Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನ್ಯಾಯಾಲಯದಲ್ಲಿ ಕೆಐಎಡಿಬಿ ಪ್ರಕರಣ: ವರದಿ ನೀಡಲು ಸಚಿವರ ಸೂಚನೆ

ಸುದ್ದಿಮೂಲ ವಾರ್ತೆ

ಬೆಂಗಳೂರು, ಜೂ.27: ಕರ್ನಾಟಕ ಪ್ರದೇಶ ಕೈಗಾರಿಕಾಭಿವೃದ್ಧಿ ಮಂಡಳಿ (ಕೆಐಎಡಿಬಿ) ವತಿಯಿಂದ ಹಂಚಿಕೆಯಾಗಿರುವ ನಿವೇಶನಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಬಾಕಿಇರುವ ಪ್ರಕರಣಗಳ ವಿವರವನ್ನು ಜು.17ರೊಳಗೆ ನೀಡಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸವಿವ ಎಂ.ಬಿ. ಪಾಟೀಲ ಸೂಚನೆ ನೀಡಿದ್ದಾರೆ.

ಈ ಸಂಬಂಧ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಅವರು ಮಂಗಳವಾರ ಇಲ್ಲಿ ಸುದೀರ್ಘ ಸಭೆ ನಡೆಸಿದ ಅವರು, ಕೋರ್ಟ್ ಪ್ರಕರಣಗಳ ಅಂಕಿಸಂಖ್ಯೆ, ಅವುಗಳ ಸ್ಥಿತಿಗತಿ, ಸ್ವಾಧೀನ ಪ್ರಕ್ರಿಯೆಯಲ್ಲಿ ಆಗಿರುವ ಲೋಪಗಳು ಇತ್ಯಾದಿಗಳ ಬಗ್ಗೆ ವಿವರ ನೀಡಬೇಕು ಎಂದು ಸೂಚಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, 'ಕೆಐಎಡಿಬಿ ನಿವೇಶನ ಹಂಚಿಕೆ ಸಂಬಂಧ ಕಳೆದ 4-5 ವರ್ಷಗಳಲ್ಲಿ 1,748 ಮೊಕದ್ದಮೆಗಳು ದಾಖಲಾಗಿವೆ. ಈ ಪೈಕಿ 921 ಪ್ರಕರಣಗಳ ವಿಚಾರಣೆ ನಡೆಯುತ್ತಿದ್ದು, 762 ಪ್ರಕರಣಗಳಲ್ಲಿ ಸರಕಾರದ ಪರ ಆದೇಶ ಬಂದಿದೆ. ಆದರೆ, ಸರಕಾರದ ಹಿತಾಸಕ್ತಿ ಇರುವ ಕೆಲವು ಪ್ರಕರಣಗಳಲ್ಲಿ ನಾವು ಮೇಲ್ಮನವಿಯನ್ನೇ ಸಲ್ಲಿಸಿಲ್ಲ. ಇನ್ನು ಮುಂದೆ ಇಂತಹ ಪ್ರಕರಣಗಳಲ್ಲಿ ಎಲ್ಲವನ್ನೂ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮತ್ತು ಕಾನೂನು ಇಲಾಖೆಯ ಗಮನಕ್ಕೆ ತಂದು, ಸಲಹೆ ಪಡೆಯಬೇಕು. ಜೊತೆಗೆ ಅಡ್ವೊಕೇಟ್‌ ಜನರಲ್ ಅವರ ಅಭಿಪ್ರಾಯವನ್ನೂ ಕೇಳಬೇಕು,' ಎಂದರು.

ಕೋಲಾರದ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ 10 ವರ್ಷಗಳ ಹಿಂದೆಯೇ 92 ಎಕರೆ ಜಮೀನನ್ನು ಸ್ವಾಧೀನ ಪಡಿಸಿಕೊಂಡಿದ್ದರೂ ಅಂತಿಮ ಅಧಿಸೂಚನೆಯನ್ನೇ ಹೊರಡಿಸಿಲ್ಲ. ಇದು ಈಗ ಕಗ್ಗಂಟಾಗಿದೆ. ಇದರಲ್ಲಿ ಕೆಲವರು ಅಧಿಸೂಚನೆಯ ಪರವಾಗಿದ್ದರೆ, ಕೆಲವರು ವಿರೋಧಿಸುತ್ತಿದ್ದಾರೆ. ಇದನ್ನು ಸಮಗ್ರವಾಗಿ ಪರಿಶೀಲಿಸಿ, ಸೂಕ್ತ ರೀತಿಯಲ್ಲಿ ಬಗೆಹರಿಸಬೇಕು. ಭೂ ಸ್ವಾಧೀನ ಪ್ರಕ್ರಿಯೆಯಲ್ಲಿ ಸರಿಯಾದ ವಿಧಿವಿಧಾನ ಅನುಸರಿಸದೆ ಇರುವುದೇ ಪ್ರಕರಣಗಳು ನ್ಯಾಯಾಲಯದ ಮೆಟ್ಟಿಲೇರಲು ಕಾರಣವಾಗಿವೆ ಎಂದು ಅವರು ನಿರ್ದೇಶಿಸಿದರು.

ಕೈಗಾರಿಕೆಗಳ ಬಳಕೆಗೆಂದು ಸರಕಾರದ ಬಳಿ ಈಗ 11 ಸಾವಿರ ಎಕರೆ ಭೂಮಿ ಇದ್ದು, ಇದರ ಮೌಲ್ಯ 8ರಿಂದ 10 ಸಾವಿರ ಕೋಟಿ ರೂ. ಆಗುತ್ತದೆ. ರಾಜ್ಯದಲ್ಲಿ ಎಲ್ಲೆಂದರಲ್ಲಿ ಕೈಗಾರಿಕಾ ಪ್ರದೇಶಗಳನ್ನು ಮಾಡುವ ಬದಲು ಬೇಡಿಕೆ ಆಧರಿಸಿ ಮಾಡಬೇಕು. ಇದರಲ್ಲಿ ರಾಜಕೀಯ ಒತ್ತಡಕ್ಕೆ ಮಣಿಯಬಾರದು. ಜತೆಗೆ ಒಂದು ನಿರ್ದಿಷ್ಟ ಮಾದರಿಯ ಉದ್ಯಮಗಳಿಗೆ ಮೀಸಲಿಟ್ಟಿರುವ ಜಾಗಗಳಲ್ಲಿ ಅಂತಹ ಉದ್ದಿಮೆಗಳು ನಿರೀಕ್ಷಿತ ಪ್ರಮಾಣದಲ್ಲಿ ಬಾರದಿದ್ದರೆ, ಅಲ್ಲಿರುವ ಜಾಗವನ್ನು ಉಳಿದ ಉದ್ದಿಮೆಗಳಿಗೂ ಒದಗಿಸುವ ನೀತಿಯನ್ನು ಅಳವಡಿಸಿ ಕೊಳ್ಳಲಾಗುವುದು ಎಂದು ಅವರು ವಿವರಿಸಿದರು.

ರಾಜ್ಯದಲ್ಲಿ ಅಗತ್ಯ ಆಧಾರಿತ ಉದ್ದಿಮೆಗಳನ್ನು ಪ್ರೋತ್ಸಾಹಿಸಬೇಕು. ಇಲ್ಲದೆ ಹೋದರೆ ಎಲ್ಲವೂ ಬರೀ ಭೂಸ್ವಾಧೀನದ ಹಂತದಲ್ಲೇ ನಿಂತು ಹೋಗುತ್ತದೆ. ನಮ್ಮಲ್ಲಿ ಕೈಗಾರಿಕಾ ಉದ್ದೇಶಕ್ಕೆಂದು ವಶಪಡಿಸಿಕೊಂಡಿರುವ ಜಮೀನು ದಶಕಗಳ ನಂತರವೂ ಹಾಗೆಯೇ ಉಳಿದುಕೊಂಡಿರುವುದಕ್ಕೆ ಇದೇ ಮೂಲಕಾರಣವಾಗಿದೆ ಎಂದು ಪಾಟೀಲ ಪ್ರತಿಪಾದಿಸಿದರು.

ಸಭೆಯಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್‌ ಕೃಷ್ಣ, ಕೆಐಎಡಿಬಿ ಆಯುಕ್ತ ಮಹೇಶ್‌ ಮುಂತಾದವರು ಉಪಸ್ಥಿತರಿದ್ದರು.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ