Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದಲ್ಲಿ ಹೂಡಿಕೆ ಹೆಚ್ಚಳ: ಕಾನ್ಸುಲ್ ಜನರಲ್ ಜತೆ ಸಚಿವರ ಚರ್ಚೆ

ಸುದ್ದಿಮೂಲ ವಾರ್ತೆ

ಡಲ್ಲಾಸ್, ಅ.2: ಅಮೆರಿಕದ ಕಂಪನಿಗಳು ಕರ್ನಾಟಕದೊಂದಿಗೆ ಹೆಚ್ಚುಹೆಚ್ಚು ಆರ್ಥಿಕ ಸಹಭಾಗಿತ್ವ ಹೊಂದುವ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ ಅವರು ಇಲ್ಲಿನ ಭಾರತೀಯ ಕಾನ್ಸುಲ್ ಜನರಲ್ ಡಿ ಸಿ ಮಂಜುನಾಥ್ ಅವರೊಂದಿಗೆ ಭಾನುವಾರ ವಿಸ್ತೃತ ವಿಚಾರ ವಿನಿಮಯ ನಡೆಸಿದ್ದಾರೆ.

ಈ ಸಂಬಂಧ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ‘ಕರ್ನಾಟಕ ಸರಕಾರ ಮತ್ತು ಅಮೆರಿಕ ಪರಸ್ಪರ ಲಾಭದಾಯಕವಾಗುವ ರೀತಿಯಲ್ಲಿ ಆರ್ಥಿಕ ಮತ್ತು ವಾಣಿಜ್ಯ ಸಂಬಂಧಗಳನ್ನು ಗಟ್ಟಿಗೊಳಿಸಿಕೊಳ್ಳುವ ಒಲವು ಹೊಂದಿವೆ. ಇದಕ್ಕೆ ತಕ್ಕಂತೆ, ಹೂಡಿಕೆದಾರರಿಗೆ ನಷ್ಟವಾಗದಂತೆ ಸುಲಲಿತ ವಹಿವಾಟು ಸಂಸ್ಕೃತಿಯನ್ನು ಮತ್ತು ಅನಗತ್ಯವಾದ ಯಾವುದೇ ಕಠಿಣ ನಿಯಂತ್ರಣವಿಲ್ಲದಂತಹ ನೀತಿಗಳನ್ನು ಜಾರಿಗೆ ತರುವ ಖಾತ್ರಿ ನೀಡಲಾಗಿದೆ’ ಎಂದಿದ್ದಾರೆ.

ಐಟಿ, ಬಿಟಿ, ಎಲೆಕ್ಟ್ರಾನಿಕ್ಸ್, ಸೆಮಿ ಕಂಡಕ್ಟರ್, ವಿದ್ಯುತ್ ಚಾಲಿತ ವಾಹನ ತಯಾರಿಕೆ ಮುಂತಾದ ವಲಯಗಳಲ್ಲಿ ಕರ್ನಾಟಕವು ಪರಿಣತಿ ಹೊಂದಿದೆ. ಈ ಕ್ಷೇತ್ರಗಳಲ್ಲೇ ಅಮೆರಿಕದ ಕಂಪನಿಗಳೊಂದಿಗೆ ಹೆಚ್ಚಿನ ಸಹಭಾಗಿತ್ವ ಸ್ಥಾಪಿಸಿಕೊಳ್ಳುವುದು ಅಪೇಕ್ಷಣೀಯವಾಗಿದೆ. ಸ್ಪರ್ಧಾತ್ಮಕ ವಾತಾವರಣವಿದ್ದಾಗ ಇದು ಅಗತ್ಯವಾಗಿದ್ದು, ಇದರಿಂದ ರಾಜ್ಯದ ಬೊಕ್ಕಸಕ್ಕೆ ಹೆಚ್ಚಿನ ಆದಾಯ ಹರಿದು ಬರಲಿದೆ ಎಂದು ಅವರು ಹೇಳಿದ್ದಾರೆ.

ಅಮೆರಿಕ ಕೂಡ ಭಾರತದಂತೆಯೇ ಪ್ರಜಾಸತ್ತಾತ್ಮಕ ರಾಷ್ಟ್ರವಾಗಿರುವುದು ನಮಗೆ ಅನುಕೂಲಕರವಾಗಿದೆ. ಪಾಶ್ಚಾತ್ಯ ಜಗತ್ತಿನಲ್ಲಿ ಈ ದೇಶವು ಇಂದಿಗೂ ಬಲಾಢ್ಯ ಆರ್ಥಿಕತೆಯಾಗಿದೆ. ಚೀನಾದಿಂದ ನಮಗೆ ಎದುರಾಗುತ್ತಿರುವ ಸ್ಪರ್ಧೆಯನ್ನು ಎದುರಿಸಲು ನಮಗಿರುವ ಪರಿಣತಿಯನ್ನು ಮುನ್ನೆಲೆಗೆ ತರಬೇಕು. ಜೊತೆಗೆ ಹೂಡಿಕೆದಾರರಿಗೆ ನಷ್ಟವಾಗದಂತೆ ನೋಡಿಕೊಂಡು, ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿರುವ ಅಮೆರಿಕದ ಉದ್ಯಮಗಳೊಂದಿಗೆ ಕೈಜೋಡಿಸಬೇಕು ಎಂದು ಸಚಿವರು ಪ್ರತಿಪಾದಿಸಿದ್ದಾರೆ.

ರಾಜ್ಯದ ಹಿತದೃಷ್ಟಿಯಿಂದ ಸಹಭಾಗಿತ್ವ ಮತ್ತು ಹೂಡಿಕೆ ಎರಡೂ ಏರುತ್ತಾ ಹೋಗಬೇಕಾಗಿದೆ. ಇದು ಸಾಧ್ಯವಾಗಬೇಕೆಂದರೆ ಕೌಶಲ್ಯ ಪೂರೈಕೆ, ಕೈಗಾರಿಕಾ ರಂಗ ಮತ್ತು ಶಿಕ್ಷಣ ಕ್ಷೇತ್ರಗಳ ನಡುವೆ ಸಮನ್ವಯ, ಗುಣಮಟ್ಟದ ಕಲಿಕೆ ಎಲ್ಲವೂ ಇರುವಂತೆ ನೋಡಿಕೊಳ್ಳಬೇಕಿದ್ದು, ಇದಕ್ಕೆ ರಾಜ್ಯ ಸರಕಾರವು ಬದ್ಧವಾಗಿದೆ. ಇಂತಹ ದೂರದೃಷ್ಟಿ ಇಟ್ಟುಕೊಂಡೇ ಕರ್ನಾಟಕವು ಹಲವು ಉಪಯುಕ್ತ ನೀತಿಗಳನ್ನು ರೂಪಿಸಿದೆ ಎನ್ನುವುದನ್ನು ಕಾನ್ಸುಲ್ ಜನರಲ್ ಅವರ ಗಮನಕ್ಕೆ ತರಲಾಗಿದೆ ಎಂದು ಪಾಟೀಲ ವಿವರಿಸಿದ್ದಾರೆ.

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ ಅವರು ಅಮೆರಿಕದಲ್ಲಿನ ಭಾರತೀಯ ಕಾನ್ಸುಲ್ ಜನರಲ್ ಡಿ ಸಿ ಮಂಜುನಾಥ್ ಅವರನ್ನು ಡಲ್ಲಾಸ್ ನಗರದಲ್ಲಿ ಭಾನುವಾರ ಭೇಟಿಯಾಗಿ, ಚರ್ಚಿಸಿದರು. ಜೊತೆಯಲ್ಲಿ ಉನ್ನತಾಧಿಕಾರಿಗಳಾದ ಎಸ್.ಸೆಲ್ವಕುಮಾರ್ , ಏಕರೂಪ್ ಕೌರ್ ಮತ್ತು ಗುಂಜನ್ ಕೃಷ್ಣ ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ