Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುಂಗಾರು ಶುರುವಾಗ್ತಾ ಇದೆ. ಬೆಳೆ ರಕ್ಷಣೆಗೆ ಮುಂಜಾಗ್ರತಾ ಕ್ರಮ ವಹಿಸಿ

ಸುದ್ದಿಮೂಲ ವಾರ್ತೆ

ಬೆಂಗಳೂರು,ಮೇ 23:ನಾನು ಕೇವಲ ಸೂಚನೆ ಕೊಡೋದಿಲ್ಲ. ಎಚ್ಚರಿಕೆ ಕೊಡ್ತಾ ಇದ್ದೇನೆ. ಸೂಚನೆಗಳನ್ನು ಪರಿಣಾಮಕಾರಿಯಾಗಿ ಜಾರಿ ಮಾಡದಿದ್ದರೆ ಕಠಿಣ ಕ್ರಮಕ್ಕೆ ಸಿದ್ದರಾಗಿ ಜಿಲ್ಲಾಧಿಕಾರಿಗಳು ಮತ್ತು ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ವಿಡಿಯೋ ಸಂವಾದದಲ್ಲಿ ಮುಖ್ಯಮಂತ್ರಿಗಳ ಎಚ್ಚರಿಕೆ ನೀಡಿದರು.

ಮುಖ್ಯಮಂತ್ರಿಗಳ ಸೂಚನೆಗಳು

1. ರಾಜ್ಯದ ಕೆಲವು ಭಾಗದಲ್ಲಿ ಮಳೆ ಪ್ರಾರಂಭ, ಬಿತ್ತನೆ ಪ್ರಾರಂಭ. ಜೂನ್‌ ನಲ್ಲಿ ಮುಂಗಾರು ಪ್ರಾರಂಭವಾಗುತ್ತದೆ. ಏಪ್ರಿಲ್‌ ತಿಂಗಳಿನಲ್ಲಿಯೇ ಪ್ರಿ-ಮಾನ್ಸೂನ್‌ ಮಳೆ ಪ್ರಾರಂಭವಾಗಿದೆ. ಭಾರಿ ಮಳೆ, ಗಾಳಿಯಿಂದ ಮರಗಳು ಬಿದ್ದು ಹೋಗಿವೆ. ಸಿಡಿಲು, ಆಲಿಕಲ್ಲು ಮಳೆಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ಅನಾಹುತಗಳಾಗಿವೆ. ಇಂತಹ ಅನಾಹುತಗಳನ್ನು ತಡೆಗಟ್ಟಲು ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು.

2. ನಿಮ್ಮ ಬಳಿ ಅನುದಾನ ಲಭ್ಯವಿದೆ. ಅಗತ್ಯವಿದ್ದರೆ, ಕೇಳಬೇಕು. ಪರಿಹಾರ ಕ್ರಮ ಕೈಗೊಳ್ಳಲು ತೊಂದರೆ ಇಲ್ಲ. ಕೃಷಿ ಅಧಿಕಾರಿಗಳು ಬಿತ್ತನೆ ಚಟುವಟಿಕೆಗೆ ಅಗತ್ಯವಿರುವ ಬೀಜ, ಗೊಬ್ಬರ, ಕೀಟನಾಶಕಗಳನ್ನು ಒದಗಿಸಬೇಕು. ಹಾವೇರಿ ಗೋಲಿಬಾರಿನಂತಹ ಘಟನೆ ಮರುಕಳಿಸಬಾರದು.

3. ಮಳೆ ಬಂದು ಮರಗಳು ಬಿದ್ದುಹೋದರೆ, ಕೂಡಲೇ ತೆರವು ಗೊಳಿಸಬೇಕು. ವಿದ್ಯುಚ್ಚಕ್ತಿ ಕಂಬಗಳು ಬಿದ್ದು ಹೋದರೆ, ಟ್ರಾನ್‌ಫಾರ್ಮರ್‌ ಹಾಳಾಗಿದ್ದರೆ, ಸೇತುವೆಗಳು ಹಾಳಾಗಿದ್ದರೆ, ಶಾಲಾ ಕೊಠಡಿಗಳು ಶಿಥಿಲ ಆಗಿದ್ದರೆ ಈಗಲೇ ಅನಾಹುತ ತಪ್ಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಮುನ್ನೆಚ್ಚರಿಕೆ ತೆಗೆದುಕೊಂಡರೆ ಅನಾಹುತಗಳನ್ನು ತಪ್ಪಿಸಲು ಸಾಧ್ಯವಾಗುತ್ತದೆ.

4. ಕಚೇರಿಯಲ್ಲೇ ಕುಳಿತು ಕೆಲಸ ಮಾಡಿದರೆ ಆಗದು. ಫೀಲ್ಡ್‌ ಗೆ ಹೋಗಬೇಕು. ಕುಳಿತಲ್ಲೇ ಕುಳಿತು ಪರಿಣಾಮಕಾರಿಯಾಗಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲು ಸಾಧ್ಯವಾಗದು. ಅದಕ್ಕೇ ಮುಂಚಿತವಾಗಿ ಸಭೆ ಕರೆಯಲಾಗಿದೆ.

5. ಯಾವುದೇ ಕಾರಣಕ್ಕೆ ಕರ್ತವ್ಯ ಲೋಪ ಆಗಬಾರದು. ಬೇಜವಾಬ್ದಾರಿತನದಿಂದ ಅನಾಹುತಗಳಾದರೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದು. ನೆಪ ಹೇಳಿಕೊಂಡು ಪರಿಹಾರ ಕ್ರಮ ವಿಳಂಬ ಮಾಡುವುದು ಸರಿಯಲ್ಲ. ಯಾವುದೇ ಕಾರಣಕ್ಕೆ ಲೋಪ ಆಗಬಾರದು.

6. ಲೋಪ ಎಸಗಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಜನ ಸರ್ಕಾರದಿಂದ ಬದಲಾವಣೆ ಬಯಸಿದ್ದಾರೆ. ಸರ್ಕಾರಕ್ಕೆ ಹೊಸ ಇಮೇಜ್‌ ಕೊಡಲೇಬೇಕು. ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುವ ಸರ್ಕಾರ ಬಂದಿದೆ ಎಂಬ ಸಂದೇಶ ಹೋಗಬೇಕು.

7. ಜಿಲ್ಲಾಧಿಕಾರಿಗಳು, ಸಿಈಓ ಗಳದ್ದು ಜವಾಬ್ದಾರಿಯುತ ಸ್ಥಾನ. ಜೊತೆಗೆ ಪೊಲೀಸ್‌ ವರಿಷ್ಠಾಧಿಕಾರಿಗಳ ಹೊಣೆಯೂ ಪ್ರಮುಖವಾದದ್ದು. ಕರ್ನಾಟಕದ ಜನತೆ ಬದಲಾವಣೆ ಬಯಸಿದ್ದಾರೆ. ಆಲಸ್ಯ ಬಿಟ್ಟು ಕೆಲಸ ಮಾಡಿ. ಬಹಳ ಜನ ಜಿಲ್ಲಾಧಿಕಾರಿಗಳು ತಾಲ್ಲೂಕುಗಳಿಗೆ ಭೇಟಿ ನೀಡಿರುವುದಿಲ್ಲ. ಇನ್ನು ಮುಂದೆ ಇಂತಹುದಕ್ಕೆ ಅವಕಾಶವಿಲ್ಲ. ಜಿಲ್ಲಾಧಿಕಾರಿಗಳು ಕಡ್ಡಾಯವಾಗಿ ಕ್ಷೇತ್ರ ಭೇಟಿ ಮಾಡಬೇಕು.

8. ಕಳೆದ ಕೆಲವು ವರ್ಷಗಳಿಂದ ಪ್ರವಾಹ ನೋಡುತ್ತಾ ಇದ್ದೀರಿ. ಹವಾಮಾನ ಇಲಾಖೆ ಸಂಪರ್ಕ- ಮುನ್ಸೂಚನೆ ಅರಿತು ಕೆಲಸ ಮಾಡಿ. ಪ್ರವಾಹ ನಿಯಂತ್ರಣಕ್ಕೆ ಅಗತ್ಯ ಸಲಕರಣೆಗಳನ್ನು ಸಿದ್ಧಪಡಿಸಿಟ್ಟುಕೊಳ್ಳಿ. ಪ್ರವಾಹ ಬರುವ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ. ಬೆಳೆಹಾನಿ ಮಾಹಿತಿ ಇರಬೇಕು. ಅನುದಾನ ಅಗತ್ಯವಿದ್ದಲ್ಲಿ ಮನವಿ ಸಲ್ಲಿಸಿ ಬಿಡುಗಡೆ ಮಾಡಿಸಿಕೊಳ್ಳಬೇಕು
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ