Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್ ಶಾಸಕರಿಗೂ ಸರ್ಕಾರದ ಮೇಲೆ ಅಸಮಾಧಾನವಿದೆ : ಶಾಸಕ ಜಿ.ಟಿ.ದೇವೇಗೌಡ

ಸುದ್ದಿಮೂಲ ವಾರ್ತೆ

ಮೈಸೂರು, ಜು.31 : ಕೇವಲ ಬಿಜೆಪಿ, ಜೆಡಿಎಸ್ ನಾಯಕರು ಮಾತ್ರವಲ್ಲ. ಕಾಂಗ್ರೆಸ್ ಶಾಸಕರಿಗೂ ಸರ್ಕಾರದ ಮೇಲೆ ಅಸಮಾಧಾನವಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದಲ್ಲಿ 30ಕ್ಕೂ ಹೆಚ್ಚು ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ.

ಸೋಮವಾರ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿ 135ಶಾಸಕರು ಇದ್ದಾರೆ. ಸರ್ಕಾರ ಬೀಳಿಸಲು ಆಗುತ್ತಾ,ಆಗಲ್ಲವಾ ? ಎಂಬುದು ಬೇರೆ ಪ್ರಶ್ನೆ, ಆದರೆ.ಕುಮಾರಸ್ವಾಮಿ ದೇವೇಗೌಡರು ಯಾವುದೇ ಸರ್ಕಾರವನ್ನು ಬೀಳಿಸಿಲ್ಲ. ಈಗಲೂ ಸರ್ಕಾರ ಬೀಳಿಸಕ್ಕೂ ಹೋಗಲ್ಲ.ಸರ್ಕಾರ ಹಳಿ ತಪ್ಪಿದಾಗ ಎಚ್ಚರಿಸುವ ಕೆಲಸ ಮಾಡುತ್ತಾ ಬಂದಿದ್ದಾರೆ. ಮುಂದಿನ ದಿನಗಳಲ್ಲಿಯೂ ಮುಂದುವರೆಸುತ್ತಾರೆ ಎಂದು ತಿಳಿಸಿದರು.

ರಾಜ್ಯ ಸರ್ಕಾರ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಮಾಡಿಲ್ಲ ಸರ್ಕಾರಕ್ಕೆ ಆದಾಯ ಕ್ರೋಢೀಕರಿಸಲು ಯಾವುದೇ ಸಮಸ್ಯೆಯಿಲ್ಲ.ಯಾವುದಾದರು ಮೂಲದಿಂದ ಗ್ಯಾರಂಟಿ ಯೋಜನೆಗಳಿಗೆ ಹಣ ಸಂಗ್ರಹ ಮಾಡಬಹುದು. ನಾನು ಸಹ ಕಾಂಗ್ರೆಸ್ ಗ್ಯಾರಂಟಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದೇನೆ. ಮುಂದಿನ ದಿನಗಳಲ್ಲಾದರೂ ಅನುದಾನ ಕೊಡುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ