Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೈಸೂರು ಮೂಲದ ಯೋಧ ಹುತಾತ್ಮ

ಸುದ್ದಿಮೂಲ ವಾರ್ತೆ

ಮೈಸೂರು,ನ.23:ಜಮ್ಮು ಕಾಶ್ಮೀರದ ರಜೌರಿಯಲ್ಲಿ ಉಗ್ರರ ಜೊತೆಗೆ ಗುಂಡಿನ ಚಕಮಕಿ ವೇಳೆ ಮೈಸೂರು ಮೂಲದ ಕನ್ನಡಿಗ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ (28) ಸೇರಿದಂತೆ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ.

ಮಂಗಳೂರಿನ ಎಂಆರ್ ಪಿಎಲ್ ಸಂಸ್ಥೆಯಲ್ಲಿ ಎಂಡಿ ಆಗಿದ್ದ ವೆಂಕಟೇಶ್ ಅವರ ಏಕೈಕ ಪುತ್ರ ಪ್ರಾಂಜಲ್ ಮಂಗಳೂರು, ಬೆಂಗಳೂರಿನಲ್ಲಿ ಶಿಕ್ಷಣ ಪೂರೈಸಿ ಸೇನೆ ಸೇರಿದ್ದರು. ಕ್ಯಾಪ್ಟನ್ ಪ್ರಾಂಜಲ್ 63 ರಾಷ್ಟ್ರೀಯ ರೈಫಲ್ಸ್ ಅನ್ನು ಲೀಡ್ ಮಾಡುತ್ತಿದ್ದರು. ಈ ನಡುವೆ ಉಗ್ರರ ಅಡಗುತಾಣಕ್ಕೆ ದಾಳಿ ನಡೆಸಿದ್ದಾಗ ಪ್ರತಿದಾಳಿಗೆ ಸಾವನ್ನಪ್ಪಿದ್ದಾರೆ.

 

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಕಾಲಕೋಟ್‌ ಎಂಬಲ್ಲಿ ನಡೆದ ಉಗ್ರರು ಹಾಗೂ ಸೇನೆ, ಪೊಲೀಸ್‌ ಸಿಬ್ಬಂದಿ ನಡುವಿನ ಗುಂಡಿನ ಕಾಳಗ ನಡೆಯಿತು. ಪ್ರಾಂಜಲ್‌ ವೆಂಕಟೇಶ್‌ ಅವರೊಂದಿಗೆ ಇನ್ನೊಬ್ಬರು ಸೇನಾಧಿಕಾರಿ ಹಾಗೂ ಇಬ್ಬರು ಸೈನಿಕರು ಪ್ರಾಣ ಕಳೆದುಕೊಂಡಿದ್ದಾರೆ. ನಾಲ್ವರು ಹುತಾತ್ಮರಾದ ಹಿನ್ನೆಲೆಯಲ್ಲಿ ಉಗ್ರರನ್ನು ಸೆದೆಬಡಿಯಲು ಸೇನಾ ಪಡೆ ಹಾಗೂ ಪೊಲೀಸ್‌ ಪಡೆಗಳು ಕಾಲಕೋಟ್‌ ಅರಣ್ಯ ಪ್ರದೇಶದಲ್ಲಿ ಕಾರ್ಯಾಚರಣೆ ತೀವ್ರಗೊಳಿಸಿವೆ.

 

ಕಾಲಕೋಟ್‌ ಸಮೀಪದ ಪಿರ್‌ ಪಂಜಾಲ್‌ ದಟ್ಟಾರಣ್ಯ ಪ್ರದೇಶದಲ್ಲಿ ಉಗ್ರರು ಸೇರಿಕೊಂಡಿರುವ ಮಾಹಿತಿ ಹಿನ್ನೆಲೆಯಲ್ಲಿ ಸೇನಾ ಪಡೆ ಆ ಪ್ರದೇಶದಲ್ಲಿ ಕೂಂಬಿಂಗ್‌ ತೀವ್ರಗೊಳಿಸಿದ್ದವು. ಜಮ್ಮು ಮತ್ತು ಕಾಶ್ಮೀರದ ಪೊಲೀಸ್‌ ಪಡೆಗಳು ಸೇನಾ ಬೆಂಬಲಕ್ಕೆ ನಿಂತಿದ್ದರು. ಬುಧವಾರ ಸಂಜೆ ವೇಳೆ ಖಚಿತ ಮಾಹಿತಿ ಮೇರೆಗೆ ಸೇನಾ ಸಿಬ್ಬಂದಿ ದಾಳಿ ನಡೆಸಿದ್ದವು. ಈ ವೇಳೆ ಉಗ್ರರು ಹಾಗೂ ಸೇನಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿತ್ತು. ಉಗ್ರರಿದ್ದ ನಿಖರ ಮಾಹಿತಿ ಮೇರೆಗೆ ದಾಳಿ ಮಾಡಿದಾಗ ಅತ್ತಲಿಂದಲೂ ಗುಂಡಿನ ದಾಳಿ ಮಾಡಲಾಗಿತ್ತು. ಸೇನಾ ತಂಡ ಮುನ್ನುಗ್ಗುವಾಗ ಉಗ್ರರು ದಾಳಿ ನಡೆಸಿದ್ದಾರೆ.

ಇದೇ ಪ್ರದೇಶದಲ್ಲಿ ಕೆಲ ತಿಂಗಳಿನಿಂದ ಕೆಲಸ ಮಾಡುತ್ತಿದ್ದ ಕರ್ನಾಟಕದ ಪ್ರಾಂಜಲ್ ವೆಂಕಟೇಶ್‌ ಕೂಡ ಇದ್ದರು. ಕೂಡಲೇ ಹುತಾತ್ಮರಾದವರ ದೇಹಗಳನ್ನು ಸೇನಾ ಶಿಬಿರಕ್ಕೆ ತರಲಾಯಿತು.

ಪ್ರಾಂಜಲ್ ಮಂಗಳೂರಿನಲ್ಲಿಯೇ ಹುಟ್ಟಿ ಬಾಲ್ಯ ಕಳೆದು ಬಳಿಕ ಭಾರತೀಯ ಸೇನಾಪಡೆ ಸೇರಿ ಕರ್ತವ್ಯ ನಿರ್ವಹಿಸುತ್ತಿದ್ದರು. ಪ್ರಾಂಜಲ್‌ ಮಂಗಳೂರಿನ ಎಂಆರ್ ಪಿಎಲ್ ನಿವೃತ್ತ ಎಂಡಿ ವೆಂಕಟೇಶ್ ಹಾಗೂ ಅನುರಾಧ ದಂಪತಿಯ ಏಕೈಕ ಪುತ್ರ. ಎಂಆರ್ ಪಿಎಲ್ ಡೆಲ್ಲಿ ಸ್ಕೂಲ್‌ನಲ್ಲಿ ಎಲ್‌ಕೆಜಿಯಿಂದ 10ನೇ ತರಗತಿಯವರೆಗೆ ವಿದ್ಯಾಭ್ಯಾಸ ಪಡೆದ ಮಂಗಳೂರು ನಗರದ ಖಾಸಗಿ ಕಾಲೇಜಿನಲ್ಲಿ ಪಿಯುಸಿ ಶಿಕ್ಷಣ ಪಡೆದಿದ್ದರು. ಬಳಿಕ ಮಧ್ಯಪ್ರದೇಶದ ಮಿಲಿಟರಿ ಕಾಲೇಜ್ ಆಫ್ ಟೆಲಿಕಮ್ಯುನಿಕೇಷನ್‌ನಲ್ಲಿ ಇಂಜಿನಿಯರಿಂಗ್ ಪದವಿ ಪಡೆದು ಮಿಲಿಟರಿಗೆ ಸೇರಿದ್ದರು.

2 ವರ್ಷಗಳ ಹಿಂದಷ್ಟೇ ಮದುವೆ

.ಪ್ರಾಂಜಲ್ ಸಾವಿನ ಹಿನ್ನೆಲೆಯಲ್ಲಿ ಎಂಆರ್‌ಪಿಎಲ್ ಡೆಲ್ಲಿ ಶಾಲೆಗೆ ಗುರುವಾರ ರಜೆ ಘೋಷಿಸಲಾಗಿದೆ. ತಂದೆ ವೆಂಕಟೇಶ್ ಮೇ.31ರಂದು ಎಂಆರ್‌ಪಿಎಲ್‌ನ ಎಂಡಿ ಪದವಿಯಿಂದ ನಿವೃತ್ತರಾಗಿದ್ದರು. ಇವರ ನಿವೃತ್ತಿ ಸಮಾರಂಭಕ್ಕೆ ಪ್ರಾಂಜಲ್ ಆಗಮಿಸಿದ್ದರು. ಸದ್ಯ ವೆಂಕಟೇಶ್ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಎರಡು ವರ್ಷಗಳ ಹಿಂದಷ್ಟೇ ವಿವಾಹವಾಗಿದ್ದ ಪ್ರಾಂಜಲ್ ಪತ್ನಿ ಚೆನ್ನೈ ಐಐಟಿಯಲ್ಲಿ ಎಂಟೆಕ್ ಮಾಡುತ್ತಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ