Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಏಕಲವ್ಯ ಮಾದರಿ ವಸತಿ ಶಾಲೆ ಮಂಜೂರು ನಿಯಮ ಸಡಿಲಿಸಿ-ಸಂಸದ

ಸುದ್ದಿಮೂಲ ವಾರ್ತೆ
ರಾಯಚೂರು,ನ.17-
ಹೊಸ ಏಕಲವ್ಯ ಮಾದರಿ ವಸತಿ ಶಾಲೆ ಸ್ಥಾಾಪನೆಗೆ ಸಂಬಂಧಿಸಿದ ಅರ್ಹತಾ ಮಾನದಂಡಗಳಲ್ಲಿ ಸಡಿಲಿಕೆ ಮಾಡುವಂತೆ ಕೋರಿ ರಾಯಚೂರು ಲೋಕಸಭೆ ಕ್ಷೇತ್ರದ ಸಂಸದ ಜಿ.ಕುಮಾರ ನಾಯಕ ಕೇಂದ್ರ ಬುಡಕಟ್ಟು ವ್ಯವಹಾರ ಸಚಿವಾಲಯ ಕಾರ್ಯದರ್ಶಿ ವಿಭು ನಾಯರ್ ಅವರಿಗೆ ಮನವಿ ಮಾಡಿದ್ದಾರೆ.
ಕರ್ನಾಟಕದಲ್ಲಿ 20 ಸಾವಿರಕ್ಕಿಿಂತ ಹೆಚ್ಚು ಎಸ್ಟಿಿ ಸಮುದಾಯದ ಜನಸಂಖ್ಯೆೆ ಹೊಂದಿರುವ 68 ಬ್ಲಾಾಕ್‌ಗಳಿವೆ ಆದರೆ ಇವು ಹೊಸದಾಗಿ ಪರಿಷ್ಕರಿಸಲಾದ ಮಾರ್ಗಸೂಚಿಗಳನ್ನು ಪೂರೈಸುವುದಿಲ್ಲ. ಇದರಿಂದಾಗಿ ಈ ಸಮುದಾಯಗಳು ಗುಣಮಟ್ಟದ ಶಿಕ್ಷಣ ಪಡೆಯಲು ವಂಚಿತರಾಗುತ್ತಿಿವೆ. 2011ರ ಜನಗಣತಿಯ ಪ್ರಕಾರ ರಾಜ್ಯದ ಐದು ಭೌಗೋಳಿಕ ವಲಯಗಳಾದ 22 ಜಿಲ್ಲೆಗಳು ಮತ್ತು 70 ವಿಧಾನಸಭಾ ಕ್ಷೇತ್ರಗಳಲ್ಲಿ ಎಸ್ಟಿಿ ಜನಸಾಂದ್ರತೆ ಹೆಚ್ಚಿಿನ ಪ್ರಮಾಣದಲ್ಲಿದೆ. ಈ ಸಮುದಾಯ ಮತ್ತು ಇತರ ಅತ್ಯಂತ ಹಿಂದುಳಿದ ಸಮುದಾಯಗಳ ಸಾಮಾಜಿಕ, ಆರ್ಥಿಕ ಸ್ಥಿಿತಿ ಸುಧಾರಣೆಯಾಗದೆ ಕರ್ನಾಟಕ ತನ್ನ ನಿಜವಾದ ಸಾಮರ್ಥ್ಯ ಸಾಧಿಸಲು ಸಾಧ್ಯವಿಲ್ಲ. ಮಾರ್ಗಸೂಚಿಗಳ ಸಡಿಲಿಕೆ ಮೂಲಕ ಕರ್ನಾಟಕದ ಹೆಚ್ಚಿಿನ ಎಸ್ಟಿಿ ಸಮುದಾಯದ ವಿದ್ಯಾಾರ್ಥಿಗಳು ಹೊಸ ಏಕಲವ್ಯ ಮಾದರಿ ವಸತಿ ಶಾಲೆ ಮುಖಾಂತರ ಗುಣಮಟ್ಟದ, ಸಮಗ್ರ ಶಿಕ್ಷಣ ಪಡೆಯಲು ಅವಕಾಶ ಸಿಗುತ್ತದೆ. ನಿಯಮ ಬದಲಾವಣೆ ಅತಿ ತುರ್ತು ಮತ್ತು ಅಗತ್ಯವಾದ ವಿಷಯವಾಗಿದೆ ಎಂದು ಕೋರಲಾಗಿದೆ.
ಅ.18ರಂದು ಹೊಸ ಏಕಲವ್ಯ ಮಾದರಿ ವಸತಿ ಶಾಲೆ ಮಂಜೂರಿಗೆ ಮನವಿ ಮಾಡಿ ಪತ್ರ ಬರೆದಿದ್ದರು ಅದನ್ನು ಬೆಂಬಲಿಸಿ ಕರ್ನಾಟಕ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಉಮಾ ಮಹಾದೇವನ್ ಸಹ ಪತ್ರ ಬರೆದು ಕೋರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ