Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚಿರತೆ ಸೆರೆಗೆ ಮೈಸೂರು ಟಾಸ್ಕ್ ಫೋರ್ಸ್

ಸುದ್ದಿಮೂಲ ವಾರ್ತೆ

ಬೆಂಗಳೂರು, ಅ, 31 : ಬೆಂಗಳೂರಿನ ಬೀದಿಯಲ್ಲಿ ರಾಜಾರೋಷವಾಗಿ ಓಡಾಡುತ್ತಿರುವ ಬೆಂಗಳೂರು ಚಿರತೆ ಸೆರೆಗೆ ಮೈಸೂರಿನ ಟಾಸ್ಕ್‌ ಫೋರ್ಸ್‌ ತಂಡ ಕಾರ್ಯನಿರತವಾಗಿದೆ. ಈಗಾಗಲೇ ಹಲವು ಕಡೆ ಚಿರತೆಗಳನ್ನು ಹಿಡಿದು ಪರಿಣಿತರಾಗಿರುವ ಸಿಬ್ಬಂದಿ ಚಿರತೆ ಕಾರ್ಯಾಚರಣೆ ನಡೆಸಲಿದ್ದಾರೆ. ಜತೆಗೆ ಬನ್ನೇರುಘಟ್ಟದಿಂದ ಬಯೋಲಾಜಿಕಲ್ ಪಾರ್ಕ್‌ನಿಂದ ವೈದ್ಯಾಧಿಕಾರಿ ತಂಡವು ಆಗಮಿಸಿದೆ.

ಕೂಡ್ಲು- ಸಿಂಗಸಂದ್ರ ಬಳಿಯ ಕೃಷ್ಣಾರೆಡ್ಡಿ ಇಂಡಸ್ಟ್ರಿಯಲ್ ಏರಿಯಾದಲ್ಲಿ ಸೋಮವಾರ ತಡರಾತ್ರಿ ಚಿರತೆ ಕಾಣಿಸಿಕೊಂಡಿದೆ. ಪರಪ್ಪನ ಅಗ್ರಹಾರ ಲಾ ಆ್ಯಂಡ್ ಆರ್ಡರ್ ಪೊಲೀಸ್ ನೈಟ್ ಬೀಟ್ ಮಾಡುವಾಗ ಚಿರತೆ ಓಡಾಡಿದೆ. ಖಾಲಿ ಬಿಲ್ಡಿಂಗ್ ಮುಂಭಾಗದಲ್ಲಿ ಚಿರತೆ ಓಡಾಟ ಕಂಡು ಪೊಲೀಸರು ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಬಿಲ್ಡಿಂಗ್ ಒಳಗಡೆಯೇ ಚಿರತೆ ಇರುವ ಶಂಕೆ ಇದೆ. ಹೀಗಾಗಿ ಕಗ್ಗಲೀಪುರ, ಆನೇಕಲ್ ಅರಣ್ಯಾಧಿಕಾರಿಗಳಿಂದ 4 ಬೋನ್‌ಗಳನ್ನು ಇಡಲಾಗಿದೆ.

ಕಾರ್ಯಾಚರಣೆ ವೇಳೆ ಜನರು ಓಡಾಡದಂತೆ ಪಾಲು ಬಿದ್ದ ಬಿಲ್ಡಿಂಗ್ ಬಳಿ ಎರಡು ಕಡೆ ರಸ್ತೆ ಬಂದ್ ಮಾಡಲಾಗಿದೆ. ಚಿರತೆ ಸೆರೆ ಕಾರ್ಯಾಚರಣೆ ಸಂದರ್ಭದಲ್ಲಿ ಯಾವುದೇ ಅನಾಹುತ ಸಂಭವಿಸಬಾರದೆಂದು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಅಕ್ಕಪಕ್ಕದಲ್ಲಿ ಪ್ರತಿಷ್ಠಿತ ಐಟಿ ಕಂಪನಿಗಳಿರುವ ಹಿನ್ನೆಲೆಯಲ್ಲಿ ಯಾರು ಹೊರಗೆ ಬಾರದಂತೆ ಸೂಚನೆ ನೀಡಲಾಗಿದೆ. ಪಾಳು ಬಿದ್ದ ಬಿಲ್ಡಿಂಗ್‌ನಲ್ಲಿ ಚಿರತೆ ಓಡಾಟ ನಡೆಸಿರುವ ಹೆಜ್ಜೆ ಗುರುತು ಪತ್ತೆಯಾಗಿದೆ.

ಕೂಡ್ಲು ಭಾಗದ ಜನವಸತಿ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜನರಲ್ಲಿ ಆತಂಕವನ್ನು ಹೆಚ್ಚಿಸಿದ್ದು, ಕೈಯಲ್ಲಿ ದೊಣ್ಣೆ ಹಿಡಿದುಕೊಂಡು ಭಯದಿಂದಲೇ ಓಡಾಡುವಂತಾಗಿದೆ. ಥರ್ಮಲ್‌ ಡ್ರೋನ್‌ ಬಳಕೆ ಮತ್ತೊಂದೆಡೆ ಥರ್ಮಲ್ ಡ್ರೋನ್ ಮೂಲಕ ಚಿರತೆ ಸೆರೆ ಹಿಡಿಯಲು ಮುಂದಾಗಿದ್ದಾರೆ. ಹಗಲು ಮತ್ತು ರಾತ್ರಿ ಪ್ರಾಣಿಗಳ ಚಲನವಲನ ಥರ್ಮಲ್‌ ಡ್ರೋನ್‌ನಿಂದ ತಿಳಿಯಲಿದೆ. ರಾತ್ರಿ ಸಮಯದಲ್ಲೂ ಪ್ರಾಣಿಗಳ ದೃಶ್ಯ ಸೆರೆ ಹಿಡಿಯಬಲ್ಲ ಸಾಮರ್ಥ್ಯವನ್ನು ಈ ಥರ್ಮಲ್‌ ಡ್ರೋನ್‌ ಹೊಂದಿದೆ. ಮೊದಲ ಬಾರಿಗೆ ನಾಗರಹೊಳೆ ರಾಷ್ಟ್ರೀಯ ಉದ್ಯಾನಕ್ಕೆ ಥರ್ಮಲ್ ಡ್ರೋನ್ ಬಳಸಲಾಗಿತ್ತು. ಈವರೆಗೂ ಹುಲಿ, ಚಿರತೆ, ಆನೆಗಳನ್ನು ಸೆರೆ ಹಿಡಿಯಲು ಡ್ರೋನ್ ಬಳಕೆ ಮಾಡಲಾಗಿದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ