Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೈಸೂರು ರಸ್ತೆ ಅಪಘಾತ : ಮೃತರ ಸಂಖ್ಯೆ 10ಕ್ಕೆ ಏರಿಕೆ 

 
ಮೈಸೂರು, ಜೂನ್. 02: ಕೊಳ್ಳೇಗಾಲ ಟಿ.ನರಸೀಪುರ ಮುಖ್ಯ ರಸ್ತೆಯಲ್ಲಿ ಕಳೆದ ಸೋಮವಾರ ನಡೆದಿದ್ದ ರಸ್ತೆ

ಅಪಘಾತದಲ್ಲಿ ಬಳ್ಳಾರಿ ಸಮೀಪದ ಸಂಗನಕಲ್ಲು ಗ್ರಾಮದ ಒಂಭತ್ತು ಜನರು ಸ್ಥಳದಲ್ಲೇ ಮೃತಪಟ್ಟ ಘಟನೆಗೆ ಸಂಬAಧಿಸಿದAತೆ ಮತ್ತೋರ್ವ ಶುಕ್ರವಾರ ಮೃತಪಟ್ಟಿದ್ದು, ಇನ್ನಿಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೃತನ ಹೆಸರು ಶಶಿಕುಮಾರ್. ಶುಕ್ರವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಕೆಆರ್ ಆಸ್ಪತ್ರೆಯ ವೈದ್ಯರು ಶಶಿಕುಮಾರ್ ಮೃತಪಟ್ಟಿರುವುದಾಗಿ ಘೋಷಣೆ ಮಾಡಿದರು. ಈ ಮೂಲಕ ಶೋಕದ ಮಡುವಿನಲ್ಲಿದ್ದ ಸಂಗನಕಲ್ಲು ಗ್ರಾಮದಲ್ಲಿ ಮತ್ತಷ್ಟು ಶೋಕ ತುಂಬಿದೆ. ಈ ಅಪಘಾತದಲ್ಲಿ ಒಟ್ಟು ಮೃತರ ಸಂಖ್ಯೆ 10 ಆಗಿದ್ದು, ಇನ್ನೋವಾ ಕಾರಿನ ಚಾಲಕನನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಸಂಗನಕಲ್ಲು ಗ್ರಾಮದ ಮೂರು ಕುಟುಂಬಗಳು ಮೇ 27 ರಂದು ಬಳ್ಳಾರಿಯಿಂದ ಮೈಸೂರಿಗೆ ರೈಲಲ್ಲಿ ಪ್ರಯಾಣಿಸಿ, ಪ್ರವಾಸಿತಾಣಗಳು ಮತ್ತು ದೇವಸ್ಥಾನಗಳನ್ನು ವೀಕ್ಷಣೆ ಮಾಡುವ ಯೋಜನೆಯನ್ನು ರೂಪಿಸಿದ್ದರು.

ಮೈಸೂರು ಪಟ್ಟಣದಲ್ಲಿ ಇನ್ನೋವಾ ಕಾರನ್ನು ಬಾಡಿಕೆ ಪಡೆದಿದ್ದ ಇವರು ಸೋಮವಾರ ಮಲೈಮಹದೇಶ್ವರ ಬೆಟ್ಟಕ್ಕೆ ಹೋಗಿ ಹಿಂದಿರುಗುತ್ತಿದ್ದಾಗ ಪಿಂಜರಪೋಲ್ ಬಳಿ ರಸ್ತೆ ತಿರುವಿನಲ್ಲಿ ತೀವ್ರ ವೇಗದಲ್ಲಿದ್ದಾಗ ಎದುರಿಗೆ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಕಾರಣ ಕಾರಿನಲ್ಲಿದ್ದ

ಒಂಭತ್ತು ಜನರು ಸ್ಥಳದಲ್ಲೇ ಮೃತಪಟ್ಟು, ಮೂವರು ತೀವ್ರವಾಗಿ ಗಾಯಗೊಂಡಿದದರು. ಈ ಪೈಕಿ ಓರ್ವ ಮೃತಪಟ್ಟಿದ್ದು, ಇನ್ನಿಬ್ಬರು ಕೆಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ