Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೀಕಂಠೇಶ್ವರ ದೇವಾಲಯ ಸುತ್ತಲಿನ ಪ್ರದೇಶದ ಸ್ವಚ್ಚತೆಗೆ ಶಾಸಕರ ಸೂಚನೆ 

ಸುದ್ದಿಮೂಲ ವಾರ್ತೆ

ಮೈಸೂರು, ಸೆ.10:ಇತಿಹಾಸ ಪ್ರಸಿದ್ಧ ಶ್ರೀಕಂಠೇಶ್ವರ ದೇವಾಲಯದ ಬಳಿ ಸ್ವಚ್ಚತೆ ಕಾಪಾಡಿ, ವಾಹನ ನಿಲುಗಡೆ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಭಕ್ತಾದಿಗಳಿಗೆ ಕಲ್ಪಿಸುವಂತೆ ಶಾಸಕ ದರ್ಶನ್‌ ಧ್ರುವ ನಾರಾಯಣ್ ಅಧಿಕಾರಿಗಳಿಗೆ ಸೂಚಿಸಿದರು.

ಶ್ರೀಕಂಠೇಶ್ವರ ದೇವಾಲಯಕ್ಕೆ ದಿಢೀರ್ ಭೇಟಿ ನೀಡಿ ಸುಮಾರು 2 ಗಂಟೆಗಳ ಕಾಲ ಅಧಿಕಾರಿಗಳ ಜೊತೆ ದೇವಸ್ಥಾನ ಮತ್ತು ಹೊರಗಡೆ ಹಾಗೂ ಕಪಿಲಾ ನದಿ ವಾಹನ ಪಾರ್ಕಿಂಗ್ ಉದ್ಯಾನವನ ಭಕ್ತಿ ಮಾರ್ಗ ಮತ್ತು ಮುಕ್ತಿ ಮಾರ್ಗ ಸುತ್ತಮುತ್ತ ಎರಡು ಗಂಟೆಗಳ ಕಾಲ ರೌಂಡ್ ಹಾಕಿ ಪರಿಶೀಲಿಸಿದರು.

ಪ್ಲಾಸ್ಟಿಕ್ ಉಪಯೋಗಿಸಿದರೆ ದಂಡ ಹಾಕಬೇಕು. ಕಪಿಲಾ ನದಿಗೆ ಭೇಟಿ ನೀಡಿ ಸ್ವಚ್ಛತೆ ಬಗ್ಗೆ ಪರಿಶೀಲಿಸಿ ಭಕ್ತಾದಿಗಳು ನದಿಗೆ ಬಿಡುವ ಹಳೆ ಬಟ್ಟೆ ಪ್ಲಾಸ್ಟಿಕ್ ಪದಾರ್ಥಗಳನ್ನು ನದಿಗೆ ಹಾಕುವುದನ್ನು ತಡೆಗಟ್ಟಿ ಎಚ್ಚರಿಕೆ ವಹಿಸಬೇಕು ಅದನ್ನು ಹಾಕಲು ಡಸ್ಟ್ ಬಿನ್ ವ್ಯವಸ್ಥೆ ಮಾಡಬೇಕು. ಇರುವ ಪಾರ್ಕಿಂಗ್ ಸ್ಥಳ ಸಾಕಾಗುವುದಿಲ್ಲ ಎಂದು ಅಧಿಕಾರಿಗಳು ಹೇಳಿದಾಗ ಡಾರ್ಮೆಟ್ರಿ ಹಿಂಭಾಗ ಇರುವ ಸ್ಥಳವನ್ನು ಉಪಯೋಗಿಸಿಕೊಳ್ಳುವಂತೆ ಸಲಹೆ ನೀಡಿದರು.

ದೇವಸ್ಥಾನದ ಹಿಂಭಾಗ ಅಕ್ಕ ಪಕ್ಕ ಯಾವುದೇ ವಾಹನ ಪಾರ್ಕಿಂಗ್ ಮಾಡಬಾರದು ಭಕ್ತಾದಿಗಳಿಗೆ ತೊಂದರೆಯಾಗದ ರೀತಿ ಪಾರ್ಕಿಂಗ್ ವ್ಯವಸ್ಥೆ ಇರಬೇಕು. ಆದಷ್ಟು ಬೇಗ ದೇವಸ್ಥಾನದ ಆನೆಯನ್ನು ತರಲು ಪ್ರಯತ್ನಿಸುತ್ತೇವೆ. ಅದಕ್ಕೆ ಸೂಕ್ತ ಸ್ಥಳವನ್ನು ನಿರ್ಮಿಸಿ ನಂತರ ಆನೆಯನ್ನು ತರಿಸಲು ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು.

ಶ್ರೀ ಶ್ರೀಕಂಠೇಶ್ವರ ದೇವಾಲಯದ ಇಒ ಜಗದೀಶ್, ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಬ್ಲಾಕ್ ಅಧ್ಯಕ್ಷ ಸಿಎಂ ಶಂಕರ್ ಮಾಜಿ ನಗರಸಭೆ ಅಧ್ಯಕ್ಷ ಶ್ರೀಧರ್, ಮುಖಂಡರಾದ ಎನ್ ಎ ಮಂಜುನಾಥ್ ರವಿಕುಮಾರ್ ಶಿವಪ್ಪ ಗೋವಿಂದ್ ರಾಜ್ ಮತ್ತಿತರರು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ