Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹನಿಟ್ರ್ಯಾಪ್ ಆರೋಪಕ್ಕೆ ಶಾಸಕ ಮುನಿರತ್ನ ತಿರುಗೇಟು

ಸುದ್ದಿಮೂಲ ವಾರ್ತೆ

ಬೆಂಗಳೂರು, ಜು.24: ಆರ್. ಆರ್ ನಗರ ಕ್ಷೇತ್ರ ದಕ್ಕಿಸಿಕೊಳ್ಳಲು ಕೆಲವರು ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ. ನನ್ನ ವಿರುದ್ಧ ವೇಲು ನಾಯ್ಕರ್ ಮೂಲಕ ಆರೋಪ ಮಾಡಿಸಲಾಗುತ್ತಿದೆ ಎಂದು ಶಾಸಕ ಮುನಿರತ್ನ ಆರೋಪಿಸಿದ್ದಾರೆ.

ಹನಿಟ್ರ್ಯಾಪ್ ಆರೋಪ ಕುರಿತು ಪ್ರತಿಕ್ರಿಯೆ ನೀಡಿರುವ ಮುನಿರತ್ನ, ’’ಹಿಂದೆ ನನ್ನ ಜೊತೆ ಇದ್ದವರು ಈಗ ಕಾಂಗ್ರೆಸ್ ಸೇರಿ ನನ್ನ ಮೇಲೆ ಗಂಭೀರ ಆರೋಪ ಮಾಡುತ್ತಿದ್ದಾರೆ. ಆದರೆ, ಆರೋಪ ಮಾಡುತ್ತಿರುವುದಕ್ಕಿಂತ ಮಾಡಿಸುತ್ತಿದ್ದಾರೆ ಎನ್ನಬಹುದು. ಆರ್ ಆರ್ ನಗರ ಕ್ಷೇತ್ರವನ್ನು ಖಾಲಿ ಮಾಡಿಸಬೇಕು ಮತ್ತು ಅವರ ಕಡೆಯವರನ್ನು ಅಲ್ಲಿ ನಿಲ್ಲಿಸಬೇಕು ಎನ್ನುವುದು ಇದರ ಹಿಂದಿನ ಷಡ್ಯಂತ್ರ‘‘ ಎಂದು ಅವರು ಆರೋಪಿಸಿದ್ದಾರೆ.

ಇದು ಹೇಳಿಸಿದ ಮಾತುಗಳು:

ವಿಧಾನಸಭಾ ಚುನಾವಣೆಗೂ ಮೊದಲೇ ಅವರು ಪಕ್ಷ ಬಿಟ್ಟು ಹೋಗಬಹುದಿತ್ತಲ್ಲ? ಈಗ ಯಾಕೆ ಹೋಗಿದ್ದಾರೆ? ನನ್ನನ್ನು ಶಾಸಕನನ್ನಾಗಿ ಮಾಡಿದ ನಂತರ ಈಗ ಹೋಗಿದ್ದಾರೆ ಎಂದರೆ ಇದರಲ್ಲಿ ರಾಜಕೀಯ ಇರಲೇಬೇಕಲ್ಲ. ಚುನಾವಣೆಗೂ ಮೊದಲು ನನ್ನ ಬಳಿಯೇ ಕುಳಿತು ಇವರು ಎರಡು ವರ್ಷ ಮಾತನಾಡಿದ್ದಾರೆ. ಆ ರೀತಿ ಮಾತನಾಡಬೇಡಿ ಎಂದು ನಾನೇ ಅವರಿಗೆ ಬೈದು ಬುದ್ದಿ ಹೇಳಿದ್ದೆ. ರಾಜಕೀಯವನ್ನ ರಾಜಕೀಯವಾಗಿ ಮಾಡಬೇಕು. ವೈಯಕ್ತಿಕ ವಿಷಯಗಳನ್ನು ಮಾತನಾಡಬಾರದು ಎಂದು ನಾನೇ ತಾಕೀತು ಮಾಡಿದ್ದೆ. ಕೇವಲ ಒಂದು ತಿಂಗಳ ಹಿಂದಷ್ಟೇ ನನ್ನ ಜೊತೆಗೆ ಮಾತುಕತೆ ನಡೆಸಿ, ವಿರೋಧಿಗಳನ್ನು ಸೋಲಿಸಬೇಕು ಎಂದು ಹೇಳಿದ್ದರು. ಅಂತಹವರು ಈಗ ಈ ರೀತಿ ಹೇಳುತ್ತಿದ್ದಾರೆ. ಇದು ಅವರ ಮಾತಲ್ಲ, ಹೇಳಿಸಿದ ಮಾತುಗಳು ಎಂದು ಮುನಿರತ್ನ ಹೇಳಿದ್ದಾರೆ.

ನನ್ನ ವಿರುದ್ಧ ಮಾತನಾಡಿದ್ದಾಯಿತು. ಆದರೆ ಬೇರೆಯವರ ಬಗ್ಗೆ ಮಾತನಾಡದಿದ್ದರೆ ಸಾಕು, ನನ್ನ ಬಳಿ ಎರಡು ವರ್ಷದಿಂದ ಅವರಿಬ್ಬರ ಬಗ್ಗೆ ಮಾತನಾಡಿದ್ದಾರೆ. ಇನ್ನು ಮುಂದಾದರೂ ಅವರು ಹಾಗೆಲ್ಲ ಮಾತನಾಡದೇ ಇದ್ದರೆ ಸಾಕು. ಆ ಪಕ್ಷದಲ್ಲಿಯಾದರೂ ಅವರು ಗೌರವವಾಗಿ ಇರಲಿ. ಅವರಿಬ್ಬರ ಬಗ್ಗೆ ಮಾತನಾಡುವುದು ಬೇಡ ಎಂದು ವೇಲು ನಾಯ್ಕರ್‌ಗೆ ಟಕ್ಕರ್ ನೀಡಿದರು.

ಪ್ರಕರಣದ ಹಿನ್ನಲೆ:

ಮಾಜಿ ಕಾರ್ಪೊರೇಟರ್ ವೇಲು ನಾಯ್ಕರ್ ಭಾನುವಾರ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಈ ವೇಳೆ ಶಾಸಕ ಮುನಿರತ್ನ ಹನಿಟ್ರ್ಯಾಪ್ ಮಾಡಿಸುತ್ತಿದ್ದರು, ಅದಕ್ಕಾಗಿಯೇ ಸ್ಟುಡಿಯೋ ಇಟ್ಟುಕೊಂಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದರು.

ಹನಿಟ್ರ್ಯಾಪ್ ಮಾಡಿ ಹೆದರಿಸುವುದಕ್ಕೆ ಜೆ. ಪಿ ಪಾರ್ಕ್‌, ಡಾಲರ್ಸ್‌ ಕಾಲೋನಿ ಮನೆಯಲ್ಲಿ ಇದಕ್ಕಾಗಿ ಸ್ಟುಡಿಯೋ ಇಟ್ಟುಕೊಂಡಿದ್ದಾರೆ. ಅವರು ಸಿನಿಮಾ ನಿರ್ಮಾಪಕರಲ್ಲವೇ? ಹೀಗಾಗಿ ಹನಿಟ್ರ್ಯಾಪ್ ಮಾಡಿಸಿ ಹೆದರಿಸುತ್ತಾರೆ. 2023ರ ಚುನಾವಣೆ ಎದುರಿಸುವುದು ಹೇಗೆ? ಎಂದು ಮುನಿರತ್ನಗೆ ಕೇಳಿದ್ದೆವು. ಆಗ ನಿಮ್ಮದೂ ಈಸ್ಟ್‌ಮನ್ ಕಲರ್ ಪಿಕ್ಚರ್‌ ಇದೆ ತೋರಿಸಲಾ? ಇಲ್ಲ ಕೆಲಸ ಮಾಡುತ್ತೀರಾ? ಎಂದು ನಮ್ಮನ್ನೂ ಹೆದರಿಸುತ್ತಿದ್ದರು ಎಂದು ಅವರು ಆರೋಪಿಸಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ