Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಗಳೂರು ನಗರ- ಗ್ರಾಮೀಣ ಜಿಲ್ಲಾಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆ

ಸುದ್ದಿಮೂಲ ವಾರ್ತೆ

ಬೆಂಗಳೂರು ಅ. 16 : ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ ಹಾಗೂ ತಹಶೀಲ್ದಾರ್ ನ್ಯಾಯಾಲಯಗಳಲ್ಲಿ ಬಾಕಿ ಇರುವ 27,000ಕ್ಕೂ ಅಧಿಕ ತಕರಾರು ಪ್ರಕರಣಗಳನ್ನು ಶೀಘ್ರ ಇತ್ಯರ್ಥಗೊಳಿಸಿ, ಜನರಿಗೆ ತುಸು ನೆಮ್ಮದಿ ನೀಡಿ ಎಂದು ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಸೂಚನೆ ನೀಡಿದರು.

ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ದಯಾನಂದ್, ಗ್ರಾಮೀಣ ಜಿಲ್ಲಾಧಿಕಾರಿಗಳಾದ ಶಿವಶಂಕರ್, ಪ್ರಾದೇಶಿಕ ಆಯುಕ್ತರಾದ ಆದಿತ್ಯ ಬಿಶ್ವಾಸ್, ಕಂದಾಯ ಇಲಾಖೆ ಆಯುಕ್ತರಾದ ಸುನೀಲ್ ಕುಮಾರ್ ಹಾಗೂ ಎರಡೂ ಜಿಲ್ಲೆಗಳ ಉಪವಿಭಾಗಾಧಿಕಾರಿಗಳ ಜೊತೆಗೆ ಇಂದು ವಿಕಾಸಸೌಧದಲ್ಲಿ ಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು.

ಸಭೆಯಲ್ಲಿ ಕಳೆದ ನಾಲ್ಕು ತಿಂಗಳಿನಿಂದ ಯಾವ ಪ್ರಮಾಣದಲ್ಲಿ ತಕರಾರು ಪ್ರಕರಣಗಳ ಇತ್ಯರ್ಥವಾಗುತ್ತಿದೆ ಎಂಬ ಕುರಿತು ಚರ್ಚೆ ನಡೆಸಲಾಯಿತು. ಈ ವೇಳೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ ಸಚಿವರು, “ಕಳೆದ ನಾಲ್ಕು ತಿಂಗಳಲ್ಲಿ ಬೆಂಗಳೂರು ವಿಭಾಗದ ಪ್ರಗತಿ ಪರಿಶೀಲನಾ ಸಭೆ ನಡೆಸಲಾಗಿದೆ. ಮೂರು ಬಾರಿ ಜಿಲ್ಲಾಧಿಕಾರಿಗಳ ಸಭೆ ನಡೆಸಲಾಗಿದೆ. ಅಲ್ಲದೆ, ಜಿಲ್ಲೆಗಳಿಗೂ ಭೇಟಿ ನೀಡಿ ಸಭೆ ನಡೆಸಲಾಗಿದೆ. ಈ ವೇಳೆ ತಕರಾರು ಪ್ರಕರಣಗಳನ್ನು ಶೀಘ್ರ ಇತ್ಯರ್ಥಕ್ಕೆ ಸೂಚಿಸಲಾಗಿದೆ. ಆದರೂ, ಈ ವಿಚಾರದಲ್ಲಿ ನಿರೀಕ್ಷಿತ ಪ್ರಗತಿ ಕಾಣದಿರುವುದು ಏಕೆ?” ಎಂದು ಪ್ರಶ್ನಿಸಿದರು.

ಬೆಂಗಳೂರು ನಗರ-ಗ್ರಾಮೀಣ ಭಾಗದಲ್ಲಿ ಮಾತ್ರ ಸುಮಾರು 27,000 ತಕರಾರು ಪ್ರಕರಣಗಳು ಬಾಕಿ ಇವೆ. ಉಪವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಂತೂ ಯಾವುದೇ ಪ್ರಗತಿ ಕಾಣುತ್ತಿಲ್ಲ. ಒಟ್ಟಾರೆ ಪ್ರಕರಣಗಳ ಪೈಕಿ ಈ ನ್ಯಾಯಾಲಯಗಳಲ್ಲೇ 16,440 ಪ್ರಕರಣಗಳು ಬಾಕಿ ಇವೆ. ಇಷ್ಟೊಂದು ಪ್ರಕರಣಗಳು ಬಾಕಿ ಉಳಿಯಲು ಕಾರಣವೇನು? 5 ವರ್ಷಕ್ಕೂ ಹಿಂದಿನ ಪ್ರಕರಣಗಳೂ ಸಹ ಇತ್ಯರ್ಥವಾಗದಿದ್ದರೆ ಜನರ ಪಾಡು ಏನಾಗಬೇಕು? ಅವರೇನು ಪ್ರತಿದಿನ ಡಿಸಿ,ಎಸಿ ತಹಶೀಲ್ದಾರ್ ಕಚೇರಿಗಳಿಗೆ ಅಲೆಯುತ್ತಲೇ ಇರಬೇಕೆ? ಇದಕ್ಕೆ ಪರಿಹಾರವಾದರೂ ಏನು ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಅಲ್ಲದೆ, ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ ಸಚಿವ ಕೃಷ್ಣ ಬೈರೇಗೌಡ ಅವರು, “ತಕರಾರು ಪ್ರಕರಣಗಳನ್ನು ಶೀಘ್ರ ಇತ್ಯರ್ಥಗೊಳಿಸಿ ಜನರ ಸಮಸ್ಯೆಗಳನ್ನು ನಿವಾರಿಸುವುದು ನಮ್ಮ ಜವಾಬ್ದಾರಿ. ಹೀಗಾಗಿ ಈ ಪ್ರಕರಣಗಳನ್ನು ಶೀಘ್ರ ವಿಲೇಗೊಳಿಸಬೇಕು. ಅಗತ್ಯವಿದ್ದರೆ, ವಿಶೇಷ ಜಿಲ್ಲಾಧಿಕಾರಿಗಳಿಗೆ ತಕರಾರು ಪ್ರಕರಣಗಳ ಇತ್ಯರ್ಥದ ಜವಾಬ್ದಾರಿವಹಿಸಿ, ಮುಂದಿನ ಏಪ್ರಿಲ್ ತಿಂಗಳ ಒಳಗಾಗಿ ಶೇ.50 ರಷ್ಟು ಪ್ರಕರಣಗಳ ಇತ್ಯರ್ಥಗೊಳಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಿ, ಮುಂದಿನ ತಿಂಗಳ ಸಭೆಯಲ್ಲಿ ಸಕಾರಾತ್ಮಕ ಫಲಿತಾಂಶ ನೀಡಿ” ಎಂದು ತಾಕೀತು ಮಾಡಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ