Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯಾದ್ಯಂತ “ಪೆಹಲಾ ಓಟ್”‌ ಅಭಿಯಾನಕ್ಕೆ ಸಚಿವ ಕೃಷ್ಣ ಭೈರೇಗೌಡ ಚಾಲನೆ

ಬೆಂಗಳೂರು, ಆ, 10; ಬರುವ 2024 ರ ಲೋಕಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ಮತದಾನ ಮಾಡುತ್ತಿರುವ ಯುವ ಸಮೂಹವನ್ನು ಸೆಳೆಯಲು ರಾಜ್ಯಾದ್ಯಂತ “ಪೆಹಲಾ ಓಟ್‌” [ಮೊದಲ ಮತ] ಅಭಿಯಾನಕ್ಕೆ ಹಿರಿಯ ಕಾಂಗ್ರೆಸ್‌ ಮುಖಂಡ ಹಾಗೂ ಕಂದಾಯ ಸಚಿವ ಕೃಷ್ಣ ಭೈರೇಗೌಡ ಚಾಲನೆ ನೀಡಿದರು.



ಸಹಕಾರ ನಗರದ ತಮ್ಮ ಕಚೇರಿಯಲ್ಲಿ ರಾಜ್ಯದಲ್ಲಿ ಮೊದಲ ಮತದಾನ ಅಭಿಯಾನದ ಜವಾಬ್ದಾರಿ ಹೊತ್ತಿರುವ ರಾಷ್ಟ್ರೀಯ ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಹಾಗೂ ಏಐಸಿಸಿ ಸದಸ್ಯ ಎಂ.ಎಸ್.‌ ರಕ್ಷಾ ರಾಮಯ್ಯ ಅವರ ಸಮ್ಮುಖದಲ್ಲಿ ಸಚಿವರು ಪ್ರಚಾರ ವಾಹನಗಳಿಗೆ ಹಸಿರು ನಿಶಾನೆ ತೋರಿದರು. 18 ರಿಂದ 23 ವಯಸ್ಸಿನ ಮೊದಲ ಬಾರಿಗೆ ಲೋಕಸಭೆಯಲ್ಲಿ ಮತದಾನ ಮಾಡುತ್ತಿರುವವರನ್ನು ಸೆಳೆಯಲು ಈ ಅಭಿಯಾನ ಆಯೋಜಿಸಲಾಗಿದೆ.

 

ನಂತರ ಮಾತನಾಡಿದ ಎಂ.ಎಸ್.ರಕ್ಷಾ ರಾಮಯ್ಯ, ಯುವ ಸಮೂಹ ದೇಶದ ಯುವ ಶಕ್ತಿಯಾಗಿದ್ದು, ಮೊದಲ ಮತ ಅಭಿಯಾನ ಯುವ ಜನಾಂಗದ ಆಂದೋಲನವಾಗಲಿದೆ. ಅಭಿಯಾನದಲ್ಲಿ ಸಂವಾದ, ತಂತ್ರಜ್ಞಾನ ಆಧಾರಿತ ಪ್ರಚಾರ, ಕ್ಯೂ.ಆರ್.‌ ಕೋಡ್‌ ಮೂಲಕ ಮತದಾರರ ಪಟ್ಟಿಗೆ ಹೆಸರು ನೋಂದಣಿ ಮಾಡಲು ಅಗತ್ಯ ವ್ಯವಸ್ಥೆ ಮಾಡಲಾಗಿದೆ. ಸರಕು ಸಾಗಾಣೆ ವಾಹನಗಳಲ್ಲಿ ಎಲ್.ಇ.ಡಿ ವ್ಯವಸ್ಥೆ, ಶಾಲಾ ಕಾಲೇಜುಗಳು, ಟ್ಯೂಷನ್‌ ತಾಣಗಳು, ಬಸ್‌ ನಿಲ್ದಾಣಗಳು, ಮಾಲ್‌ ಗಳಲ್ಲಿ ಮತದಾನದ ಬಗ್ಗೆ ಅರಿವು ಮೂಡಿಸುವ ಉದ್ದೇಶ ಹೊಂದಲಾಗಿದೆ ಎಂದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಆಯೋಜಿಸಿದ್ದ ಯುವ ಮತ ಅಭಿಯಾನಕ್ಕೆ ಅಭೂಪೂರ್ವ ಸ್ಪಂದನೆ ದೊರೆತಿದ್ದು, ಕಾಂಗ್ರೆಸ್‌ ಪಕ್ಷ ಶೇ 42 ರಷ್ಟು ಯುವ ಮತದಾರರನ್ನು ಸೆಳೆಯುವಲ್ಲಿ ಯಶಸ್ವಿಯಾಗಿತ್ತು. ಬಿಜೆಪಿಯನ್ನು ಹಿಂದಿಕ್ಕಿ ಕಾಂಗ್ರೆಸ್ ಮುನ್ನಡೆ ಸಾಧಿಸಿತ್ತು. ಈ ಸಫಲತೆಯ ನಂತರ ಇದೀಗ ಪೆಹಲಾ ಓಟ್‌ ಅಭಿಯಾನ ಆರಂಭಿಸಲಾಗಿದೆ. ಲೋಕಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ಮತಚಲಾಯಿಸುತ್ತಿರುವವರನ್ನು ಸೆಳೆಯುವ ಸವಾಲು ನಮ್ಮ ಮುಂದಿದ್ದು, ನಮಗೆ ಉತ್ತಮ ಬೆಂಬಲ ದೊರೆಯುವ ನಿರೀಕ್ಷೆಯಿದೆ. ಪ್ರಚಾರ ವಾಹನಗಳು ರಾಜ್ಯಾದ್ಯಂತ ಸಂಚರಿಸಲಿವೆ. ಮತದಾನದ ಮಹತ್ವದ ಬಗ್ಗೆ ಪಕ್ಷದ ಮುಖಂಡರು, ಕಾರ್ಯಕರ್ತರು ಸಹ ಅರಿವು ಮೂಡಿಸಲಿದ್ದಾರೆ ಎಂದು ಹೇಳಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ