Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಶಾಸಕಿ ಅನಿತಾಕುಮಾರ ಸ್ವಾಮಿ ಸ್ಪಷ್ಟನೆ

ಸುದ್ದಿಮೂಲ ವಾರ್ತೆ


ಬೆಂಗಳೂರು, ಏ.4: ಪ್ರಸ್ತುತ ವಿಧಾನಸಭಾ ಚುನಾವಣೆಯಲ್ಲಿ ಅನಿತಾ ಕುಮಾರ ಸ್ವಾಮಿ ಸ್ವರ್ಧಿಸಲಿದ್ದಾರೆ ಎಂಬ ಮಾಹಿತಿಯು ಸುಳ್ಳು ಎಂದು ಅನಿತಾಕುಮಾರ ಸ್ವಾಮಿ ಸ್ಪಷ್ಟಪಡಿಸಿದ್ದಾರೆ.


ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುತ್ತೇನೆಂಬ ವದಂತಿಯು ಶುದ್ಧಸುಳ್ಳು ಮತ್ತು ಅಪಪ್ರಚಾರದ ಭಾಗವಷ್ಟೇ. ಮತ್ತೊಮ್ಮೆ ನಾನು ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ. ರಾಮನಗರ ಕ್ಷೇತ್ರವನ್ನು ಪುತ್ರ ನಿಖಿಲ್‌ ಕುಮಾರಸ್ವಾಮಿಗೆ ಬಿಟ್ಟುಕೊಟ್ಟಿದ್ದೇನೆ. ಪುನಃ ಸ್ಪರ್ಧಿಸುವ ಮಾತೆಲ್ಲಿ? 2008ರಲ್ಲಿ ಆಪರೇಷನ್‌ ಕಮಲದ ಉಪ ಚುನಾವಣೆಯಲ್ಲಿ ಅವರ ಆದೇಶ ಗೌರವಿಸಿ ಸ್ಪರ್ಧಿಸಿದ್ದೆ ಎಂದು ಅವರು ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ.


ನಂತರದ ಚುನಾವಣೆಯಲ್ಲಿ ಶ್ರೀ ವೀರಭದ್ರಯ್ಯ ಮಧುಗಿರಿ ಕ್ಷೇತ್ರವನ್ನು ಸಂತೋಷದಿಂದ ಬಿಟ್ಟುಕೊಟ್ಟು ಪಕ್ಷದ ಕೆಲಸ, ಮನೆಗಷ್ಟೇ ಸೀಮಿತವಾದೆ. 2013ರಲ್ಲಿ ಕೂಡ ಕಾರ್ಯಕರ್ತರ ಒತ್ತಡಕ್ಕೆ ತಲೆಕೊಟ್ಟು ಚನ್ನಪಟ್ಟಣದಲ್ಲಿ ಸ್ಪರ್ಧಿಸಬೇಕಾಯಿತು. ಪಕ್ಷ ಹಾಗೂ ವರಿಷ್ಠರ ಆದೇಶವನ್ನಷ್ಟೇ ಪಾಲಿಸಿದೆ. 2018ರ ಉಪ ಚುನಾವಣೆ ವೇಳೆ ರಾಮನಗರ ಕ್ಷೇತ್ರದ ಉಪ ಚುನಾವಣೆಯಲ್ಲಿ ಸ್ಪರ್ಧಿಸಿದೆ. ಹೀಗೆ ಪಕ್ಷ ಹಾಗೂ ವರಿಷ್ಠರ ಆದೇಶವನ್ನು ಶಿರಸಾ ಪಾಲಿಸಿದ್ದೇನೆ ಈ ಕ್ಷೇತ್ರ ಅಭಿವೃದ್ಧಿಗೆ ಶ್ರಮಿಸಿದ್ದೇನೆ ಎಂದಿದ್ದಾರೆ.


ಚುನಾವಣೆಯ ಕಣದಿಂದ ಹಿಂದೆ ಸರಿದು ಪಕ್ಷದ ಶ್ರಯೋಭಿವೃದ್ಧಿ ಹಾಗೂ ಕ್ಷೇತ್ರದ ಜನರ ಒಳಿತಿಗಾಗಿಯಷ್ಟೇ ಕೆಲಸ ಮಾಡುತ್ತಿದ್ದೇನೆ. ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡರು ಕಟ್ಟಿದ ಈ ಪಕ್ಷಕ್ಕೆ ಧಕ್ಕೆ ತರುವ ಅಥವಾ ಕುಟುಂಬದ ಗೌರವಕ್ಕೆ ಚ್ಯುತಿಯುಂಟು ಮಾಡುವ ಕೆಲಸ ಮಾಡಿಲ್ಲ, ಮುಂದೆ ಮಾಡುವುದೂ ಇಲ್ಲ. ಎಂದು ಟ್ವಿಟರ್ ಮೂಲಕ ಸಂದೇಶ ನೀಡಿದ್ದಾರೆ.

Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ