Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

‘ಸುವರ್ಣ ಬಳ್ಳಾರಿ’ಯನ್ನಾಗಿಸುವತ್ತ ಸಾಗಿರುವೆ : ಶಾಸಕ ನಾರಾ ಭರತ ರೆಡ್ಡಿ

ಸುದ್ದಿಮೂಲ ವಾರ್ತೆ ಬಳ್ಳಾರಿ, ಡಿ.1:
ನಾನು, ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ನಿಮ್ಮೆೆಲ್ಲರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸಿ ನುಡಿದಂತೆ ನಡೆದುಕೊಂಡಿದ್ದೇನೆ ಎಂದು ಬಳ್ಳಾಾರಿ ನಗರ ಶಾಸಕ ನಾರಾ ಭರತ್ ರೆಡ್ಡಿಿ ತಿಳಿಸಿದ್ದಾಾರೆ.
ಬಸವೇಶ್ವರ ನಗರದಲ್ಲಿ ವಿವಿಧ ಅಭಿವೃದ್ಧಿಿ ಕಾಮಗಾರಿಗಳಿಗೆ ಸೋಮವಾರ ಭೂಮಿ ಪೂಜೆ ನೆರವೇರಿಸಿ, ಸುದ್ದಿಗಾರರ ಜೊತೆಯಲ್ಲಿ ಮಾತನಾಡಿದ ಅವರು, ಮೂರು ಹಂತಗಳಲ್ಲಿ ಒಟ್ಟು 84 ಕೋಟಿ ರೂ.ಗಳ ಅನುದಾನವನ್ನು ಬಳ್ಳಾಾರಿ ವಿಧಾನಸಭಾ ಕ್ಷೇತ್ರಕ್ಕೆೆ ತಂದಿರುವೆ. ಹಂತ ಹಂತವಾಗಿ ಕ್ಷೇತ್ರದ ಅಭಿವೃದ್ಧಿಿಗೆ ಆದ್ಯತೆ ನೀಡಲಾಗಿದೆ. ಬೆಳಗಾವಿ ಅಧಿವೇಶನದ ನಂತರ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತದೆ. ಅಲ್ಲದೇ, ಬಳ್ಳಾಾರಿಯನ್ನು ‘ಸುವರ್ಣ ಬಳ್ಳಾಾರಿ’ಯನ್ನಾಾಗಿ ರೂಪಾಂತರಿಸಲಾಗುತ್ತದೆ ಎಂದರು.
ಬಳ್ಳಾಾರಿ ನಗರದಲ್ಲಿ ಪ್ರಸ್ತುತ ನಡೆದಿರುವ ವಿವಿಧ ಕಾಮಗಾರಿಗಳ ಕಾರಣ ಜನಸಾಮಾನ್ಯರಿಗೆ ಸಾಕಷ್ಟು ತೊಂದರೆಯಾಗಿದೆ. ಈ ತೊಂದರೆ - ಅನಾನುಕೂಲ ಅಲ್ಪಕಾಲದಲ್ಲಿಯೇ ಕೊನೆಗೊಳ್ಳಲಿದೆ. ಮುಂದಿನ ಆರು ತಿಂಗಳಲ್ಲಿ ಬಳ್ಳಾಾರಿಯನ್ನು ಅಭಿವೃದ್ಧಿಿಯ ಹೊಸತನಕ್ಕೆೆ ಸ್ಪಷ್ಟವಾದ ಚಿತ್ರಣ ಸಿಗಲಿದೆ ಎಂದರು.
ಜನವರಿ 3, 2026 ರಂದು ವಾಲ್ಮೀಕಿ ವೃತ್ತದಲ್ಲಿ ಮಹರ್ಷಿ ಶ್ರೀ ವಾಲ್ಮೀಕಿ ಅವರ ನೂತನ ಪುತ್ಥಳಿಯನ್ನು ವಾಲ್ಮೀಕಿ ಸಮಾಜದವರ ಸಮ್ಮುಖದಲ್ಲಿ ಲೋಕಾರ್ಪಣೆ ಮಾಡಲಾಗುತ್ತದೆ. ಕರ್ನಾಟಕ ವಾಲ್ಮೀಕಿ ಸಮಾಜದ ಮುಖಂಡರು - ಗಣ್ಯರು ಮತ್ತು ಸಾಧಕರನ್ನು ಈ ಕಾರ್ಯಕ್ರಮಕ್ಕೆೆ ಆಹ್ವಾಾನಿಸಲಾಗುತ್ತದೆ ಎಂದರು.
ಬಳ್ಳಾಾರಿ ಮಹಾನಗರ ಪಾಲಿಕೆಯ 23ನೇ ವಾರ್ಡಿನ ಮಹಾನಂದಿಕೊಟ್ಟಂನಲ್ಲಿ ಮಹಾತ್ಮ ಗಾಂಧಿ ನಗರ ಯೋಜನೆ ಅಡಿ 2.50 ಕೋಟಿ ಅನುದಾನದಲ್ಲಿ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ,
21ನೇ ವಾರ್ಡಿನ ಬಸವೇಶ್ವರ ನಗರದಲ್ಲಿ ಅಂದಾಜು 4 ಕೋಟಿ ರೂ.ಗಳ ಅನುದಾನದಲ್ಲಿ ವಿವಿಧ ಕಾಮಗಾರಿಗಳಿಗೆ, 15ನೇ ವಾರ್ಡಿನ ವಡ್ಡರ ಬಂಡೆಯ ಬಳಿ ಅಂದಾಜು ವೆಚ್ಚ 2 ಕೋಟಿ ರೂ.ಗಳಲ್ಲಿ, ವಾರ್ಡ್ ಸಂಖ್ಯೆೆ 16ರ ಶ್ರೀರಾಂಪುರ ಕಾಲೋನಿಯಲ್ಲಿ 2.80 ಕೋಟಿ ರೂ.ಗಳ ವೆಚ್ಚದಲ್ಲಿ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆಯನ್ನು ಸೋಮವಾರ ನೆರವೇರಿಸಿದ್ದಾಾರೆ.
ಬಳ್ಳಾಾರಿ ಮಹಾನಗರ ಪಾಲಿಕೆಯ ಮೇಯರ್ ಪಿ. ಗಾದೆಪ್ಪ, ಉಪ ಮೇಯರ್ ಮುಬೀನಾಬೀ, ಪಾಲಿಕೆಯ ಆಯುಕ್ತ ಪಿ.ಎಸ್. ಮಂಜುನಾಥ, ಮಾಜಿ ಮೇಯರ್ ಎಂ. ರಾಜೇಶ್ವರಿ, ಸದಸ್ಯರಾದ ಸುರೇಖಾಗೌಡ, ನೂರ್ ಮೊಹಮ್ಮದ್, ಟಿ.ವಿ. ಪ್ರಸಾದ್, ಕಾಂಗ್ರೆೆಸ್ ವಕ್ತಾಾರ ವೆಂಕಟೇಶ ಹೆಗಡೆ, ಸೋಮಶೇಖರ್, ಚಾನಾಳ್ ಶೇಖರ್, ಗೋನಾಳ ನಾಗಭೂಷಣ, ಯಾಳ್ಪಿಿ ಪಂಪನಗೌಡ, ಬಿಸಿಲಹಳ್ಳಿಿ ಮಂಜು, ಮಂಜು ಬೆಳ್ಳಿಿಗಾರ, ಶಂಕರ್, ಹಿರೇಮಠ, ಗೌತಮ್, ಖಾದರ್, ಬಿಆರೆಲ್. ಸೀನಾ, ಬಾಲರಾಜು, ಚರಣ್ ಸೇರಿ ಅನೇಕರು ಈ ಸಂದರ್ಭದಲ್ಲಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ