Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜನಪರ ಯೋಜನೆಗಳನ್ನು ಮನೆಮನೆಗೆ ತಲುಪಿಸಿ: ಸಚಿವ ಎಂ.ಟಿ.ಬಿ. ನಾಗರಾಜ್

ಸುದ್ದಿಮೂಲ ವಾರ್ತೆ
ಹೊಸಕೋಟೆ, ಏ.10: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನಪರ ಯೋಜನೆಗಳನ್ನ ಮನೆ ಮನೆಗೆ ಸುದ್ದಿಯನ್ನು ಮುಟ್ಟಿಸಬೇಕು ಎಂದು ಸಚಿವ ಎಂಟಿಬಿ ನಾಗರಾಜ್ ತಿಳಿಸಿದರು.

ತಾಲೂಕಿನ ಸೊಣ್ಣೆಬಾಚನಹಳ್ಳಿ ಗ್ರಾಮದಲ್ಲಿ ಬಿಜೆಪಿ ಪಕ್ಷದ ವತಿಯಿಂದ ಪ್ರಚಾರ ಸಭೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಈ ಗ್ರಾಮಕ್ಕೆ ನನ್ನ ಆಡಳಿತ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ. ನನ್ನ ಜೀವಿತಕಾಲದಲ್ಲಿ ಜನರ ಸೇವೆಗಾಗಿ ಮುಡುಪಾಗಿಟ್ಟಿದ್ದೇನೆ. ನಿಮ್ಮ ಗ್ರಾಮಕ್ಕೆ ಬೇಕಾಗುವ ಅಭಿವೃದ್ಧಿ ಕಾರ್ಯಗಳನ್ನು ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿಪಡಿಸಲಾಗುವುದು ಎಂದು ಭರವಸೆ ನೀಡಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅನೇಕ ಅಭಿವೃದ್ಧಿ ಯೋಜನೆಗಳನ್ನು ಕಾರ್ಯಕ್ರಮಗಳನ್ನು ಜನತೆಗೆ
ನೀಡಿದ್ದೇವೆ. ಆದ್ದರಿಂದ ದಯಮಾಡಿ ತಾವೆಲ್ಲರೂ ತಪ್ಪದೆ ಬಿಜೆಪಿ ಪಕ್ಷಕ್ಕೆ ಮತ ನೀಡಿ ನನ್ನನ್ನು ಜಯಶೀಲರನ್ನಾಗಿ ಮಾಡಬೇಕೆಂದು ಮನವಿ ಮಾಡಿದರು.

30ಕ್ಕೂ ಹೆಚ್ಚು ಕುಟುಂಬಗಳು ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಪಕ್ಷಕ್ಕೆ ಸಚಿವ ಎಂಟಿಬಿ ನಾಗರಾಜ್ ಸಮ್ಮುಖದಲ್ಲಿ ಹಾಗು ಮುಖಂಡರಾದ ಬಿ.ಎಮ್ .ನಾರಾಯಣಸ್ವಾಮಿ, ಗ್ರಾಮ ಪಂಚಾಯತಿ ಸದಸ್ಯ ಬಾಬು ನೇತೃತ್ವದಲ್ಲಿ ಸೇರ್ಪಡೆಗೊಂಡರು.

ಬಿಜೆಪಿ ಅಧ್ಯಕ್ಷ ಕೆ. ಸತೀಶ್, ಮುಖಂಡರಾದ ಬಿ ಎಂ ನಾರಾಯಣಸ್ವಾಮಿ, ಗ್ರಾಮ ಪಂಚಾಯತಿ ಸದಸ್ಯ ಬಾಬು ಹಾಗೂ ಮುಖಂಡರಾದ ವೆಂಕಟೇಗೌಡ, ಪ್ರಫುಲ್ ಚಂದ್ರ, ರಾಜಣ್ಣ  ಮುಂತಾದವರು ಹಾಜರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ