Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೇಂದ್ರ ಸರ್ಕಾರದಿಂದ ದ್ವೇಷದ ರಾಜಕಾರಣ: ಸಚಿವ ಕೆ.ಎಚ್. ಮುನಿಯಪ್ಪ

ಸುದ್ದಿಮೂಲ ವಾರ್ತೆ

ಮಾಲೂರು, ಜು.15: ಕೇಂದ್ರ ಸರ್ಕಾರವು ಉದ್ದೇಶಪೂರ್ವಕವಾಗಿಯೇ ರಾಜ್ಯದಲ್ಲಿ ಬಡವರಿಗೆ ನೀಡುವ ಅನ್ನಬಾಗ್ಯ ಪಡಿತರ ಅಕ್ಕಿಗೆ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಭೂಮಾಪನ ಇಲಾಖೆಯ ಸಚಿವ ಕೆಎಚ್ ಮುನಿಯಪ್ಪ ಆರೋಪಿಸಿದ್ದಾರೆ.

ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯತ್ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ಅನ್ನಭಾಗ್ಯ ನೇರ ನಗದು ಸಂದಾಯ ಯೋಜನೆಯ ಫಲಾನುಭವಿಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

ಕಾಂಗ್ರೆಸ್ ಪಕ್ಷವು ಕೇಂದ್ರದಲ್ಲಿ ಆಡಳಿತ ನಡೆಸುವ ವೇಳೆ ಸಾಲ ಮನ್ನಾದಂತಹ ಮಹತ್ವಾಕಾಂಕ್ಷೆ ಯೋಜನೆಗಳಾದ ಉದ್ಯೋಗ ಖಾತ್ರಿ ಮಾಹಿತಿ ಹಕ್ಕು ಆಹಾರ ಭದ್ರತೆ ಕಾಯಿದೆ ಕಾರ್ಯರೂಪಕ್ಕೆ ತಂದಿದೆ. ಸ್ವಾತಂತ್ರ ಪೂರ್ವದಲ್ಲಿ ಗಾಂಧೀಜಿಯವರು ಕಟ್ಟ ಕಡೆಯ ವ್ಯಕ್ತಿಗೆ ಸಾಮಾಜಿಕ ಶೈಕ್ಷಣಿಕ ಆರ್ಥಿಕ ಸಮಾನತೆ ಸಿಗಬೇಕೆಂದು ಕನಸು ಕಂಡಿದ್ದರು. ಅದರಂತೆ ಕಾಂಗ್ರೆಸ್ ಪಕ್ಷದ ಆಡಳಿತದ ಅವಧಿಯಲ್ಲಿ ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ. ತದನಂತರ ಬಂದ ಆಡಳಿತ ಸರ್ಕಾರಗಳು ಕಾಂಗ್ರೆಸ್ ಪಕ್ಷದ ಯೋಜನೆಗಳನ್ನು ಮುಂದುವರಿಸಲಿಲ್ಲ ಎಂದು ಹೇಳಿದರು.

ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಆಡಳಿತಕ್ಕೆ ಬಂದರೆ ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ದಾರರಿಗೆ ಪ್ರತಿ ಕುಟುಂಬದಲ್ಲಿ ತಲಾ ಒಬ್ಬ ವ್ಯಕ್ತಿಗೆ 10 ಕೆಜಿ ಅಕ್ಕಿ ನೀಡುವುದಾಗಿ ಭರವಸೆ ನೀಡಿದ್ದೆವು. ಅದರಂತೆ ಕೇಂದ್ರ ಸರ್ಕಾರಕ್ಕೆ ಅಕ್ಕಿಯನ್ನು ನೀಡುವಂತೆ ಮನವಿ ಮಾಡಿದೆವು. ಕೇಂದ್ರ ಸರ್ಕಾರವು ಉದ್ದೇಶಪೂರ್ವಕವಾಗಿಯೇ 62 ಲಕ್ಷ ಟನ್ ಅತಿ ದಾಸ್ತಾನು ಇದ್ದರೂ ಸಹ ಹಾರಿಕೆ ಉತ್ತರ ನೀಡಿ ಬಡವರು ತಿನ್ನುವ ಅನ್ನದ ಅಕ್ಕಿಯನ್ನು ನೀಡದೆ ದ್ವೇಷ ರಾಜಕಾರಣ ಮಾಡಿದೆ ಎಂದು ಆರೋಪಿಸಿದರು.

ಶೀಘ್ರದಲ್ಲಿಯೇ ಕೇಂದ್ರದ ಸಮಿತಿಗಳ ಮೂಲಕ ರಾಜ್ಯ ಸರ್ಕಾರವು ಟೆಂಡರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಅಕ್ಕಿಯನ್ನು ಖರೀದಿಸಿ ಬಡ ಕುಟುಂಬಗಳಿಗೆ 10 ಕೆಜಿ ಅಕ್ಕಿ ವಿತರಣೆ ಮಾಡಲಾಗುವುದು ಎಂದು ಭರವಸೆ ನೀಡಿದರು.

ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಮಾತನಾಡಿ, ದೇಶದಲ್ಲಿ ನುಡಿದಂತೆ ನಡೆದ ಸರ್ಕಾರ ಭರವಸೆಗಳನ್ನು ಈಡೇರಿಸಿರುವ ಸರ್ಕಾರ ಯಾವುದಾದರೂ ಇದೆ ಎಂದರೆ ಅದು ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ. 5 ಗ್ಯಾರಂಟಿಗಳಿಗೆ ಆಗುವ ಖರ್ಚು 60,000 ಕೋಟಿ ಈ ಹಣ ಯಾರದು ಅಲ್ಲ ಅದು ಜನರ ತೆರಿಗೆ ಹಣವಾಗಿದೆ. ಬಡವರ ಮಧ್ಯಮ ವರ್ಗದವರ ಪರ ಕಾಳಜಿ ಇರುವ ಸರ್ಕಾರವಾಗಿದೆ ಜನರು ನೀಡಿರುವ ತೆರಿಗೆ ಹಣವನ್ನು ಜನರಿಗೆ ನೀಡಲಾಗುತ್ತಿದೆ ಯಾವುದೇ ರಾಜಕಾರಣಿಗೆ ಅಧಿಕಾರ ಇರುವುದು ಮಜಾ ಮಾಡಲು ಅಲ್ಲ. ಕಾಂಗ್ರೆಸ್ ಸರ್ಕಾರ ಭರವಸೆಗಳನ್ನು ನಂಬಿ ಜನತೆ 136 ಶಾಸಕರನ್ನು ಗೆಲ್ಲಿಸಿಕೊಟ್ಟಿದೆ ಜನರಿಗೆ ಚುನಾವಣೆ ಪೂರ್ವದಲ್ಲಿ ನೀಡಿರುವ ಐದು ಗ್ಯಾರಂಟಿಗಳನ್ನು ಈಡೇರಿಸುವುದೇ ನಮ್ಮ ಸರ್ಕಾರದ ಧ್ಯೇಯವಾಗಿದೆ ಎಂದರು.

ಸಂಸದ ಎಸ್ ಮುನಿಸ್ವಾಮಿ ಮಾತನಾಡಿ, ರಾಜಕೀಯ ಪಕ್ಷಗಳು ಚುನಾವಣಾ ಪೂರ್ವದಲ್ಲಿ ನೀಡುವ ಭರವಸೆಗಳನ್ನು ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಪಕ್ಷಾತೀತವಾಗಿ ಯಾವುದೇ ನೀತಿ ನಿಯಮಗಳು ನಿಬಂಧನೆಗಳಿಲ್ಲದೆ ಉಚಿತವಾಗಿ ನೀಡುವ ಜವಾಬ್ದಾರಿ ಆ ಸರ್ಕಾರಕ್ಕೆ ಇರುತ್ತದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಆಡಳಿತ ನಡೆಸುತ್ತಿದ್ದು ತಾವು ನೀಡಿದ ಭರವಸೆ ಗ್ಯಾರಂಟಿಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.

ಶಾಸಕ ಕೆ.ವೈ. ನಂಜೇಗೌಡ ಅಧ್ಯಕ್ಷತೆ ವಹಿಸಿ ಮಾತನಾಡಿ, ನುಡಿದಂತೆ ನಡೆದ ನಮ್ಮ ಕಾಂಗ್ರೆಸ್ ಪಕ್ಷ ವಿಧಾನಸಭಾ ಚುನಾವಣೆ ಸಮಯದಲ್ಲಿ ಮತದಾರರಿಗೆ ನೀಡಿದ ಐದು ಭರವಸೆ ಗ್ಯಾರಂಟಿಗಳನ್ನು ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಹಂತ ಹಂತವಾಗಿ ಪಕ್ಷಾತೀತ ನೀಡುವಲ್ಲಿ ಮುಂದಾಗಿದೆ. ಮುಖ್ಯಮಂತ್ರಿ ಸಿದ್ದರಾಮಣ್ಣಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರ ಆಡಳಿತ ಸರ್ಕಾರವು ನೀಡುವ ಮೂಲಕ ಕೊಟ್ಟ ಮಾತನ್ನು ಉಳಿಸಿಕೊಂಡಿದೆ ಎಂದರು.

ಕಾರ್ಯಕ್ರಮದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಿಲ್ಲಾ ಉಪ ನಿರ್ದೇಶಕಿ ಶೃತಿ, ಜಿಲ್ಲಾ ಉಪ ವಿಭಾಗಾಧಿಕಾರಿ ವೆಂಕಟಲಕ್ಷ್ಮಿ, ಡಿಎಸ್‌ಡಬ್ಲ್ಯೂ ವೆಂಕಟಚಲಪತಿ, ತಹಶೀಲ್ದಾರ್ ಕೆ.ರಮೇಶ್, ತಾಪಂ ಇಒ ಮುನಿರಾಜು ಪೊಲೀಸ್ ಹೆಚ್ಚುವರಿ ಅಧೀಕ್ಷಕ ಭಾಸ್ಕರ್, ಡಿವೈಎಸ್ಪಿ ಮುರಳಿಧರ್ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ವಿ ಮುನೇಗೌಡ, ಆಹಾರ ಶಿರಸ್ತೆದಾರ್ ದುರ್ಗಾ ಪ್ರಸಾದ್, ನಿರೀಕ್ಷಕರಾದ ಚಂದ್ರಮೋಹನ್ ಮಂಜುನಾಥ್, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಚಂದ್ರಪ್ಪ, ಬೆಸ್ಕಾಂ ಕಾರ್ಯಪಾಲಕ ಅಭಿಯಂತರ ಅನ್ಸರ್ ಬಾಷಾ ಬಿ ಒ ಚಂದ್ರಕಲಾ ಸಮನ್ವಯ ಅಧಿಕಾರಿ ನಂಜುಂಡ ಗೌಡ ಇನ್ನಿತರರು ಹಾಜರಿದ್ದರು.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ