Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಕಲಚೇತನರು ಏನೇ ಸಮಸ್ಯೆ ಇದ್ದರೂ ನನಗೆ ಕರೆ ಮಾಡಿ: ಸಚಿವ ಕೆ.ಗೋಪಾಲಯ್ಯ

ಸುದ್ದಿಮೂಲ ವಾರ್ತೆ

ಬೆಂಗಳೂರು: ಏ.26. ವಿಕಲಚೇತನರು ಯಾವುದೇ ಸಮಸ್ಯೆ ಇದ್ದರೂ ನನಗೆ ಕರೆ ಮಾಡಿ ಅಥವಾ ಕಚೇರಿ ಭೇಟಿ ಮಾಡಿ ನಿಮ್ಮ ಅಹವಾಲನ್ನು ನೀಡಿ ವಿಕಲಚೇತನರ ಏಳಿಗೆಗೆ ಶ್ರಮಿಸುವುದೇ ನನ್ನ ಧ್ಯೇಯ ಎಂದು ಅಬಕಾರಿ ಸಚಿವರಾದ ಕೆ.ಗೋಪಾಲಯ್ಯನವರು ತಿಳಿಸಿದರು.

ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ನಾಗಪುರ ವಾರ್ಡಿನ ವಿಕಲಚೇತನರೊಡನೆ ಸಮಾಲೋಚನೆಯನ್ನು ನಡೆಸಿ ಅವರು ಮಾತನಾಡಿದರು.

ಮೋಟರ್ ಸೈಕಲ್ ಅಗತ್ಯವಿರುವವರು ಅರ್ಜಿಯನ್ನು ಸಲ್ಲಿಸಿ ಚುನಾವಣೆಯ ನಂತರದಲ್ಲಿ ಅವರಿಗೆ ವಿತರಿಸಲಾಗುವುದು ಎಂದರು.

ಕ್ಷೇತ್ರದಲ್ಲಿನ 350 ವಿಕಲಚೇತನರಿಗೆ ಮೋಟಾರ್ ಬೈಕ್ ಅನ್ನು ವಿತರಿಸಲಾಗಿದೆ. ಇದರ ಜೊತೆ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಬರುವ ಸಹಾಯಧನ ಹಾಗೂ ಇನ್ನಿತರ ಸವಲತ್ತುಗಳನ್ನು ನೀಡಲಾಗುವುದು ಎಂದು ಹೇಳಿದರು.

ವಿಶ್ವ ಅಂಗವಿಕಲರ ದಿನಾಚರಣೆಯಂದು ಕ್ಷೇತ್ರದಲ್ಲಿ ಮೆರವಣಿಗೆ ಮೂಲಕ ಭಾರತೀಯ ಜನತಾ ಪಾರ್ಟಿಯ ಧ್ವಜವನ್ನು ಮೋಟಾರ್ ಬೈಕ್‌ನಲ್ಲಿ ಹಾಕಿ ಬೆಂಬಲಿಸುವುದಾಗಿ ತಿಳಿದ ತಮ್ಮೆಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ಕ್ಷೇತ್ರದಲ್ಲಿ ಗೋಪಾಲಯ್ಯ ನವರ ಅಭಿವೃದ್ಧಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಶ್ಲಾಘನೆ ವ್ಯಕ್ತಪಡಿಸಿ, ಕ್ಷೇತ್ರಕ್ಕೆ ಅಭಿವೃದ್ಧಿ ಜನರ ನಡುವಿನ ಒಡನಾಟ ಸಂಬಂಧ ಗೋಪಾಲಯ್ಯನವರಿಗೆ ಹೆಚ್ಚು ಇದೆ. ಈ ಬಾರಿ ನಿಮ್ಮ ಮತ ಗೋಪಾಲಯ್ಯ ಮತ್ತು ಕಮಲಕ್ಕೆ ಗುರುತಿಗೆ ನೀಡಿ ಎಂದು ಹೇಳಿದ್ದಾರೆ .

ರಾಜ್ಯದಲ್ಲಿ 224 ಕ್ಷೇತ್ರದಲ್ಲಿ ಪ್ರವಾಸವನ್ನು ಮಾಡಿದ್ದೇನೆ ಈ ಬಾರಿ ಬಹುಮತ ಸಹಕಾರ ನಮ್ಮ ಭಾರತೀಯ ಜನತಾ ಪಾರ್ಟಿ ಸರ್ಕಾರ ಮತ್ತೊಮ್ಮೆ ಯಡಿಯೂರಪ್ಪ ರವರ ಮಾರ್ಗದರ್ಶನದಲ್ಲಿ ಬಸವರಾಜ ಬೊಮ್ಮಾಯಿ ರವರ ನೇತೃತ್ವದಲ್ಲಿ ಭಾರತೀಯ ಜನತಾ ಪಾರ್ಟಿ ಸರ್ಕಾರ ರಚನೆಯಾಗುತ್ತದೆ ಎಂದರು.

ಬಹಳ ಗಂಭೀರವಾಗಿ ವಿಕಲಚೇತನರ ಬಗ್ಗೆ ಚಿಂತನೆಯನ್ನು ಮಾಡಿ ವಿಕಲಚೇತನರನ್ನು ಜೊತೆಯಾಗಿರಿಸಿಕೊಂಡ ಶಾಸಕರು ಅಂದರೆ ಅವರು ಗೋಪಾಲಯ್ಯ. ಅದಕ್ಕೆ ಸಾಕ್ಷಿ ಜನಸಾಮಾನ್ಯರು ಎಂದರು.

ವಿಕಲಚೇತನರಿಗೆ ಹೆಚ್ಚು ಆದ್ಯತೆ ನೀಡಿದ್ದಾರೆ. ದೇಶದಲ್ಲಿರುವ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ವಿಕಲ ಚೇತನರಿಗೆ ವಿಶೇಷವಾಗಿ ಆದ್ಯತೆಯನ್ನು ನೀಡಬೇಕು..ಪ್ರಧಾನಿ ನರೇಂದ್ರ ಮೋದಿಯವರು ವಿಕಲಚೇತನರಿಗೆ ಪ್ರತ್ಯೇಕವಾಗಿ ಹೆಚ್ಚಿನ ಆಧ್ಯತೆ ಯೊಂದಿಗೆ ಉತ್ತಮ ಸೌಲಭ್ಯವನ್ನು ನೀಡಿದ್ದಾರೆ ಎಂದರು.

ಮಾಜಿ ಶಾಸಕರಾದ ನೆಲ ನರೇಂದ್ರಬಾಬು, ಮಾಜಿ ಉಪಮೇಯರ್ ಹೇಮಲತಾ ಗೋಪಾಲಯ್ಯ, ಮಂಡಲದ ಅಧ್ಯಕ್ಷ ರಾಘವೇಂದ್ರ ಶೆಟ್ಟಿ, ಮಾಜಿ ಬಿಬಿಎಂಪಿ ಸದಸ್ಯ ರಾಜೇಂದ್ರ ಕುಮಾರ್, ಜಯರಾಮ್, ಅರುಣ್, ಗುಣ ಶೇಖರ್, ಜಯಮ್ಮ, ಮಹೇಶ್, ಪ್ರಸನ್ನ, ಲೋಕೇಶ್ ಸೇರಿದಂತೆ ಸ್ಥಳೀಯ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ