Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಗ್ನಿ ಅನಾಹುತದ ಕುರಿತು ಮಕ್ಕಳಿಗೆ ಅಣಕು ಪ್ರದರ್ಶನ

ಸುದ್ದಿಮೂಲ ವಾರ್ತೆ

ತುಮಕೂರು, ಸೆ.9: ಊರುಕೆರೆಯ ಜೈನ್ ಪಬ್ಲಿಕ್ ಶಾಲೆಯಲ್ಲಿ ಮಕ್ಕಳಿಗೆ ತುಮಕೂರು ಜಿಲ್ಲಾ ಅಗ್ನಿ ಶಾಮಕ ದಳದ ವತಿಯಿಂದ ಮಕ್ಕಳಿಗೆ ಅಗ್ನಿಯಿಂದ ಸಂಭವಿಸಬಹುದಾದ ಅನಾಹುತಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವನ್ನು ಪ್ರಾತ್ಯಕ್ಷಿಕೆ ಮೂಲಕ ವಿವರವಾಗಿ ತಿಳಿಸಿಕೊಡಲಾಯಿತು.



ಜೊತೆಗೆ ಮನೆ, ಕಛೇರಿ, ಶಾಲೆ ಮತ್ತು ಇನ್ನಿತರೆ ಸ್ಥಳಗಳಲ್ಲಿ ಅಗ್ನಿ ಅನಾಹುತಗಳು ಸಂಭವಿಸಿದರೆ ಅದರಿಂದ ಪಾರಾಗುವ ಬಗ್ಗೆ ಮಕ್ಕಳಿಗೆ ತಿಳಿಸಿಕೊಟ್ಟರಲ್ಲದೇ ಅಗ್ನಿ ಅನಾಹುತ ಸಂಭವಿಸಿದಾಗ 101ಕೆ ಡಯಲ್ ಮಾಡುವ ಮೂಲಕ ಅಗ್ನಿ ಶಾಮಕದಳದವರಿಗೆ ವಿಚಾರವನ್ನು ತಿಳಿಸುವ ಬಗ್ಗೆ ಅರಿವು ಮೂಡಿಸಲಾಯಿತು.

ಆಕಸ್ಮಿಕವಗಿ ಅಗ್ನಿ ಸಂಭವಿಸಿದಾಗ ಮೊದಲು ಮಾಡಬೇಕಾದ ಕಾರ್ಯ, ಅಗ್ನಿಯಿಂದ ಗಾಯಗಳಾದರೆ ಅದಕ್ಕೆ ಯಾವ ರೀತಿಯಾದ ಪ್ರಥಮ ಚಿಕಿತ್ಸೆ ಮಾಡಿಕೊಳ್ಳಬೇಕು. ಅಗ್ನಿಯನ್ನು ಯಾವ ರೀತಿಯಾಗಿ ನಂದಿಸಬೇಕು, ಅಗ್ನಿಯಿಂದ ಸಂಭವಿಸಬಹುದಾದ ಅನಾಹುತಗಳು, ಅಪಾಯಗಳ ಬಗ್ಗೆ ಮಕ್ಕಳಿಗೆ ಜಾಗೃತಿಯನ್ನು ಮೂಡಿಸಲಾಯಿತು.

ಅಗ್ನಿ ಯಾವ ರೀತಿಯಲ್ಲಿ ಸಂಭವಿಸುತ್ತದೆ, ಅದನ್ನು ನಂದಿಸುವುದು ಹೇಗೆ, ಅದರಿಂದ ನಾವು ಪಾರಾಗುವುದು ಹೇಗೆ, ಯಾರಿಗೆ ನಾವು ಈ ವಿಚಾರವನ್ನು ಮೊದಲು ತಿಳಿಸಬೇಕು ಎಂಬ ಅಂಶಗಳನ್ನು ಅಣಕು ಪ್ರದರ್ಶನದಲ್ಲಿ ತೋರಿಸಲಾಯಿತು.

ಅಣುಕು ಪ್ರದರ್ಶನ ಮತ್ತು ಜಾಗೃತಿ ಮೂಡಿಸುವ ಕಾರ್ಯಕ್ರಮದ ನಂತರ ಅಗ್ನಿ ಶಾಮಕ ಸಿಬ್ಬಂದಿಗಳಿಗೆ ಶಾಲಾ ಸಿಬ್ಬಂದಿ ವತಿಯಿಂದ ಧನ್ಯವಾದಗಳನ್ನು ಅರ್ಪಿಸಿದರು. ಶಾಲೆಯ ಮುಖ್ಯ ಶಿಕ್ಷಕರಾದ ಸುನೀತ ದಗ್ಗಲ್, ಬಸವರಾಜು, ಪೂರ್ಣಿಮ, ನೇತ್ರ, ರಶ್ಮಿ ಸೇರಿದಂತೆ ಶಾಲೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ