ್ತಮವಾಗಿ ಕೆಲಸ ಮಾಡಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ