Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ಕಾರಿ ಬಸ್ಸುಗೆ ಚಾಲನೆ ಕೊಟ್ಟ ಶಾಸಕ ಸುಬ್ಬಾರೆಡ್ಡಿ

ಸುದ್ದಿಮೂಲ ವಾರ್ತೆ

ಬಾಗೇಪಲ್ಲಿ,ಅ:14: ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು ತಾಲೂಕಿನ ಪಾಳ್ಯಕೆರೆ ವ್ಯಾಪ್ತಿಯ ಮುದ್ದಲಪಲ್ಲಿಯಿಂದ ಬೆಂಗಳೂರಿಗೆ ತೆರಳಲು ನೂತನ ಸರ್ಕಾರಿ ಬಸ್‌ಗಳಿಗೆ ಶಾಸಕ ಎಸ್.ಎನ್. ಸುಬ್ಬಾರಡ್ಡಿ ಅವರು ಚಾಲನೆ ನೀಡಿದರು.

ಚೇಳೂರು ನೂತನ ತಾಲ್ಲೂಕು ಆಗಿ ಘೋಷಿಸಲಾಗಿದ್ದು, ಇದರ ವ್ಯಾಪ್ತಿಯ ಗ್ರಾಮಗಳಿಗೆ ಸೂಕ್ತ ಬಸ್‌ ಸಂಚಾರ ಇರಲಿಲ್ಲ. ಹೀಗಾಗಿ ಕೆಲ ದಿನಗಳ ಹಿಂದೆ ಶಾಲಾ ಕಾಲೇಜು ಮಕ್ಕಳು ಶಾಸಕರಿಗೆ ಮನವಿ ಸಲ್ಲಿಸಿ ತಮ್ಮ ಗ್ರಾಮಗಳಿಗೆ ಬಸ್‌ ಸೌಲಭ್ಯ ಕಲ್ಪಿಸುವಂತೆ ಮನವಿ ಮಾಡಿದ್ದರು. ಅದಕ್ಕೆ ಶಾಸಕರು ಸೂಕ್ತ ಸ್ಪಂದನೆ ಸಹ ಒದಗಿಸಿದ್ದರು.

ತಿಂಗಳ ಬಳಿಕ ಮುದ್ದಲಪಲ್ಲಿ ಯಿಂದ ಬೆಂಗಳೂರು ಬಸ್ ಸಂಪರ್ಕ ಕಲ್ಪಿಸಿದ್ದಾರೆ. ಬೆಳಗ್ಗೆ ಪಾಳ್ಯಕೆರೆಯ ಮುದ್ದಲಪಲ್ಲಿ ಇಂದ ಸುತ್ತಮುತ್ತಲಿನ ಹಳ್ಳಿಗಳ ಮೂಲಕ ಬೆಂಗಳೂರಿಗೆ ತೆರಳಿ ನಂತರ ಸಾಯಂಕಾಲ ಇದೆ ಗ್ರಾಮಕ್ಕೆ ಬಂದು ತಲುಪಲಿದೆ. ಈ ಮೂಲಕ ಶಾಸಕರು ಕೊಟ್ಟ ಮಾತಿನಂತೆ ನಡೆದು ಕೊಂಡಿದ್ದೇನೆ ಎಂಬ ಸಂದೇಶವನ್ನು ಈ ಭಾಗದ ಜನರಿಗೆ ಹಾಗೂ ಶಾಲಾ ಕಾಲೇಜು ಮಕ್ಕಳಿಗೆ ರವಾನಿಸಿದ್ದಾರೆ.

ಈ ಸಮಯದಲ್ಲಿ ಕೆಎಸ್‌ಆರ್‌ಟಿಸಿ ಅಧಿಕಾರಿಗಳು, ಆರ್ ಟಿ ಓ ಅಧಿಕಾರಿಗಳು ಹಾಗು ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ