Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬರ ಪರಿಸ್ಥಿತಿ ನಿರ್ವಹಣೆಗೆ ಸಣ್ಣ ನೀರಾವರಿ ಇಲಾಖೆ ಸಜ್ಜು

ಸುದ್ದಿಮೂಲ ವಾರ್ತೆ

ಬೆಂಗಳೂರು, ಆ.31: ಕೇಂದ್ರ ಅಂತರ್ಜಲ ನಿರ್ದೇಶನಾಲಯ ಪ್ರತಿ ಐದು ವರ್ಷಗಳಿಗೆ ಒಮ್ಮೆ ಬಿಡುಗಡೆ ಮಾಡುವ ವರದಿಯಲ್ಲಿ ರಾಜ್ಯದಲ್ಲಿ ಅಂತರ್ಜಲ ಕುಸಿತದ ಬಗ್ಗೆ ಆತಂಕ ವ್ಯಕ್ತಪಡಿಸಿದೆ. ಆದರೆ, ನಾವು ಅಂತರ್ಜಲ ಹೆಚ್ಚಳ ಮಾಡುವ ಸಂಬಂಧ ಸಾಕಷ್ಟು ಸುಧಾರಣಾ ಕ್ರಮಗಳನ್ನು ಕೈಗೊಂಡಿದ್ದು, ಭೂಗರ್ಭದಲ್ಲಿ ನೀರಿನ ಮಟ್ಟ ಗಣನೀಯವಾಗಿ ಹೆಚ್ಚಳವಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ತಿಳಿಸಿದರು.

ಇಂದು ವಿಕಾಸಸೌಧದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಪ್ರಕಟವಾಗಿರುವ ಕೇಂದ್ರ ಸರಕಾರದ 6ನೇ ನೀರಾವರಿ ಗಣತಿಯ ಕುರಿತು 2017-18 ರಲ್ಲಿ ಸಮೀಕ್ಷೆ ನಡೆಸಲಾಗಿದೆ. ಅದರ ಹಿಂದಿನ ವರ್ಷಗಳಿಗೆ ಹೋಲಿಕೆ ಮಾಡಿದರೆ ರಾಜ್ಯದಲ್ಲಿ ಸಣ್ಣ ನೀರಾವರಿ ಯೋಜನೆಗಳ ಸಂಖ್ಯೆ ಹೆಚ್ಚಳವಾಗಿದೆ. ಆದರೆ, ನೀರಿನ 2017 ಮತ್ತು 2018ರಲ್ಲಿ ಬರದ ಪರಿಸ್ಥಿತಿ ಇತ್ತು. ಆ ಬಳಿಕ ಕೋವಿಡ್ ಬಂದು ಕೆಲವು ಕಾಮಗಾರಿಗಳು ಸ್ಥಗಿತವಾಗಿದ್ದವು. ಇಂತಹ ಕಾರಣಗಳಿಂದ ಮೊದಲ ಮೂರು ವರ್ಷ ಆ ಪರಿಸ್ಥಿತಿ ಇತ್ತು. ಆದರೀಗ ಸಾಕಷ್ಟು ಬದಲಾವಣೆಯಾಗಿದೆ ಎಂದರು.

ಬರ ಪರಿಸ್ಥಿತಿಯನ್ನು ಸಮಪರ್ಕವಾಗಿ ನಿಭಾಯಿಸುವ ನಿಟ್ಟಿನಲ್ಲಿ ಸಣ್ಣ ನೀರಾವರಿ ಇಲಾಖೆಯ ವತಿಯಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕೆ.ಸಿ ವ್ಯಾಲಿ ಮತ್ತು ಹೆಚ್.ಎನ್ ವ್ಯಾಲಿಯಂತಹ ಯೋಜನೆಗಳಿಂದ ರಾಜ್ಯದ ಬಯಲು ಸೀಮೆಯ 164 ತಾಲ್ಲೂಕುಗಳಲ್ಲಿ ಅಂತರ್ಜಲ ಮಟ್ಟ ಗಣನೀಯವಾಗಿ ಏರಿಕೆಯಾಗಿದೆ. ಅಷ್ಟೇ ಅಲ್ಲದೆ, ಮಲೆನಾಡಿನ ತಾಲ್ಲೂಕುಗಳಿಗೆ ಹೋಲಿಸಿದಲ್ಲಿ ಬಯಲು ಸೀಮೆಯ ತಾಲ್ಲೂಕುಗಳಲ್ಲಿ ಅಂತರ್ಜಲ ಹೆಚ್ಚಾಗಿದೆ ಎಂದು ಹೇಳಿದರು.

2022 -23 ನೇ ಉಲ್ಲೇಖಿತ ವರ್ಷವನ್ನಾಧರಿಸಿ ಕೇಂದ್ರ ಸರಕಾರದ 7ನೇ ಸಣ್ಣ ನೀರಾವರಿ ಗಣತಿ ಕಾರ್ಯವು ಸದ್ಯದಲ್ಲೇ ಪ್ರಾರಂಭವಾಗಲಿದೆ. ಮುಂದಿನ ಸಲ ಬರುವಂತಹ ವರದಿಯಲ್ಲಿ ಈಗ ಕೈಗೊಂಡಿರುವ ಯೋಜನೆಗಳ ಸಾಧನೆ ಪ್ರತಿಫಲವಾಗುವ ನಿರೀಕ್ಷೆಯಿದೆ ಎಂದು ಹೇಳಿದರು.

ಬರ ಪರಿಸ್ಥಿತಿ ನಿರ್ವಹಣೆಗಾಗಿ ಇಲಾಖೆ ಸಜ್ಜು:

ನೀರಾವರಿ ಇಲಾಖೆಯ ವ್ಯಾಪ್ತಿಯಲ್ಲಿ 3,673 ಕೆರೆಗಳಿವೆ. ಏತ ನೀರಾವರಿ ಯೋಜನೆಗಳ ಮೂಲಕ ಇವುಗಳನ್ನು ತುಂಬಿಸುವ ಕಾರ್ಯ ನಡೆಯುತ್ತದೆ. ಈ ಬಾರಿ ಕಡಿಮೆ ಮಳೆಯಾಗಿರುವ ಹಿನ್ನಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕೆರೆಗಳಲ್ಲಿ ನೀರು ತುಂಬಿಲ್ಲ. ಅಂಕಿ ಅಂಶಗಳನ್ನು ಪರಿಗಣಿಸಿದಲ್ಲಿ ಶೇಕಡಾ 30 ಕ್ಕೂ ಕಡಿಮೆ ನೀರು ಶೇಖರಣೆ ಇರುವ ಕೆರೆಗಳ ಸಂಖ್ಯೆ 334 ಎಂದು ವಿವರ ನೀಡಿದರು.

'ಕೆರೆಗಳಲ್ಲಿ ನೀರನ್ನು ಸಂಗ್ರಹಿಸಿ ಇಟ್ಟುಕೊಂಡು ಬರ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಸಣ್ಣ ನೀರಾವರಿ ಮತ್ತು ಗ್ರಾಮೀಣಾಭಿವೃದ್ದಿ ಇಲಾಖೆಯ ವ್ಯಾಪ್ತಿಯಲ್ಲಿನ ಕೆರೆಗಳ ತೂಬುಗಳಿಂದ ಕೃಷಿ ಚಟುವಟಿಕೆಗಳಿಗೆ ನೀರನ್ನ ಹರಿಸುವ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ. ಇದೇ ಸಮಯದಲ್ಲಿ ಕುಡಿಯುವ ನೀರಿನ ಅವಶ್ಯಕತೆಗೆ ಹೆಚ್ಚಿನ ಒತ್ತು ನೀಡುವಂತೆ ಸೂಚನೆ ನೀಡಿದ್ದೇನೆ', ಎಂದು ಸಚಿವರು ತಿಳಿಸಿದರು.

ಪಿಎಂಕೆಎಸ್‌ವೈ ಮತ್ತು ಅಟಲ್ ಭೂಜಲ ಯೋಜನೆಯ ಅಡಿಯಲ್ಲಿ ಕೇಂದ್ರ ಸರಕಾರಕ್ಕೆ ಅಗತ್ಯ ಪ್ರಸ್ತಾವನೆಗಳನ್ನು ಸಲ್ಲಿಸಲಾಗಿದೆ. ಪಿಎಂಕೆಎಸ್ವೈ ಯೋಜನೆಯ ಅಡಿಯಲ್ಲಿ ಕೇಂದ್ರ ಸರಕಾರ ಶೇಕಡಾ 60 ರಷ್ಟು ರಾಜ್ಯ ಸರಕಾರ ಶೇಕಡಾ 40 ರಷ್ಟು ಅನುದಾನ ನೀಡುವ ಯೋಜನೆಯ ಅಡಿಯಲ್ಲಿ ಕೇಂದ್ರ ಸರಕಾರ 439 ಕೋಟಿ ರೂಪಾಯಿಗಳ 138 ಕಾಮಗಾರಿಗಳಿಗೆ ಒಪ್ಪಿಗೆ ನೀಡಿದ್ದು, ಇನ್ನೂ 1892 ಕೋಟಿ ರೂಪಾಯಿಗಳ ವೆಚ್ಚದ 851 ಕಾಮಗಾರಿಗಳ ಪ್ರಸ್ತಾವನೆಗೆ ಒಪ್ಪಿಗೆ ನೀಡುವ ಕಾರ್ಯ ಇನ್ನೂ ಬಾಕಿಯಿದೆ ಎಂದು ಹೇಳಿದರು.

ಕೇಂದ್ರ ಸರಕಾರ ಶೇಕಡಾ 100 ರಷ್ಟು ಅನುದಾನ ನೀಡುವ ಯೋಜನೆಯಾಗಿರುವ ಅಟಲ್ ಭೂಜಲ ಯೋಜನೆಯ ಅಡಿಯಲ್ಲಿ 2020 ರಿಂದ 5 ವರ್ಷಗಳ ಬಳಕೆಗಾಗಿ 1007 ಕೋಟಿ ರೂಪಾಯಿಗಳನ್ನು ನೀಡಿದೆ. ಸಣ್ಣ ನೀರಾವರಿ, ಕೃಷಿ, ತೋಟಗಾರಿಕೆ ಮತ್ತು ವಾಟರ್ ಶೇಡ್ ಇಲಾಖೆಯಗಳು ಸಮನ್ವಯದಿಂದ 14 ಜಿಲ್ಲೆಗಳ 41 ತಾಲ್ಲೂಕುಗಳ 1199 ಗ್ರಾಮ ಪಂಚಾಯತಿಗಳಲ್ಲಿ ಅಂತರ್ಜಲ ಅಭಿವೃದ್ದಿಗೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬಹುದಾಗಿದೆ. ಈ ನಿಟ್ಟಿನಲ್ಲಿ ಈಗಾಗಲೇ 50 ಕೋಟಿ ರೂಪಾಯಿಗಳ ಯೋಜನೆಗಳನ್ನು ಪ್ರಾರಂಭಿಸಲಾಗಿದೆ ಎಂದು ತಿಳಿಸಿದರು.

ಸಣ್ಣ ನೀರಾವರಿ ಇಲಾಖೆ ಕಾರ್ಯದರ್ಶಿ ಯತೀಶ್‌ಚಂದ್ರ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

ಇಸ್ರೋ ವಿಜ್ಞಾನಿಗಳಿಗೆ ಸನ್ಮಾನ: ಶೀಘ್ರವೇ ದಿನಾಂಕ ನಿಗದಿ

ಇಸ್ರೋ ವಿಜ್ಞಾನಿಗಳನ್ನ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವತಿಯಿಂದ ಸನ್ಮಾನಿಸಲಾಗುವುದು. ಇಲಾಖೆಯ ಕಾರ್ಯದರ್ಶಿಗಳು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು ಕಾರ್ಯಕ್ರಮದ ರೂಪ ರೇಷೆಗಳ ಬಗ್ಗೆ ಇಂದು ಚರ್ಚಿಸಲಾಗಿದೆ ಎಂದು ಸಚಿವ ಎನ್.ಎಸ್ ಬೋಸರಾಜು ತಿಳಿಸಿದರು.

ಚಂದ್ರಯಾನ –3ರ ಸಫಲತೆಗೆ ಕಾರಣೀಭೂತರಾದ ವಿಜ್ಞಾನಿಗಳನ್ನು ರಾಜ್ಯ ಸರಕಾರದ ವತಿಯಿಂದ ಸನ್ಮಾನಿಸುವ ಕಾರ್ಯಕ್ರಮವನ್ನು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವತಿಯಿಂದ ಆಯೋಜಿಸಲು ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. ಸೆ.2ರಂದು ಆದಿತ್ಯ ಎಲ್-1 ಉಡಾವಣೆ ಇರುವುದರಿಂದ ಇಸ್ರೋ ವಿಜ್ಞಾನಿಗಳು ಶ್ರೀಹರಿಕೋಟಾದಲ್ಲಿದ್ದಾರೆ. ಅವರು ಅಲ್ಲಿಂದ ಮರಳಿದ ಬಳಿಕ ವಿಜ್ಞಾನಿಗಳು ಮತ್ತು ಸರ್ಕಾರದ ಸಮಯ ಗಮನಿಸಿ ಅಭಿನಂದನೆಯ ದಿನಾಂಕ ನಿಗದಿಪಡಿಸಲಾಗುವುದು ಎಂದು ಹೇಳಿದರು.

ಕಾರ್ಯಕ್ರಮದ ಸಮಯದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವತಿಯಿಂದ ಅಂತರಿಕ್ಷ ಕ್ಷೇತ್ರದಲ್ಲಿ ಭಾರತದ ದೇಶದ ಸಾಧನೆ ಪ್ರದರ್ಶನವನ್ನು ಆಯೋಜಿಸುವ ಬಗ್ಗೆಯೂ ಸಹ ಅಧಿಕಾರಿಗಳೊಂದಿಗೆ ನಡೆದ ಪೂರ್ವಭಾವಿ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಸಚಿವರು ತಿಳಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ