Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಸಚಿವ ರಾಮಲಿಂಗಾರೆಡ್ಡಿ ಘೋಷಣೆ 

ಸುದ್ದಿಮೂಲ ವಾರ್ತೆ

ಬೆಂಗಳೂರು,ಅ.2: ರಾಜಧಾನಿಯ ಕೇಂದ್ರ ಭಾಗದ ಬಸ್ ನಿಲ್ದಾಣದಲ್ಲಿ ಗಾಂಧಿ ಪಾಯಿಂಟ್ ಕ್ಯಾಂಟೀನ್ ತೆರೆಯಲು ನಿರ್ಧರಿಸಿದ್ದು, ಇದರಿಂದ ನಾಲ್ಕು ಸಾರಿಗೆ ಸಂಸ್ಥೆಗಳ‌ ಚಾಲನಾ ಸಿಬ್ಬಂದಿಗಳಿಗೆ ಬಹಳ ಅನುಕೂಲವಾಗಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ಬಿಎಂಟಿಸಿಯ 4ನೇ ಘಟಕದಲ್ಲಿ ಮಹಾತ್ಮ ಗಾಂಧೀಜಿಯವರ ಜಯಂತಿಯನ್ನು ಸರಳ‌ ಮತ್ತು ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಘಟಕದ ಸಿಬ್ಬಂದಿಗಳಿಗೆ ರಿಯಾಯಿತಿ ದರದಲ್ಲಿ ಉತ್ತಮ‌ ದರ್ಜೆಯ ತಿಂಡಿ ಮತ್ತು ಊಟವನ್ನು ಒದಗಿಸಲು ಗಾಂಧೀ ಪಾಯಿಂಟ್ ಹೆಸರಿನ ಕ್ಯಾಂಟಿನ್ ಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈಗಾಗಲೇ ಬಿ ಎಂ ಟಿ ಸಿ‌ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಕ್ಯಾಂಟೀನ್ ತೆರೆಯುವ ಕಾರ್ಯ ಪ್ರಗತಿಯಲ್ಲಿದೆ. ನಗರದ ಕೇಂದ್ರ ಭಾಗದಲ್ಲಿರುವ ಬಸ್ ನಿಲ್ದಾಣದಲ್ಲಿ ಕ್ಯಾಂಟೀನ್ ತೆರೆಯುವುದರಿಂದ ನಾಲ್ಕು ಸಾರಿಗೆ ಸಂಸ್ಥೆಗಳ‌ ಚಾಲನಾ ಸಿಬ್ಬಂದಿಗಳಿಗೆ ಬಹಳ ಅನುಕೂಲವಾಗಲಿದೆ. ಉತ್ತಮ ಗುಣಮಟ್ಟದ ಆಹಾರವು ರಿಯಾಯಿತಿ ದರದಲ್ಲಿ ದೊರಕಲಿದೆ. ಇದೇ ರೀತಿ ಇತರೆ ಘಟಕಗಳಲ್ಲಿಯೂ ಕ್ಯಾಂಟೀನ್ ಪ್ರಾರಂಭಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಮುಖ್ಯಮಂತ್ರಿ ಸಿದ್ಧರಾಮಯ್ಯ ಸಾರಿಗೆ ಸಿಬ್ಬಂದಿಗಳಿಗೆ ಉತ್ತಮ ಗುಣಮಟ್ಟದ ತಿಂಡಿ, ಊಟ ಒದಗಿಸೋ ಕ್ಯಾಂಟಿನ್ ತೆರೆಯೋದಾಗಿ ತಿಳಿಸಿದ್ದರು. ಅದರಂತೆ ಸೋಮವಾರ ಬೆಂಗಳೂರಿನ ಬಿಎಂಟಿಸಿಯ 4ನೇ ಘಟಕದಲ್ಲಿ ಉತ್ತಮ ದರ್ಜೆಯ, ರಿಯಾಯಿತಿ ದರದಲ್ಲಿ ಊಟ, ತಿಂಡಿ ಒದಗಿಸುವ ಗಾಂಧಿ ಪಾಯಿಂಟ್ ಕ್ಯಾಂಟಿನ್ ಆರಂಭಗೊಂಡಿದೆ.

ಈ ಸಮಾರಂಭದಲ್ಲಿ ಕೀರ್ತಿಚಂದ್ರ, ವಿಭಾಗೀಯ ನಿಯಂತ್ರಣಾಧಿಕಾರಿ, ಬಿಎಂಟಿಸಿ ದಕ್ಷಿಣ ವಿಭಾಗ, ರವೀಂದ್ರ ಘಟಕ ವ್ಯವಸ್ಥಾಪಕರು, ಜಯನಗರ ಘಟಕ -4 ಹಾಗೂ ಘಟಕದ ಸಿಬ್ಬಂದಿಗಳು ಹಾಜರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ