Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಚಿವ ಕೆ.ಗೋಪಾಲಯ್ಯ ಬೂತ್ ಮಟ್ಟದ ಸಭೆ





ಸುದ್ದಿಮೂಲ ವಾರ್ತೆ

ಬೆಂಗಳೂರು, ಏ.21: ರಾಜ್ಯದಲ್ಲಿ ಮೇ 10 ರಂದು ನಡೆಯಲಿರುವ ಚುನಾವಣೆಯಲ್ಲಿ ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಮತ್ತಷ್ಟು ಅಭಿವೃದ್ಧಿಗೆ ಬಹುಮತದಿಂದ ಗೆಲ್ಲಿಸಿ ಎಂದು ಸ್ಥಳೀಯ ಶಾಸಕರು ಹಾಗೂ ಅಬಕಾರಿ ಸಚಿವರಾದ ಕೆ.ಗೋಪಾಲಯ್ಯ ಅವರು ತಿಳಿಸಿದರು.

ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಜೆ.ಸಿ ನಗರದಲ್ಲಿ ಇಂದು, ಬೂತ್ ಮಟ್ಟದ ಸಭೆ ನಡೆಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಭಾರತೀಯ ಜನತಾ ಪಾರ್ಟಿಯು 140 ಕಿಂತ ಹೆಚ್ಚಿನ ಸ್ಥಾನವನ್ನು ಗೆದ್ದು, ಬಿಜೆಪಿ ಏಕಾಂಗಿಯಾಗಿ ಸರ್ಕಾರವನ್ನು ನಡೆಸಬೇಕು. ನಮ್ಮೆಲ್ಲರ ನೆಚ್ಚಿನ ಪ್ರಧಾನ ಮಂತ್ರಿ ನರೇಂದ್ರ ಮೋದಿ ರವರ ನಾಯಕತ್ವದ ಬಿಜೆಪಿ ಸರ್ಕಾರವು ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿದೆ ಎಂದರು.

ಕೋವಿಡ್ ಸಂದರ್ಭದಲ್ಲಿ ಜನರಿಗೆ ಮುಖಂಡರು ಮೂರು ಬಾರಿ ಆಹಾರ ಕಿಟ್ ಗಳನ್ನು ವಿತರಿಸಿದ್ದಾರೆ. ಪ್ರತಿಯೊಂದು ಕುಟುಂಬಕ್ಕೂ ಆಹಾರವನ್ನು ತಲುಪಿಸುವಂತಹ ಕೆಲಸವನ್ನು ಮಾಡಿದ್ದಾರೆ. ಇದರ ಜೊತೆಗೆ ಕುಟುಂಬಗಳಿಗೆ ಉಚಿತವಾಗಿ ಮಾತ್ರೆಗಳನ್ನು ತಲುಪಿಸುವಂತಹ ಕೆಲಸ, ಉಸಿರಾಟದ ಸಮಸ್ಯೆ ಇದ್ದವರಿಗೆ ಉಚಿತವಾಗಿ ಆಕ್ಸಿಜನ್ ಕೊಡುವಂತಹ ಕೆಲಸವನ್ನು ಟ್ರಸ್ಟ್ ವತಿಯಿಂದ ಮಾಡಲಾಗಿದೆ ಎಂದರು.

ಕ್ಷೇತ್ರದದಲ್ಲಿ 'ನಮ್ಮ ಕ್ಲಿನಿಕ್' ಅನ್ನು ಪ್ರಾರಂಭಿಸಲಾಗಿದೆ. ನಮ್ಮ ಕ್ಲಿನಿಕ್ ನಲ್ಲಿ ಉಚಿತವಾಗಿ ಥೈರಾಯಿಡ್, ಬಿಪಿ, ಶುಗರ್ ಪರೀಕ್ಷೆಯನ್ನು ಮಾಡಿಸಿಕೊಂಡು ಉಚಿತವಾಗಿ ಮಾತ್ರೆಗಳನ್ನು ನೀಡುವ ವ್ಯವಸ್ಥೆ ಇದೆ ಇದರ ಸದುಪಯೋಗ ಪಡೆದುಕೊಳ್ಳಿ ಎಂದರು.

ಉತ್ತಮ ಆಸ್ಪತ್ರೆಗಳು, ಸರ್ಕಾರಿ ಶಾಲೆ, ಮಹಾನಗರ ಪಾಲಿಕೆ ಶಾಲೆಗಳು, ನವ ನಂದಿನಿ ಉದ್ಯಾನವನ ನಿರ್ಮಾಣ ಹೀಗೆ ಹಲವಾರು ಅಭಿವೃದ್ಧಿ ಕೆಲಸಗಳನ್ನು ಮಾಡಿ ಕ್ಷೇತ್ರದ ಅಭಿವೃದ್ಧಿ ಶ್ರಮಿಸಲಾಗಿದೆ ಎಂದರು.

ಸಭೆಯಲ್ಲಿ ಶ್ರೀನಿವಾಸ್, ಜಯರಾಮ್, ವಾರ್ಡ್ ಅಧ್ಯಕ್ಷ ಮಂಜುನಾಥ್, ವೆಂಕಟೇಶ್ ಮೂರ್ತಿ ಮುರುಳಿ, ಮಲ್ಲಿಕಾರ್ಜುನ, ಸೋಮಣ್ಣ, ಶಿವಣ್ಣ, ಚಂದ್ರಶೇಖರ್, ಸಿದ್ದರಾಜು, ರಮೇಶ್, ಭಾಗ್ಯಮ್ಮ, ಹೇಮಲತಾ, ಸುಧಾ ಮತ್ತು ಸಂದೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.






Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ