Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಚ್‌.ಡಿ ಕೋಟೆಯಲ್ಲಿ "ನನ್ನ ಮಣ್ಣು ನನ್ನ ದೇಶ"ಕಾರ್ಯಕ್ರಮ

ಸುದ್ದಿಮೂಲ ವಾರ್ತೆ

ಮೈಸೂರು, ಅ.21:ಭಾರತದಲ್ಲಿ ಮಣ್ಣಿಗೆ ಪೂಜ್ಯನೀಯ ಭಾವನೆ ಇದ್ದು, ನಮ್ಮದು ಐಕ್ಯತೆಯ ರಾಷ್ಟ್ರವಾಗಿದೆ ಎಂದು ಎಚ್‌.ಡಿ.ಕೋಟೆ ತಾಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಪಿ.ಧರಣೇಶ್ ಹೇಳಿದರು.

ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ನೆಹರು ಯುವ ಕೇಂದ್ರ,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮೈಸೂರು, ತಾಲ್ಲೂಕು ಪಂಚಾಯತಿ, ಶ್ರೀ ಆದಿಚುಂಚನಗಿರಿ ಪ್ರಥಮ ದರ್ಜೆ ಕಾಲೇಜು, ರಾಷ್ಟ್ರೀಯ ಸೇವಾ ಯೋಜನೆ ಘಟಕ ಹೆಚ್.ಡಿ.ಕೋಟೆ ಸಹಯೋಗದೊಂದಿಗೆ ತಾಲ್ಲೂಕು ಮಟ್ಟದ 'ನನ್ನ ಮಣ್ಣು ನನ್ನ ದೇಶ' ಅಮೃತ ಕಳಶ ಯಾತ್ರೆ, ಮಣ್ಣಿಗೆ ನಮನ ವೀರರಿಗೆ ವಂದನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ದೇಶದ 75ನೇ ಸ್ವಾತಂತ್ರ್ಯೋತ್ಸವ ಅಂಗವಾಗಿ ಹುತಾತ್ಮ ವೀರಯೋಧರಿಗೆ ಗೌರವ ಸಲ್ಲಿಸಲು ದೆಹಲಿಯ ಇಂಡಿಯಾ ಗೇಟ್ ನ ಕರ್ತವ್ಯ ಪಥದಲ್ಲಿ ಅಮೃತವಾಟಿಕ ಉದ್ಯಾನವನ ಸ್ಮಾರಕ ಅಭಿವೃದ್ಧಿ ಪಡಿಸಲಾಗುತ್ತದೆ. ಇದು ದೇಶದ ಜನರ ಸಂಸ್ಕೃತಿ, ಪರಂಪರೆ ಹಾಗೂ ಸಾಧನೆಗಳ ಭವ್ಯ ಇತಿಹಾಸವನ್ನು ಸ್ಮರಿಸಲು ಯುವ ಪೀಳಿಗೆಗೆ ನೆರವಾಗುತ್ತದೆ ಎಂದು ತಿಳಿಸಿದರು.

ನಂತರ ವೇದಿಕೆ ಕಾರ್ಯಕ್ರಮದಲ್ಲಿ ತಾಲ್ಲೂಕಿನ ಅಮೃತ ಕಳಸವನ್ನು ಕಾರ್ಯನಿರ್ವಾಹಕ ಅಧಿಕಾರಿಗಳು ನೆಹರು ಯುವ ಕೇಂದ್ರದ ಸ್ವಯಂ ಸೇವಕರಿಗೆ ಹಸ್ತಾಂತರಿಸಿದರು. ತಾಲ್ಲೂಕಿನ ನಿವೃತ್ತ ಯೋಧ ಸುರೇಶ್, ಯೋಧ ನವೀನ್ ಕುಮಾರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮಕ್ಕೂ ಮುನ್ನ ಆದಿಚುಂಚನಗಿರಿ ಪ್ರಥಮ ದರ್ಜೆ ಕಾಲೇಜಿನಿಂದ ತಾಲ್ಲೂಕು ಪಂಚಾಯಿತಿವರೆಗೆ ನನ್ನ ಮಣ್ಣು ನನ್ನ ದೇಶ, ಮಣ್ಣನ್ನು ರಕ್ಷಿಸಿ ಎಂಬ ಘೋಷ ವಾಕ್ಯಗಳನ್ನು ಕೂಗುತ್ತಾ ಕಾಲ್ನಡಿಗೆ ಜಾಥಾ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ತಾಲ್ಲೂಕು ಯೋಜನಾಧಿಕಾರಿ ರಂಗಸ್ವಾಮಿ , ಗ್ರಾಮೀಣ ಉದ್ಯೋಗ ಖಾತ್ರಿ ಸಹಾಯಕ ನಿರ್ದೇಶಕರಾದ ರಘುನಾಥ್ ಕೆ.ಎಂ, ಆದಿಚುಂಚನಗಿರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಜಿ.ಎನ್.ವೆಂಕಟೇಶ್, ಎನ್.ಎಸ್.ಎಸ್. ಸಂಯೋಜಕರಾದ ಎಮ್.ಆರ್.ರಾಮಚಂದ್ರ, ನೆಹರು ಯುವ ಕೇಂದ್ರದ ಸ್ವಯಂ ಸೇವಕ ಲಕ್ಷ್ಮೀಕಾಂತ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ತಾಲ್ಲೂಕು ಪಂಚಾಯಿತಿ ಸಿಬ್ಬಂದಿ ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ