Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಧ್ಯವರ್ತಿಗಳಿಗೆ ಕಡಿವಾಣ ಹಾಕಲು ಸಚಿವ ತಂಗಡಗಿ ಸೂಚನೆ

ಸುದ್ದಿಮೂಲ ವಾರ್ತೆ

ಬೆಂಗಳೂರು, ಜೂ.30: ಡಿ.ದೇವರಾಜ ಅರಸು ಅಭಿವೃದ್ಧಿ ನಿಗಮದಿಂದ ನೀಡುವ 'ಸ್ವಯಂ ಉದ್ಯೋಗ ವೈಯಕ್ತಿಕ ಸಾಲ' ಯೋಜನೆಗೆ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದ್ದು, ಇದಕ್ಕೆ ಕೂಡಲೇ ಕಡಿವಾಣ ಹಾಕುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ವಿಧಾನಸೌಧದ ತಮ್ಮ ಕೊಠಡಿಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಶುಕ್ರವಾರ ಸಚಿವರು ಸಭೆ ನಡೆಸಿ ಸೂಚನೆ ನೀಡಿದರು.

ಪ್ರತಿ ಜಿಲ್ಲೆಯಲ್ಲಿ ನೇರ ಸಾಲ ಯೋಜನೆಗೆ ಮಧ್ಯವರ್ತಿಗಳು ಹುಟ್ಟುಕೊಂಡಿದ್ದಾರೆ. ಫಲಾನುಭವಿಗಳಿಗಿಂತ ಮೊದಲೇ ಮಧ್ಯವರ್ತಿಗಳು ಫಲಾನುಭವಿಗಳ ಬಳಿ ಹೋಗುತ್ತಾರೆ. ಈ ಮಧ್ಯವರ್ತಿಗಳ ಹಾವಳಿಗೆ ಮೊದಲು ಕಡಿವಾಣ ಹಾಕಬೇಕು. ನೇರ ಸಾಲದಲ್ಲಿ ನೀಡಲಾಗುವ 50 ಸಾವಿರ ಹಣವನ್ನು ಒಬ್ಬ ಫಲಾನುಭವಿಗೆ ನೀಡಿದರೂ ಆ ಹಣ ಫಲಾನುಭವಿಗೆ ನೇರ ಉಪಯೋಗಕ್ಕೆ ಬರಬೇಕು. ಈ ಯೋಜನೆಗೆ ಹೊಸ ರೂಪ ನೀಡಿ. ಕಂತಿನ ರೂಪದಲ್ಲಾದರೂ ಫಲಾನುಭವಿಗಳಿಗೆ ಹಣ ತಲುಪುವಂತೆ ಆಗಬೇಕು ಎಂದು ಹೇಳಿದರು.

ರೈತರಿಗೆ ಅನುಕೂಲ ಮಾಡಿಕೊಡಿ:

ಗಂಗಾ ಕಲ್ಯಾಣ ಯೋಜನೆಯಡಿ ಮೂರು ವರ್ಷದಲ್ಲಿ 19,862 ಕೊಳವೆ ಬಾವಿ ಕೊರೆಯಲು ಗುರಿ ಹಾಕಿಕೊಳ್ಳಲಾಗಿದ್ದು, ಕೇವಲ ಒಂದು ಸಾವಿರ ಕೊಳವೆ ಬಾವಿ ಕೊರೆದಿರುವುದಕ್ಕೆ ಸಚಿವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಗಂಗಾ ಕಲ್ಯಾಣ ಯೋಜನೆಯಿಂದ ಸಾವಿರಾರು ರೈತರಿಗೆ ಉಪಯೋಗವಾಗಲಿದೆ. ಮೊದಲ ಹಂತದಲ್ಲಿ ಗಂಗ ಕಲ್ಯಾಣ ಯೋಜನೆಗೆ ಆದ್ಯತೆ ನೀಡಿ, ಹಾಕಿಕೊಂಡಿರುವ ಯೋಜನೆಯಂತೆ ಕೊಳವೆ ಬಾವಿ ಕೊರೆದು ಪೂರ್ಣಗೊಳಿಸುವಂತೆ ಸಭೆಯಲ್ಲಿದ್ದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಭೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಾರ್ಯದರ್ಶಿ ತುಳಸಿ ಮದಿನೇನಿ, ಆಯುಕ್ತ ಕೆ.ದಯಾನಂದ್, ದೇವರಾಜ ಅರಸು ನಿಗಮದ ವ್ಯವಸ್ಥಾಪಕ ನಿರ್ದೇಶಕ ಕಾಂತರಾಜು, ಉಪ್ಪಾರ ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ.ಸಿ.ಕೆ.ಜಗದೀಶ್ ಕುಮಾರ್, ಅಧಿಕಾರಿಗಳಾದ ಮಧುಸೂದನ್ ರೆಡ್ಡಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ದುಂದು ವೆಚ್ಚಕ್ಕೆ ಕಡಿವಾಣ ಹಾಕಿ:

ಕೆಲವೊಂದು ನಿಗಮಗಳು ಸ್ವಂತ ಕಟ್ಟಡ ಇಲ್ಲದೇ, ಖಾಸಗಿ ನಿವೇಶನಕ್ಕೆ ಲಕ್ಷಾಂತರ ರೂಪಾಯಿ ಬಾಡಿಗೆ ಕಟ್ಟುವುದನ್ನು ಅಧಿಕಾರಿಗಳು ಸಚಿವರು ಗಮನಕ್ಕೆ ತಂದರು‌.

ಇದರಿಂದ ಅಸಮಾಧಾನಗೊಂಡ ಸಚಿವ ಶಿವರಾಜ್ ತಂಗಡಗಿ ಅವರು ಅನವಶ್ಯಕವಾಗಿ ಇಂತಹದ್ದಕ್ಕೆ ದುಂದು ವೆಚ್ಚ ಮಾಡುವುದು ಸರಿಯಲ್ಲ. ಸ್ವಂತ ಕಟ್ಟಡದಲ್ಲೇ ನಿಗಮಗಳಿಗೆ ಸ್ಥಳ ಒದಗಿಸಿ ಬಾಡಿಗೆಗೆ ಒದಗಿಸುವ ಇಂತಹ ಹಣವನ್ನು ಇತರ ಯೋಜನೆಗಳಿಗೆ ಬಳಕೆ ಮಾಡಿಕೊಳ್ಳುವುದರಿಂದ ಉಪಯುಕ್ತವಾಗಲಿದೆ ಎಂದು ಸಚಿವರು ಅಧಿಕಾರಿಗಳಿಗೆ ತಿಳಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ