Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

'ಸಾಂತ್ವನ' ಯೋಜನೆಗೆ ಸಚಿವ ಜಮೀರ್ ಅಹಮದ್ ಚಾಲನೆ

ಸುದ್ದಿಮೂಲ ವಾರ್ತೆ

ಬೆಂಗಳೂರು, ಅ.19: ಪ್ರವಾಹ, ಅಗ್ನಿ ದುರಂತ, ಕೋಮು ಗಲಭೆ ಹಾಗೂ ಪ್ರಕೃತಿ ವಿಕೋಪದಲ್ಲಿ ಸಂತ್ರಸ್ತರಾಗುವ ಕುಟುಂಬಗಳಿಗೆ ನೇರವಾಗಲು 'ಸಾಂತ್ವನ ' ಯೋಜನೆ ಆರಂಭಿಸಿದೆ.

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಲ್ಲಿ ಆಯೋಜಿಸಿದ್ದ ಕಾರ್ಯಕ್ರಮ ದಲ್ಲಿ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ನೂತನ ಯೋಜನೆಗೆ ಚಾಲನೆ ನೀಡಿ, ಪ್ರಕೃತಿ ವಿಕೋಪ ಹಾಗೂ ಕೋಮು ಗಲಭೆಯಲ್ಲಿ ಸಂತ್ರಸ್ತರಾಗಿ ಮನೆ ಹಾಗೂ ಅಂಗಡಿ ಕಳೆದುಕೊಳ್ಳುವ ಕುಟುಂಬಗಳಿಗೆ ಐದು ಲಕ್ಷ ರೂ. ವರೆಗೆ ಸಾಲ ನೀಡುವ ಯೋಜನೆ ಇದಾಗಿದೆ ಎಂದು ಹೇಳಿದರು.

5 ಲಕ್ಷ ರೂ. ಪೈಕಿ ಶೇ.50 ರಷ್ಟು ಅಂದರೆ 2.50 ಲಕ್ಷ ರೂ. ಸಾಲ, ಉಳಿದ 2.50 ಲಕ್ಷ ಸಬ್ಸಿಡಿ ದೊರೆಯಲಿದ್ದು ಸಾಲಕ್ಕೆ ಶೇ.3 ರಷ್ಟು ಬಡ್ಡಿ ವಿಧಿಸಲಾಗುವುದು. ಈ ಮೊತ್ತದಲ್ಲಿ ಸಂತ್ರಸ್ತ ಕುಟುಂಬಗಳು ವ್ಯಾಪಾರ ಅಥವಾ ಇತರೆ ಉದ್ಯೋಗದಲ್ಲಿ ತೊಡಗಬಹುದುಎಂದು ತಿಳಿಸಿದರು.

ಅಲ್ಪಸಂಖ್ಯಾತರ ಸಮುದಾಯದ ಕುಟುಂಬಗಳಿಗೆ ಈ ಯೋಜನೆಯಡಿಯಲ್ಲಿ ನೆರವು ಸಿಗಲಿದೆ. ಇದರಿಂದ ಸಂಕಷ್ಟ ಕ್ಕೆ ಸಿಲುಕುವ ಕುಟುಂಬಗಳಿಗೆ ನೆರವು ಸಿಗಲಿದೆ ಎಂದು ತಿಳಿಸಿದರು.

ಇದಕ್ಕೂ ಮುನ್ನ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಆಡಳಿತ ಮಂಡಳಿ ಸಭೆಯಲ್ಲಿ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಪಾಲ್ಗೊಂಡರು.

ಕೆಎಂಡಿಸಿ ವ್ಯವಸ್ಥಾಪಕ ನಿರ್ದೇಶಕ ನಜೀರ್, ಇಲಾಖೆ ನಿರ್ದೇಶಕ ಮನೋಜ್ ಜೈನ್ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಯೋಜನಾ ಸಚಿವ ಡಿ. ಸುಧಾಕರ್ ಅವರೊಂದಿಗೆ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಯೋಜನೆಗಳ ಅನುಷ್ಠಾನ ಕುರಿತು ಚರ್ಚಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ