Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಮೃತ ಭಾರತ ಸ್ಟೇಷನ್ ಯೋಜನೆಯಡಿ ಅಭಿವೃದ್ಧಿ ಪಡಿಸಲು ಸಂಸದ ಸಂಗಣ್ಣ ಮನವಿ 

ಸುದ್ದಿಮೂಲವಾರ್ತೆ

ಕೊಪ್ಪಳ,ಆ.3: ಭತ್ತದ ನಾಡು ಗಂಗಾವತಿ ರೈಲು ನಿಲ್ದಾಣವನ್ನು ಅಮೃತ ಭಾರತ ಸ್ಟೇಷನ್ ಯೋಜನೆಯಡಿ ಅಭಿವೃದ್ಧಿ ಪಡಿಸಲು ಕೊಪ್ಪಳ ಲೋಕಸಭಾ ಸಂಸದ ಕರಡಿ ಸಂಗಣ್ಣ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

ಸಚಿವರು ಸಂಸದರಿಗೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ ಎನ್ನಲಾಗಿದೆ.

ನವದೆಹಲಿಯಲ್ಲಿ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾದ ಸಂಸದ ಕರಡಿ ಸಂಗಣ್ಣ ಅವರು, ಗಂಗಾವತಿ ರೈಲು ನಿಲ್ದಾಣ ಅಭಿವೃದ್ಧಿ ಯಿಂದ ಅಂಜನಾದ್ರಿಗೆ ತೆರಳುವ ಭಕ್ತರ ಸಂಖ್ಯೆ ಅಧಿಕವಾಗಲಿದೆ ಎಂದು ಸಚಿವರ ಗಮನಕ್ಕೆ ತಂದಿದ್ದು, ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ ಎನ್ನಲಾಗಿದೆ. ಮನವಿ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು, ಸಂಸದ ಅಣ್ಣಸಾಹೇಬ್ ಜೊಲ್ಲೆ, ತೇಜಸ್ವಿ ಸೂರ್ಯ ಉಪಸ್ಥಿತರಿದ್ದರು.

ಈ ಕುರಿತು ಪ್ರಕಟಣೆ ನೀಡಿರುವ ಸಂಸದ ಸಂಗಣ್ಣ ಕರಡಿ, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪ್ರಧಾನಿಯಾದ ಬಳಿಕ ಕೊಪ್ಪಳ ಲೋಕಸಭಾ ಕ್ಷೇತ್ರದ ರೈಲ್ವೆ ಯೋಜನೆಗಳಿಗೆ ಬುಲೆಟ್ ಟ್ರೈನ್ ವೇಗ ದೊರೆತಿದೆ. ನನ್ನ ಮನವಿ ಮೇರೆಗೆ ಕೊಪ್ಪಳ ಹಾಗೂ ಮುನಿರಾಬಾದ್ ರೈಲು ನಿಲ್ದಾಣಗಳು ಅಮೃತ ಭಾರತ ಸ್ಟೇಷನ್ ಯೋಜನೆಯಡಿ ಆಯ್ಕೆಯಾಗಿವೆ. ಇವುಗಳ ಜತೆಗೆ ಗಂಗಾವತಿ ರೈಲು ನಿಲ್ದಾಣ ಸೇರ್ಪಡೆಗೊಳಿಸಲು ಮನವಿ ಸಲ್ಲಿಸಲಾಗಿದೆ ಎಂದರು.

ಜಿಲ್ಲೆಯಲ್ಲಿ ಕಳೆದ 70 ವರ್ಷದಿಂದ ಆಗದ ರೈಲ್ವೆ ಯೋಜನೆಗಳನ್ನು ಕೇವಲ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸರ್ಕಾರದಲ್ಲಿ ಮಾಡಲಾಗಿದೆ. ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಒಂದೇ ತಾಲೂಕಿಗೆ ಸೀಮಿತವಾಗಿದ್ದ ರೈಲ್ವೆ ಯೋಜನೆಯನ್ನು 6 ತಾಲೂಕಿಗೆ ವಿಸ್ತರಿಸಲಾಗಿದೆ. ಚುನಾವಣೆಯಲ್ಲಿ ಕೊಟ್ಟ ಮಾತಿನಂತೆ ರೈಲ್ವೆ ಯೋಜನೆ ವಿಸ್ತರಿಸಲಾಗಿದೆ. ಇದು ಬಿಜೆಪಿ ಸರ್ಕಾರದ ಬದ್ಧತೆಯಾಗಿದೆ. ಅಮೃತ ಭಾರತ ಸ್ಟೇಷನ್ ಯೋಜನೆಯಡಿ ಕೇಂದ್ರ ಸರ್ಕಾರದಿಂದ ಕೊಪ್ಪಳ ಹಾಗೂ ಮುನಿರಾಬಾದ್ ರೈಲು ನಿಲ್ದಾಣಗಳಿಗೆ ತಲಾ 20 ಕೋಟಿ ರೂ. ಬಿಡುಗಡೆಯಾಗಲಿದೆ. ಈ ಭಾಗದ ಐತಿಹಾಸಿಕ ಸ್ಮಾರಕಗಳ ಚಿತ್ರದಂತೆ ರೈಲು ನಿಲ್ದಾಣದ ಮುಂಭಾಗ ಅಭಿವೃದ್ಧಿಯಾಗಲಿದೆ ಎಂದರು.

ರೈಲ್ವೆ ಗೇಟ್ ಗಳಲ್ಲಿ ವಾಹನ ದಟ್ಟಣೆ ಹೆಚ್ಚಳವಾಗುತ್ತಿದ್ದು, ಇದನ್ನು ತಡೆಯಲು ಮೇಲ್ಸೆತುವೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುದಾನ ನೀಡುತ್ತಿದೆ. ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ರೈಲ್ವೆ ಯೋಜನೆಗಳ ಬಗ್ಗೆ ಕೇಂದ್ರ ಸಚಿವರನ್ನು ಭೇಟಿಯಾದ ತಕ್ಷಣವೇ ಆ ಯೋಜನೆಗೆ ಅನುಮೋದನೆ ಸಿಗುತ್ತಿದೆ. ಸಚಿವರು ಜಿಲ್ಲೆಯ ಅಭಿವೃದ್ಧಿ ಗೆ ಸ್ಪಂದಿಸುತ್ತಿದ್ದಾರೆ. ಕೇಂದ್ರ ಸಚಿವರಿಗೆ ಜಿಲ್ಲೆಯ ಜನತೆ ಪರವಾಗಿ ಅಭಿನಂದನೆಗಳು. ಜನತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ಕೆಲಸಗಳನ್ನು ನೋಡಿದ್ದಾರೆ. ಮತ್ತೊಮ್ಮೆ ಆಶೀರ್ವಾದ ಮಾಡಲಿದ್ದಾರೆ ಎಂದರು.

ರೈಲ್ವೆ ನಿಲ್ದಾಣದಲ್ಲಿ ಏನೆಲ್ಲ ಅಭಿವೃದ್ಧಿ ಕಾಮಗಾರಿ:

ನಿಲ್ದಾಣದಲ್ಲಿ ರೂಫ್ ಪ್ಲಾಜಾವನ್ನು ರಚಿಸಲಾಗುವುದು. ಉಚಿತ ವೈಫೈ, 5G ಮೊಬೈಲ್ ಟವರ್‌ಗಳಿಗೆ ಸ್ಥಳಾವಕಾಶ, ರಸ್ತೆಗಳ ಅಗಲೀಕರಣ, ಅನಪೇಕ್ಷಿತ ರಚನೆಗಳನ್ನು ತೆಗೆಯುವುದು, ಸರಿಯಾಗಿ ವಿನ್ಯಾಸಗೊಳಿಸಿದ ಚಿಹ್ನೆಗಳ ಅಳವಡಿಕೆ, ಮೀಸಲಾದ ಪಾದಚಾರಿ ಮಾರ್ಗಗಳು, ಉತ್ತಮ ಪಾರ್ಕಿಂಗ್ ವ್ಯವಸ್ಥೆ, ಸುಧಾರಿತ ಬೆಳಕು, ಸುಗಮ ಪ್ರವೇಶ, ಕೆಫಟೇರಿಯಾ, ವೇದಿಕೆಗಳು, ವಿಶ್ರಾಂತಿ ಕೊಠಡಿಗಳು ಮತ್ತು ಕಚೇರಿಗಳು, ಅಂಗವಿಕಲರಿಗೆ ವಿಶೇಷ ಸೌಕರ್ಯಗಳು, ಉತ್ತಮ ಪೀಠೋಪಕರಣಗಳನ್ನು ಅಳವಡಿಸಲಾಗುವುದು ಸೇರಿ ವಿವಿಧ ಅಭಿವೃದ್ಧಿ ಕಾಮಗಾರಿ ನಡೆಯಲಿದೆ ಎಂದು ಸಂಸದ ಕಾರ್ಯಾಲಯದಿಂದ ಮಾಹಿತಿ ನೀಡಲಾಗಿದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ