Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಗಳೂರಿನಲ್ಲಿ ಮೇ 6ರಂದು ಮೋದಿ ಬೃಹತ್ ರೋಡ್ ಶೋ

ಸುದ್ದಿಮೂಲ ವಾರ್ತೆ

ಬೆಂಗಳೂರು, ಮೇ 4: ವಿಧಾನಸಭಾ ಚುನಾವಣೆ ಪ್ರಚಾರಕ್ಕೆ ಕೆಲವೇ ದಿನಗಳು ಬಾಕಿ ಉಳಿದಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ರಾಜ್ಯಕ್ಕೆ ಬರಲಿದ್ದಾರೆ. ಮೇ 6ರಂದು ಶನಿವಾರ ಬೆಂಗಳೂರಿನಲ್ಲಿ ‘ನಮ್ಮ ಕರ್ನಾಟಕ ಯಾತ್ರೆ’ ಹೆಸರಿನಡಿ ಬೃಹತ್ ರೋಡ್ ಶೋ ನಡೆಸಲಿದ್ದಾರೆ.

ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಹಾಗೂ ಬೆಂಗಳೂರು ಕೇಂದ್ರ ಸಂಸದ ಪಿ.ಸಿ.ಮೋಹನ್ ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರ್ನಾಟಕದ ಜನತೆ 9 ವರ್ಷಗಳಿಂದ ತಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ಕೃತಜ್ಞತೆ ಸಲ್ಲಿಸಲು ಪ್ರಧಾನಿಯವರು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ ಎಂದರು.

ಮೇ 6ರಂದು ಪ್ರಧಾನಿಯವರು ರಾಜಧಾನಿಯ 17 ಕ್ಷೇತ್ರಗಳಲ್ಲಿ ಒಟ್ಟು 36.6 ಕಿ.ಮೀ ದೂರ ರೋಡ್ ಶೋ ನಡೆಸಲಿದ್ದಾರೆ. ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ 10.1 ಕಿ.ಮೀ, ಸಂಜೆ 4ರಿಂದ ರಾತ್ರಿ 10 ರವರೆಗೆ 26.5 ಕಿ.ಮೀ ದೂರ ರೋಡ್ ಶೋ ನಡೆಯಲಿದ್ದು, ಹತ್ತು ಲಕ್ಷಕ್ಕೂ ಅಧಿಕ ಪಾಲ್ಗೊಳ್ಳಲಿದ್ದಾರೆ ಎಂದರು.

ಅಂದು ಬೆಳಿಗ್ಗೆ ಸುರಂಜನ್‍ದಾಸ್ ರಸ್ತೆಯಿಂದ ಆರಂಭವಾಗುವ ಯಾತ್ರೆ, ಮಹದೇವಪುರ, ಕೆ.ಆರ್.ಪುರ, ಸಿ.ವಿ.ರಾಮನ್ ನಗರ, ಶಾಂತಿನಗರ, ಶಿವಾಜಿನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಸಾಗಲಿದೆ. ಸಂಜೆ ಬೆಂಗಳೂರು ದಕ್ಷಿಣ, ಬೊಮ್ಮನಹಳ್ಳಿ, ಜಯನಗರ, ಪದ್ಮನಾಭ ನಗರ, ಬಸವನಗುಡಿ, ಚಿಕ್ಕಪೇಟೆ, ಚಾಮರಾಜಪೇಟೆ, ಗಾಂಧಿನಗರ, ವಿಜಯನಗರ, ಗೋವಿಂದರಾಜ ನಗರ, ರಾಜಾಜಿನಗರ, ಮಹಾಲಕ್ಷ್ಮಿ ಲೇ ಔಟ್, ಮಲ್ಲೇಶ್ವರ ಕ್ಷೇತ್ರಗಳಲ್ಲಿ ರೋಡ್ ಶೋ ಸಾಗಲಿದೆ. ಇಡೀ ಕರ್ನಾಟಕದ ಜನ ರೋಡ್ ಶೋ ನಲ್ಲಿ ಪಾಲ್ಗೊಳ್ಳುತ್ತಿದ್ದು, ರೋಡ್ ಶೋ ಸಾಗುವ ಮಾರ್ಗದ ಬಗ್ಗೆ ತಿಳಿಸಲಾಗುವುದು. ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಪೊಲೀಸ್ ಮತ್ತು ಸಂಬಂಧಿತ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಮುಂಜಾಗ್ರತೆಗಳನ್ನು ವಹಿಸಲಾಗಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಬಿ.ನಾರಾಯಣ ಗೌಡ, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಜಿ.ಮಂಜುನಾಥ್, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಎನ್.ಆರ್. ರಮೇಶ್ ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ