Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಸ್ಕಿ ; ಬೂತ್ ಮಟ್ಟದ ಸಭೆ ಹಾಗೂ ಗ್ಯಾರಂಟಿ ಕಾರ್ಡ್ ವಿತರಣೆ





ಸುದ್ದಿಮೂಲ ವಾರ್ತೆ

ಮಸ್ಕಿ ಏ.೦೫ :ಕಾಂಗ್ರೆಸ್ ಪಕ್ಷದ ವತಿಯಿಂದ ಘೋಷಣೆ ಮಾಡಲಾಗಿರುವ ಗೃಹಲಕ್ಷ್ಮಿ, ಗೃಹಜ್ಯೋತಿ ಮತ್ತು ಅನ್ನಭಾಗ್ಯ ಯೋಜನೆಯನ್ನು 2023ರ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬಂದ ನಂತರ ಜಾರಿಗೆ ತರಲಾಗುತ್ತದೆ ಎಂದು ಶಾಸಕ ಬಸನಗೌಡ ತುರುವಿಹಾಳ್‌ ತಿಳಿಸಿದರು.


ಪಟ್ಟಣದ 3 ಮತ್ತು 4ನೇ ವಾರ್ಡಿನಲ್ಲಿ ಭೂತ ಮಟ್ಟದ ಸಭೆ ಹಾಗೂ ಕಾಂಗ್ರೆಸ್ ಪಕ್ಷದ  ಯೋಜನೆಗಳ ಗ್ಯಾರಂಟಿ ಕಾರ್ಡ್ ವಿತರಣೆಗೆ ಚಾಲನೆ ನೀಡಿದ ಮಾತನಾಡಿದ ಅವರು ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಭಿಗಳನ್ನಾಗಿ ಮಾಡಬೇಕು ಎಂಬ ಉದ್ದೇಶದಿಂದ ಪ್ರತಿ ತಿಂಗಳು 2 ಸಾವಿರ ರೂಗಳನ್ನು ಕುಟುಂಬದ ಮುಖ್ಯಸ್ಥೆಯ ಖಾತೆಗೆ ಜಮಾ ಮಾಡಲಾಗುತ್ತದೆ ಎಂದರು.


ಬಡವರು ಮತ್ತು ಹಿಂದುಳಿದ ವರ್ಗದವರಿಗೆ ಮೂಲಸೌಕರ್ಯ ಒದಗಿಸುವ ಸಲುವಾಗಿ ಗೃಹಜ್ಯೋತಿ ಯೋಜನೆಯನ್ನು ಚುನಾವಣೆಗೂ ಮುನ್ನಾ ಘೋಷಿಸಲಾಗಿದ್ದು 200 ಯೂನಿಟ್ ವಿದ್ಯುತ್ ಅನ್ನು ಉಚಿತವಾಗಿ ನೀಡಲಾಗುತ್ತದೆ ಇದರ ಜತೆಗೆ ಸಿದ್ದರಾಮಯ್ಯನವರ ಅನ್ನಭಾಗ್ಯ ಯೋಜನೆಯನ್ನು ಮುಂದುವರೆಸಲಿದ್ದು ತಲಾ 10 ಕೆಜಿ ಅಕ್ಕಿ ನೀಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.


ಬಿಜೆಪಿಯವರು ಅಪಪ್ರಚಾರಕ್ಕೆ ಜನತೆ ಕಿವಿಗೊಡಬಾರದು ಎಂದು ಮನವಿ ಮಾಡಿದರು. ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಈಗಾಗಲೇ ಘೋಷಣೆ ಮಾಡಲಾಗಿರುವ ಯೋಜನೆಗಳನ್ನು ಅಥಾವತ್ತಾಗಿ ಜಾರಿ ಮಾಡುವುದರ ಜತೆಗೆ ಜನತೆಗೆ ಉಪಯುಕ್ತವಾದ ಇನ್ನು ಹಲವು ಕಾರ್ಯಕ್ರಮಗಳನ್ನು ಜಾರಿಗೆ ತರಲಾಗುತ್ತದೆ ಎಂದು ಭರವಸೆ ನೀಡಿದರು.


ಕಾಂಗ್ರೆಸ್ ಪಕ್ಷ ಈ ಹಿಂದೆ ಘೋಷಣೆ ಮಾಡಿದಂತಹ ಎಲ್ಲಾ ಭರವಸೆಗಳನ್ನು ಅಧಿಕಾರದಲ್ಲಿದ್ದಾಗ ಈಡೇರಿಸಿದ್ದೇವೆ ಆದ್ದರಿಂದ ಜನತೆ ಅಪಪ್ರಚಾರಕ್ಕೆ ಒಳಗಾಗಬಾರದು ಎಂಬ ಕಾರಣಕ್ಕಾಗಿ 2023ರ ಚುನಾವಣೆಗೂ ಮುನ್ನ ಘೋಷಣೆ ಮಾಡಿರುವ ಎಲ್ಲಾ ಯೋಜನೆಗಳನ್ನು  ಜಾರಿಗೆ ತರುತ್ತೇವೆ ಎಂಬ ಭರವಸೆಯೊಂದಿಗೆ ಪಕ್ಷದ ವತಿಯಿಂದ ಗ್ಯಾರಂಟಿ ಕಾರ್ಡ್ ವಿತರಿಸಲಾಗುತ್ತಿದೆ ಇದನ್ನು ಅರ್ಥ ಮಾಡಿಕೊಂಡು ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.


ಈ ಸಂದರ್ಶದಲ್ಲಿ ಶಾಸಕರಾದ ಆರ್ ಬಸನಗೌಡ ತುರುವಿಹಾಳ. ಸಿದ್ದಣ್ಣ ಧಣಿ,ಮಲ್ಲಯ್ಯ ಬಳ್ಳಾ, ನಾರಾಯಣಪ್ಪ ಕಾಸ್ಲಿ. ಮಲ್ಲಯ್ಯ ಮುರಾರಿ, ಶಿವರೆಡ್ಡಿ, ಬಸವರಾಜ ಕೊಠಾರಿ ಹಾಗೂ  ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.






Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ