Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೆಪಿಸಿಸಿ ಕಚೇರಿಯಲ್ಲಿ ಸಚಿವ ಜಮೀರ್ ಅಹಮದ್ ಅಹವಾಲು ಸ್ವೀಕಾರ 

ಸುದ್ದಿಮೂಲ ವಾರ್ತೆ

ಬೆಂಗಳೂರು,ಆ.23 :ತಿಂಗಳಲ್ಲಿ ಒಂದು ದಿನ ಸಚಿವರು ಪಕ್ಷದ ಕಚೇರಿಗೆ ಭೇಟಿ ನೀಡುವ ಕಾರ್ಯಕ್ರಮದಡಿ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಅವರು ಬುಧವಾರ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿ ಅಹವಾಲು ಸ್ವೀಕರಿದರು.

ಈ ಸಂದರ್ಭದಲ್ಲಿ ಹೆಬ್ಬಾಳದ ಕ್ರೆಸೆಂಟ್ ಇಂಗ್ಲಿಷ್ ಶಾಲೆಯ 8 ನೇ ತರಗತಿ ವಿದ್ಯಾರ್ಥಿ ಮೊಹಮ್ಮದ್ ತಾಹೀರ್ ಆಮೀರ್ ಸೆ.19 ರಿಂದ 24 ವರೆಗೆ ಇಂಡೋನೇಷ್ಯಾದ ಜಕಾರ್ತದಲ್ಲಿ ನಡೆಯುವ ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್ ಸ್ಪರ್ಧೆಗೆ ಆಯ್ಕೆ ಯಾಗಿದ್ದು, ಅವರ ತಂದೆ ಆಟೋ ಡ್ರೈವರ್ ಆಗಿದ್ದು ಆರ್ಥಿಕ ಸಂಕಷ್ಟ ದಿಂದ ತೆರಳಲು ಸಾಧ್ಯವಾಗುತ್ತಿಲ್ಲ ಎಂದು ಅಳಲು ತೋಡಿಕೊಂಡರು.

ಸಚಿವರು ತಕ್ಷಣ ತಮ್ಮ ವೈಯಕ್ತಿಕ ವೆಚ್ಚದಲ್ಲಿ ಸ್ಪರ್ಧೆ ಗೆ ಹೋಗಿ ಬರುವ ವಿಮಾನ ವೆಚ್ಚ 60 ಸಾವಿರ ರೂ. ಟಿಕೆಟ್ ಮಾಡಿಸಿ ಸ್ಥಳದಲ್ಲೇ ನೀಡಿದ ಶುಭ ಹಾರೈಸಿದರು.

ಇದೇ ಸಂದರ್ಭದಲ್ಲಿ ಆರೋಗ್ಯ, ಶಿಕ್ಷಣ ನೆರವು ಕೋರಿ ಬಂದವರಿಗೆ ವೈಯಕ್ತಿಕ ವೆಚ್ಚದಲ್ಲಿ ಆರ್ಥಿಕ ನೆರವು ನೀಡಿದರು.

ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ವಖ್ಫ್ ಇಲಾಖೆ ಗಳಿಗೆ ಸಂಬಂಧಿಸಿದ ಅರ್ಜಿ ಸ್ವೀಕಾರ ಮಾಡಿ ಸಂಬಂಧ ಪಟ್ಟ ಇಲಾಖೆ ಗಳಿಗೆ ಕಳುಹಿಸಿ ಸೂಕ್ತ ದಾಖಲೆ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಿದರು.

ರಾಜ್ಯದ ವಿವಿಧ ಜಿಲ್ಲೆ ಹಾಗೂ ಬೆಂಗಳೂರು ನಗರದ ನೂರಾರು ಸಾರ್ವಜನಿಕರು, ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಅಹವಾಲು ಸಲ್ಲಿಸಿದರು. ಜಿಲ್ಲಾಧ್ಯಕ್ಷ ಶೇಖರ್ ಮತ್ತಿತರರ ಮುಖಂಡರು ಉಪಸ್ಥಿತರಿದ್ದರು.

ಸಚಿವರು ತಿಂಗಳಲ್ಲಿ ಒಮ್ಮೆ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿ ಅಹವಾಲು ಸ್ವೀಕರಿಸಬೇಕು ಎಂಬ ಪಕ್ಷದ ಆದೇಶದಂತೆ ಇಂದು ಭೇಟಿ ನೀಡಿದ್ದೇನೆ. ಸಾರ್ವಜನಿಕರಿಂದ ಸ್ವೀಕರಿಸಿದ ಅರ್ಜಿ ಪರಿಶೀಲಿಸಿ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಉಸ್ತುವಾರಿ ಜಿಲ್ಲೆ ವಿಜಯನಗರ ಸೇರಿದಂತೆ ರಾಜ್ಯ ಪ್ರವಾಸ ಸಂದರ್ಭದಲ್ಲೂ ಜಿಲ್ಲಾ ಅಥವಾ ತಾಲ್ಲೂಕಿನಲ್ಲಿ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡುತ್ತಿದ್ದೇನೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ